Lok Sabha Election 2024 Result: 3 ವಿಧಾನಸಭೆ, 1 ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ
ಬೆಂಗಳೂರು, ಜೂನ್ 05: ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ರಾಜ್ಯದ 28 ಕ್ಷೇತ್ರಗಳಲ್ಲಿ ಪಕ್ಷ ನಿರೀಕ್ಷೆ ಮಾಡಿದಷ್ಟು ಸೀಟುಗಳು ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ.
ಈ ಬಾರಿಯ ಲೋಕಸಭೆ ಚುನಾವಣೆಗೆ ಕರ್ನಾಟಕ ವಿಧಾನ ಸಭೆಯ ಶಾಸಕರು, ವಿಧಾನ ಪರಿಷತ್‌ನ ಸದಸ್ಯರು ಸಹ ಸ್ಪರ್ಧೆ ಮಾಡಿದ್ದರು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಶಾಸಕರನ್ನು ಕಣಕ್ಕಿಳಿಸಿದ್ದವು. ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ (ಹಾವೇರಿ-ಗದಗ), ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ (ಮಂಡ್ಯ), ಇ. ತುಕಾರಾಮ್ (ಬಳ್ಳಾರಿ), ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ (ವಿಧಾನ ಪರಿಷತ್) ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಆದ್ದರಿಂದ ಮೂರು ವಿಧಾನಸಭಾ ಸದಸ್ಯರು, ಒಬ್ಬರು ವಿಧಾನ ಪರಿಷತ್ ಸದಸ್ಯರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನ ಒಬ್ಬರು ಶಾಸಕರು, ಬಿಜೆಪಿಯ ಒಬ್ಬರು ವಿಧಾನ ಪರಿಷತ್ ಸದಸ್ಯರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ವಿಧಾನಸಭೆ ಸದಸ್ಯರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರೆ ಲೋಕಸಭೆ, ವಿಧಾನಸಭೆ ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆದ್ದರಿಂದ ಈಗ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮೂವರು ಶಾಸಕರು, ಒಬ್ಬರು ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಬೇಕು. ಅವರ ಸ್ಥಾನಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ಯಾರು-ಯಾರು ಗೆಲುವು?: ಲೋಕಸಭೆ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಕ್ಷೇತ್ರದಲ್ಲಿ 705538 ಮತಗಳನ್ನು ಪಡೆದು ಕಾಂಗ್ರೆಸ್‌ನ ಆನಂದಸ್ವಾಮಿ ಗಡ್ಡದೇವರಮಠ (662025 ಮತ) ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅವರು ಲೋಕಸಭೆ ಸದಸ್ಯರಾಗಲಿದ್ದು, ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.
ಚನ್ನಪಟ್ಟಣ ಕ್ಷೇತ್ರದ ಹಾಲಿ ಶಾಸಕ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಅವರು 851881 ಮತಗಳನ್ನು ಪಡೆದು ಕಾಂಗ್ರೆಸ್‌ನ ಸ್ಟಾರ್ ಚಂದ್ರು ವಿರುದ್ಧ (567261 ಮತ) ಗೆಲುವು ಸಾಧಿಸಿದ್ದಾರೆ. ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.
ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಇ. ತುಕಾರಾಮ್ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಅವರು 730845 ಮತಗಳನ್ನು ಪಡೆದು, ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ (631853 ಮತ) ಗೆಲುವು ಸಾಧಿಸಿದ್ದಾರೆ. ಈಗ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ, ಬಳಿಕ ಉಪ ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯರಾ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಚುನಾವಣೆಯಲ್ಲಿ ಅವರು 732234 ಮತಗಳನ್ನು ಪಡೆದು ಕಾಂಗ್ರೆಸ್‌ನ ಜಯಪ್ರಕಾಶ ಹೆಗಡೆ (473059 ಮತ) ವಿರುದ್ಧ ಗೆಲುವು ಸಾಧಿಸಿದ್ದಾರೆ. ಈಗ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದ್ದು, ಉಪ ಚುನಾವಣೆ ನಡೆಯಲಿದೆ.
ನಿಯಮದ ಪ್ರಕಾರ ಶಾಸಕರು, ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ 6 ತಿಂಗಳಿನಲ್ಲಿ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
-
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Iran Ceasefire: 2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಇರಾನ್; ಶಾಶ್ವತ ಕದನ ವಿರಾಮದ ಬಗ್ಗೆ ಹೇಳಿದ್ದೇನು












Click it and Unblock the Notifications