ಮೂರು ಕ್ಷೇತ್ರಗಳಲ್ಲಿ ಗುರುವಾರ ಮತದಾನ

ಬೆಂಗಳೂರು, ಆ.20 : ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಗುರುವಾರ ಮತದಾನ ನಡೆಯಲಿದೆ. ಶಿಕಾರಿಪುರ, ಬಳ್ಳಾರಿ ಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಸಂಸದರಾಗಿ ಆಯ್ಕೆಯಾದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ನಡೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಕಣದಲ್ಲಿದ್ದು, ಜೆಡಿಎಸ್ ಶಿಕಾರಿಪುರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಒಟ್ಟು 1,88,307 ಮತದಾರರಿದ್ದಾರೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಒಟ್ಟು 1,92,615 ಮತದಾರರು ಮತ್ತು ಶಿಕಾರಿಪುರ ಕ್ಷೇತ್ರದಲ್ಲಿ ಒಟ್ಟು ಮತದಾರರು 1,77,055 ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಪಡೆದಿದ್ದಾರೆ.

voting

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಎಲ್ಲಾ ಕಾರ್ಖನೆಗಳ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಬೇಕೆಂದು ಕೈಗಾರಿಕಾ ಇಲಾಖೆ ಎಲ್ಲಾ ಕಾರ್ಖನೆಗಳಿಗೆ ಸೂಚನೆ ನೀಡಿದೆ.

ಆ.21ರ ಗುರುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದ್ದು, ಆ.25ರ ಸೋಮವಾರ ಮತಎಣಿಕೆ ನಡೆಯಲಿದೆ. ಮತದಾನದ ಹಿಂದಿನ ದಿನವಾದ ಇಂದು ಸಂಜೆ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ 9 ಕೋಟಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ
ಶಿಕಾರಿಪುರ
ಬಿ.ವೈ.ರಾಘವೇಂದ್ರ - ಬಿಜೆಪಿ
ಶಾಂತವೀರಪ್ಪ ಗೌಡ - ಕಾಂಗ್ರೆಸ್
ಸಕಲೇಶ್ ಹುಲ್ಮಾರ್ - ಕರ್ನಾಟಕ ಜನತಾ ಪಕ್ಷ

ಬಳ್ಳಾರಿ ಗ್ರಾಮಾಂತರ
ಓಬಳೇಶ್ - ಬಿಜೆಪಿ
ಎನ್.ವೈ.ಗೋಪಾಲಕೃಷ್ಣ - ಕಾಂಗ್ರೆಸ್
ಬಿ.ರಘು - ಪಿರಾಮಿಡ್ ಪಾರ್ಟಿ ಆಫ್ ಇಂಡಿಯಾ
ಜಿ.ಚಂದ್ರಶೇಖರ - ಪಕ್ಷೇತರ
ಬಿ.ರಾಮುಡು - ಪಕ್ಷೇತರ ಸೇರಿ ಒಟ್ಟು 5 ಅಭ್ಯರ್ಥಿಗಳು.

ಚಿಕ್ಕೋಡಿ-ಸದಲಗಾ
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ - ಬಿಜೆಪಿ
ಗಣೇಶ್ ಪ್ರಕಾಶ ಹುಕ್ಕೇರಿ -ಕಾಂಗ್ರೆಸ್
ಬಿ.ವೆಂಕಟೇಶ್ -ಕರುನಾಡ ಪಾರ್ಟಿ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+