ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಎಂದವರೇ ಈಗ ಇಂಡಿಯಾ ಹೆಸರಿಗೆ ಬೆಚ್ಚಿ ಬಿದ್ದಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಸೆ 9: ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, "ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಬಿಜೆಪಿಯವರು ಡ್ರಾಮಾ ಆಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ "INDIA" ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು "ಭಾರತ" ಎಂದು ಹೊಸದಾಗಿ ಹೇಳಲು ಹೊರಟಿದೆ" ಎಂದು ಸಿಎಂ ಲೇವಡಿ ಮಾಡಿದರು.

cm-siddaramaiah

ನಾವು ಭಾರತ್ ಜೋಡೋ ನಡೆಸಿದವರು, ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ. ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

ಭಾರತೀತ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ

ಭಾರತೀತ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ. ಭಾರತೀಯ ಸಂವಿಧಾನ ನಮ್ಮ ಕೈಯಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ. ಭಾರತೀಯರು ಭಯಮುಕ್ತರಾಗಿ ಅಭಿವೃದ್ಧಿ ಭಾರತವನ್ನು ಮುನ್ನಡೆಸಲು ಸನ್ನದ್ಧರಾಗಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

cm-siddaramaiah

ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಭಾರತೀಯ ಜಾತ್ಯತೀತ ಮತ್ತು ಸೌಹಾರ್ದ ಪರಂಪರೆ

"ಭಾರತೀಯ ಜಾತ್ಯತೀತ ಮತ್ತು ಸೌಹಾರ್ದ ಪರಂಪರೆಯನ್ನು ಕಾಪಾಡಿಕೊಂಡರೆ ಮಾತ್ರ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗಲು ಸಾಧ್ಯ. ಭಾರತದ ಬಹುತ್ವ ಸಂಸ್ಕೃತಿ ಕಾಂಗ್ರೆಸ್ ಕೈಯಲ್ಲಿ ಸುಭದ್ರವಾಗಿದೆ, ಭಾರತೀಯರು ನಮ್ಮ ರಾಜ್ಯದಲ್ಲಿ ಭಯ ಮುಕ್ತರಾಗಿ ಅಭಿವೃದ್ಧಿಯ ದಿಕ್ಕಿಗೆ ಬಹುತ್ವದ ಭಾರತವನ್ನು ಮುನ್ನಡೆಸಬೇಕು. ಪಕ್ಷದ ಸಿದ್ಧಾಂತವನ್ನು, ತತ್ವವನ್ನು, ಹೋರಾಟದ ಪರಂಪರೆಯನ್ನು ನಾಸಿರ್ ಹುಸೇನ್ ಅವರು ರಾಜ್ಯಸಭೆಯಲ್ಲಿ ಸಮರ್ಥವಾಗಿ ಮಂಡಿಸುತ್ತಿದ್ದಾರೆ" ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್, ಬಿಹಾರ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಶಕೀಲ್ ಅಹಮದ್, ಮಹಾರಾಷ್ಡ್ರ ಕಾಂಗ್ರೆಸ್ ಮುಖಂಡರಾದ ಬಾಬಾ ಸಿದ್ದಿಕಿ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+