ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಮತ್ತೆ ಮೂರು ದಿನ ಭಾರಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 9: ಮತ್ತೆ ಕರ್ನಾಟಕದಲ್ಲಿ ಮಹಾಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಲೆನಾಡಿನಲ್ಲಿ ಅಡಿಕೆಗೆ ರೋಗ ಬಂದಿವೆ, ಇನ್ನು ಗದ್ದೆಗಳಲ್ಲಿರುವ ಭತ್ತ, ರಾಗಿ ಸೇರಿದಂತೆ ಬೆಳೆ ಸಂಪೂರ್ಣವಾಗಿ ನೆಲಕಚ್ಚಿದೆ. ಹೊಟ್ಟೆಪಾಡಿಗೇನಪ್ಪಾ ಮಾಡುವುದು ಎಂದು ರೈರು ಕಂಗಾಲಾಗಿದ್ದಾರೆ, ಇನ್ನು ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮನೆಗಳು ಕೂಡ ಸಂಪೂರ್ಣ ಜಲಾವೃತವಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಮಳೆಯ ರೆಡ್ ಅಲರ್ಟ್, ಕರ್ನಾಟಕಕ್ಕೂ ಸಂಕಷ್ಟಮಹಾರಾಷ್ಟ್ರದಲ್ಲಿ ಮಳೆಯ ರೆಡ್ ಅಲರ್ಟ್, ಕರ್ನಾಟಕಕ್ಕೂ ಸಂಕಷ್ಟ

ತಲಕಾವೇರಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾಗಮಂಡಲ ತ್ರಿವೇಣಿ ಸಂಗಮ ಮತ್ತೆ ಜಲಾವೃತಗೊಂಡಿದೆ. ಭಾಗಮಂಡಲ-ನಾಪೊಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತಲಕಾವೇರಿ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಹೆಚ್ಚಿದೆ. ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ.

ಮಹಾರಾಷ್ಟ್ರದ ಮಳೆ ಕರ್ನಾಟಕದ ಮೇಲೆ ತೀವ್ರ ಪ್ರಭಾವ

ಮಹಾರಾಷ್ಟ್ರದ ಮಳೆ ಕರ್ನಾಟಕದ ಮೇಲೆ ತೀವ್ರ ಪ್ರಭಾವ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉತ್ತರ ಕರ್ನಾಟಕದ ಭಾಗದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿದ್ದರಿಂದ ಅಲ್ಲಿನ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಪಾಯದ ಮಟ್ಟ ತಲುಪಿದ ಹಿನ್ನೆಲೆಯಲ್ಲಿ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ಯಾವ್ಯಾವ ನದಿ ತುಂಬಿ ಹರಿಯುತ್ತಿದೆ

ಯಾವ್ಯಾವ ನದಿ ತುಂಬಿ ಹರಿಯುತ್ತಿದೆ

ಮಹಾರಾಷ್ಟ್ರದ ಕೃಷ್ಣ, ದೂದ್‌ ಗಂಗಾ, ವೇದಗಂಗಾ ನದಿಗಳು ಅಪಾಯದ ಮಟ್ಟ ತಲುಪಿವೆ. ಹೆಚ್ಚುವರಿ ನೀರು ಹರಿದು ಬರುತ್ತಿರುವುದರಿಂದ ಘಟಪ್ರಭಾ, ಮಲಪ್ರಭಾ, ನವಿಲುತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ.

ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ ಅನಾಹುತ, ಜನರಲ್ಲಿ ಆತಂಕಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ ಅನಾಹುತ, ಜನರಲ್ಲಿ ಆತಂಕ

ಕೊಯ್ನಾದಿಂದ ಕೃಷ್ಣ ನದಿಗೆ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಕೊಯ್ನಾದಿಂದ ಕೃಷ್ಣ ನದಿಗೆ 1.70 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಕೊಯ್ನಾ ಜಲಾಶಯದಿಂದ ಕೃಷ್ಣ ನದಿಗೆ 1.70 ಲಕ್ಷ ಕ್ಯುಸೆಕ್‌ ನೀರು ಹೊರಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಜಲಾವೃತಗೊಂಡಿದ್ದವು. ಅಥಣಿ, ಚಿಕ್ಕೋಡಿ, ಗೋಕಾಕ್‌ ತಾಲೂಕುಗಳಲ್ಲಿ ಅತಿ ಹೆಚ್ಚು ಹಾನಿಯಾಗಿದೆ.

ಚಿಕ್ಕಮಗಳೂರಿನಲ್ಲೂ ಮಳೆ

ಚಿಕ್ಕಮಗಳೂರಿನಲ್ಲೂ ಮಳೆ

ಚಿಕ್ಕಮಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಮುಂದುವರೆದಿದ್ದು, ಜನರು ತತ್ತರಿಸಿದ್ದಾರೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ದಾರದಹಳ್ಳಿ, ಗೋಣಿಬೀಡು, ಕಳಸ ಕುದುರೆಮುಖ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ಇದ್ದುದರಿಂದ ಸಂತ್ರಸ್ತರನ್ನು ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಮಲೆನಾಡಿನಲ್ಲಿ ಆರ್ಭಟಿಸಿದೆ ಮಳೆ; ಆವರಿಸಿದ ಭೀತಿಮಲೆನಾಡಿನಲ್ಲಿ ಆರ್ಭಟಿಸಿದೆ ಮಳೆ; ಆವರಿಸಿದ ಭೀತಿ

English summary
Three days Rain Alert In Karnataka , Southwest monsoon has been vigorous over Coastal Karnataka and active over Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X