ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ

ಬೆಂಗಳೂರು, ಏಪ್ರಿಲ್ 1: ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

Recommended Video

      ಕರ್ನಾಟಕ: ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಣೆ | Oneindia Kannada

      ರಾಜ್ಯದಲ್ಲಿ ಸುಮಾರು 1.66 ಕೋಟಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ 13.5 ಲಕ್ಷ ಕೋವಿಶೀಲ್ಡ್ , 1.5 ಲಕ್ಷ ಕೋವ್ಯಾಕ್ಸಿನ್ ಸೇರಿದಂತೆ 15 ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಹಂಚಲಾಗಿದೆ ಎಂದು ಹೇಳಿದ್ದಾರೆ.

      ಅರ್ಹ ನಾಗರಿಕರಿಗೆ ತಮ್ಮ ಕೋವಿಡ್ - 19 ಲಸಿಕೆ ಸ್ಥಳವನ್ನು ಕಾಯ್ದಿರಿಸಲು ಆನ್‌ಲೈನ್ ಮತ್ತು ಆಫ್‌ಲೈನ್ ವಿಧಾನಗಳನ್ನು ಸರ್ಕಾರ ರೂಪಿಸಿದೆ. ಆರೋಗ್ಯ ಕಾರ್ಯಕರ್ತರಿಗಾಗಿ ಜನವರಿ 16 ರಂದು ದೇಶಾದ್ಯಂತ ವ್ಯಾಕ್ಸಿನೇಷನ್ ಡ್ರೈವ್ ಅನ್ನು ರೂಪಿಸಲಾಯಿತು.

      Those Above 45 Years Can Get Covid-19 Vaccine From April 1

      ನಂತರ ಫೆಬ್ರವರಿ 2 ರಿಂದ ಮುಂಚೂಣಿ ಕಾರ್ಮಿಕರಿಗೆ ವಿಸ್ತರಿಸಲಾಯಿತು. ಲಸಿಕೆ ನೀಡುವ ಮುಂದಿನ ಹಂತವು ಮಾರ್ಚ್ 1 ರಂದು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ನಿರ್ದಿಷ್ಟ ಸಹ-ಅಸ್ವಸ್ಥರಿಗೆ ಪ್ರಾರಂಭವಾಯಿತು.

      ಲಸಿಕೆಗೆ ಅರ್ಹರಾದ ನಾಗರಿಕರು ಕೋ-ವಿನ್ ವೆಬ್‌ಸೈಟ್ ಅಥವಾ ಆಂಡ್ರಾಯ್ಡ್ ಮತ್ತು ಐಒಎಸ್‌ಗಾಗಿ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು.

      ರಾಜ್ಯದಲ್ಲಿ ಈವರೆಗೆ 37.20 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 5.62 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 3.42 ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

      60 ವರ್ಷ ಮೇಲ್ಪಟ್ಟವರಲ್ಲಿ 18.95 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45 ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆಗಳನ್ನು ಎದುರಿಸುತ್ತಿರುವವರಲ್ಲಿ 5.98 ಲಕ್ಷ ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

      ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+