430 ಕೇಂದ್ರಗಳಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ!

ಬೆಂಗಳೂರು, ಏಪ್ರಿಲ್ 18: ವೃತ್ತಿಪರ ಕೋರ್ಸ್​ಗಳ ಪ್ರವೇಶ ಪರೀಕ್ಷೆ (ಸಿಇಟಿ) ಏ. 18 ಬುಧವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ.

ಎಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಾಜ್ಯಾದ್ಯಂತ ಬುಧವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ 1,00,077 ವಿದ್ಯಾರ್ಥಿಗಳು ಮತ್ತು 98,568 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,98,639 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಬೆಂಗಳೂರಿನಲ್ಲಿ ಒಟ್ಟು 86 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕಾಗಿ 430 ವೀಕ್ಷಕರು, 860 ಮಂದಿ ವಿಶೇಷ ಜಾಗೃತ ದಳದ ಸದಸ್ಯರು, 430 ಪ್ರಶ್ನೆ ಪತ್ರಿಕೆ ಪಾಲಕರು, 12,440 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 31,360 ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ನಿಯೋಜಿಸಲಾಗಿದೆ.

Three-day CET exams from Today

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ರೀತಿಯ ಕೈಗಡಿಯಾರ ಕಟ್ಟಿಕೊಂಡು, ತೆಗೆದುಕೊಂಡು ಬರುವಂತಿಲ್ಲ. ಜತೆಗೆ ಟ್ಯಾಬ್ಲೆಟ್‌, ಮೊಬೈಲ್‌ ಹಾಗೂ ಕ್ಯಾಲ್ಕುಲೇಟರ್‌ಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತರಲು ನಿರ್ಬಂಧಿಸಲಾಗಿದೆ. ಇನ್ನು ಏಪ್ರಿಲ್ 30ರಂದು ಪಿಯು ಫಲಿತಾಂಶ ಪ್ರಕಟವಾಗಲಿದ್ದು, ಅಂದು ವೆಬ್ ಸೈಟ್‌ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 1 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+