ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಬಿಜೆಪಿ ಮೂವರು ಶಾಸಕರು ಪ್ರತ್ಯಕ್ಷ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 14: ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಅವರು ಭಾಗಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಉಪಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ನಿನ್ನೆ ರಾತ್ರಿ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಬಂದಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು ಎಂದು ಹೇಳಿದರು.
ಅನ್ಯ ಪಕ್ಷದ ಶಾಸಕರು ಸಿಎಲ್ ಪಿ ಸಭೆಗೆ ಬಂದಿದ್ದರೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಅವರು ಏಕೆ ನಮ್ಮ ಶಾಸಕಾಂಗ ಸಭೆಗೆ ಬರುತ್ತಾರೆ. ಅವರು ನಮ್ಮ ಪಕ್ಷದ ಶಾಸಕರಲ್ಲ. ಹೀಗಾಗಿ ಅವರು ನಮ್ಮ ಶಾಸಕಾಂಗ ಸಭೆಗೆ ಬಂದಿಲ್ಲ ಎಂದು ತಿಳಿಸಿದರು.
ನಿಮ್ಮ ಮೇಲಿರುವ ಸಿಬಿಐ ವಿಚಾರಣೆ ಹಿಂಪಡೆದ ವಿಚಾರವನ್ನು ಬಿಜೆಪಿ ಸದನದಲ್ಲಿ ಪ್ರಸ್ತಾವನೆ ಮಾಡಲು ತಯಾರಿ ನಡೆಸಿದೆ ಎಂದು ಕೇಳಿದಾಗ "ಪ್ರಸ್ತಾವನೆ ಮಾಡಲಿ, ಕಾನೂನಿದೆ. ಬೇಡ ಎಂದು ಹೇಳಿದವರು ಯಾರು? ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.
ಅಪರಾಧ ತಡೆಗೆ ಗೃಹ ಇಲಾಖೆ ಸಹಯೋಗದಲ್ಲಿ ಕ್ರಮ
ಬೆಂಗಳೂರಿನ ಸ್ವಚ್ಛತೆ, ಮೂಲಭೂತ ಸೌಕರ್ಯ ಅಭಿವೃದ್ಧಿ, ಅಪರಾಧ ತಡೆ ಹಾಗೂ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆ ಉಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತಿ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ, "ಭಾರತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಬೆಂಗಳೂರಿನ ಬಗ್ಗೆ ಬಹಳ ಆಸಕ್ತಿ ಹೊಂದಿದ್ದಾರೆ. ಸ್ವಚ್ಛತೆ ವಿಚಾರದಲ್ಲಿ ಮಂಗಳೂರು, ಬೆಳಗಾವಿ ಬೆಂಗಳೂರಿಗಿಂತ ಉತ್ತಮವಾಗಿವೆ. ಜಯನಗರ, ಚಾಮರಾಜಪೇಟೆ, ಮಲ್ಲೇಶ್ವರಂ ಪ್ರದೇಶಗಳ ಹೊರತಾಗಿ ಬೆಂಗಳೂರು ಯೋಜಿತ ನಗರವಲ್ಲ.
ನಾನು ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 60 ಲಕ್ಷ ಇತ್ತು. ಈಗ 1.40 ಕೋಟಿ ಆಗಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಕುಡಿಯುವ ನೀರು ಪೂರೈಕೆ. ಘನತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು. ಕಸ ತೆಗೆಯುವುದೇ ದೊಡ್ಡ ಸಮಸ್ಯೆ, ದಂಧೆ ಆಗಿದೆ. ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿ ಅಳವಡಿಸಿರುವ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ದೆಹಲಿ, ಹೈದರಾಬಾದ್ ನಲ್ಲಿ ಅಧ್ಯಯನ ಮಾಡಲಾಗಿದೆ. ಇಂಧೋರ್ ಗೆ ತೆರಳಬೇಕಿದೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ.












Click it and Unblock the Notifications