ಮಾ.23ರಿಂದ ಏ.6ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೆಂಗಳೂರು, ಮಾರ್ಚ್ 21: ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾರ್ಚ್ 23ರಿಂದ ಏ.6ರವರೆಗೆ ನಡೆಯಲಿದ್ದು, ದಾಖಲೆಯ ಒಟ್ಟು 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಒಟ್ಟು 70,253 ಖಾಸಗಿ ಅಭ್ಯರ್ಥಿಗಳು: ಬಾಲಕರು 18,108, ಬಾಲಕಿಯರು -5091, ಒಟ್ಟು 23,199 ಒಟ್ಟಾರೆ 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ಮೊದಲ ಬಾರಿಗೆ ಎಸ್‌ಎಟಿಎಸ್ ಮೂಲಕ ಆನ್ ಲೈನ್ ನಲ್ಲಿ ಸಂಗ್ರಹಿಸಲಾದ ಮಾಹಿತಿಯಂತೆ ಪರೀಕ್ಷಾರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯಾದ್ಯಂತ 14,385 ಶಾಲೆಗಳಿದ್ದು 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಇವುಗಳ ಪೈಕಿ 1011 ಕ್ಲಸ್ಟರ್ ಕೇಂದ್ರಗಳು ಹಾಗೂ 1807 ನಾನ್ ಕ್ಲಸ್ಟರ್ ಕೇಂದ್ರಗಳಿವೆ. 45ಕೇಂದ್ರಗಳನ್ನು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳಾಗಿ ಗುರುತಿಸಲಾಗಿದೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು, ಜಿಲ್ಲಾ ಮಟ್ಟದ 2043ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. 406 ಡಟ್ ಉಪನ್ಯಾಸಕರು, ಹಿರಿಯ ಉಪನ್ಯಾಸಕರನ್ನು ಜಾಗೃತದಳದ ಸದಸ್ಯರನ್ನಾಗಿ ನೇಮಿಸಲಾಗಿದೆ. 34 ಡಯಟ್ ಪ್ರಾಂಶುಪಾಲರನ್ನು ಕರ್ತವ್ಯ ನಿರ್ವಹಿಸುವ ಜಿಲ್ಲೆಯಲ್ಲಿಯೇ ಜಿಲ್ಲಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

This time 8.54 lakhs students will face SSLC exams

306 ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಉಪನಿರ್ದೇಶಕರು, ಶಿಕ್ಷಣಾಧಿಕಾರಿಗಳು ಹಾಗೂ ಉಪಯೋಜನಾ ಸಮನ್ಯಾಧಿಕಾರಿಗಳ ನೇತೃತ್ವದಲ್ಲಿ ರಚಿಸಿರುವ ಜಿಲ್ಲಾ ವೀಕ್ಷಣಾ ದಳವು ಕಾರ್ಯನಿರತವಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+