Chitradurga Accident: ಅಯ್ಯೋ ದುರ್ವಿಧಿಯೇ..! ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ ಅಪಘಾತ: ಮೂವರು ಸಾವು!

ಚಿತ್ರದುರ್ಗ ರಸ್ತೆ ಅಪಘಾತ: ರಾಜ್ಯದಲ್ಲಿ ಸರಣಿ ಅಪಘಾರಗಳು ಮುಂದುವರೆದಿದ್ದು, ಯಾದಗಿರಿ ಜಿಲ್ಲೆಯಲ್ಲಿ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಮಂಗಳವಾರ ಬೆಳಗ್ಗಿನ ಜಾವ ಭೀಕರ ರಸ್ತೆ ಅಪಘಾತದಲ್ಲಿ ಐದು ಜನ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹೌದು, ಚಿತ್ರದುರ್ಗ ಜಿಲ್ಲೆಯಲ್ಲಿ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗ್ಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

Chitradurga Accident

ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದ ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟಿದ್ದಾರೆ.

ಕಾರು ಡಿಕ್ಕಿ, ಪಾದಚಾರಿ ಸಾವು!

ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಶಿರಗುಪ್ಪಿ ಗ್ರಾಮದ ಬಳಿ ನಡೆದಿದೆ. ಇನ್ನೂ ಅಪಘಾತದಲ್ಲಿ ಪಾದಚಾರಿ ಸಾವನ್ನಪ್ಪಿದ್ದು, ನಡು ರಸ್ತೆಯಲ್ಲಿಯೇ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಮೃತಪಟ್ಟಿದ್ದಾರೆ.

ಇನ್ನೂ ಕಾರು ಡಿಕ್ಕಿ ಹೊಡೆದ ಪರಿಣಾಯ ಪಾದಕಾರಿ ಸಾವನ್ನಾಪಿದ್ದು, ನಡು ರಸ್ತೆಯಲ್ಲಿಯೇ ಮೃತ ದೇಹವಿಟ್ಟು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಜಿಲ್ಲಾಧಿಕಾರಿ, ತಹಶಿಲ್ದಾರರ ಆಗಮನಕ್ಕೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತದ ಕಾರಣಕ್ಕೆ ಶವವಿಟ್ಟು ಪ್ರತಿಭಟನೆ ನಡೆಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್‌: ಐವರ ಸಾವು

ಯಾದಗಿರಿ ಜಿಲ್ಲೆಯಲ್ಲಿ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಮಂಗಳವಾರ ಬೆಳಗ್ಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐದು ಜನ ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್‌ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ.

ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ಮೃತಪಟ್ಟವರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+