ಕರ್ನಾಟಕದ ಮೂವರು ಮಾಜಿ ಸಿಎಂಗಳು ಸಂಸತ್ ಪ್ರವೇಶ; ಯಾರಿಗೆ ಸಿಗಲಿದೆ ಮಂತ್ರಿ ಭಾಗ್ಯ?
ಬೆಂಗಳೂರು, ಜೂನ್ 05: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ 2024 ರ ಲೋಕಸಭಾ ಚುನಾವಣೆಯಲ್ಲಿ ದೋಸ್ತಿ ಮಾಡಿಕೊಂಡಿತ್ತು. ಆಡಳಿತರೂಢ ಕಾಂಗ್ರೆಸ್ ಸರ್ಕಾರ ರಚಿಸಿರುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರಿಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಹಲವು ಸಮರ್ಥ ನಾಯಕರನ್ನ ಈ ಬಾರಿ ಲೋಕಸಭಾ ಚುನಾವಣಾ ಕಣಕ್ಕಿಳಿಸಿತ್ತು. ಅದರಂತೆ ಈ ಬಾರಿ ಘಟಾನುಘಟಿ ಮೈತ್ರಿ ನಾಯಕರು ಗೆಲುವು ಸಾಧಿಸಿದ್ದಾರೆ.
ಹೌದು, ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದ್ದು, ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ತಂತ್ರಗಾರಿಕೆಯನ್ನ ಹಾಕಿಕೊಂಡಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಅವರನ್ನ ಕಣಕ್ಕಿಳಿಸಿತ್ತು. ಅದರಂತೆ ಈ ಮೂವರು ಮಾಜಿ ಸಿಎಂಗಳು ಭರ್ಜರಿ ಗೆಲುವು ಸಾಧಿಸಿ, ಸಂಸತ್ ಪ್ರವೇಶಿಸುತ್ತಿದ್ದಾರೆ.

ಈ ಬಾರಿ ಬಿಜೆಪಿಗೆ ಬೆಳಗಾವಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರಗಳು ಪ್ರತಿಷ್ಠೆಯಾದ್ರೆ ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದ ದಳಪತಿಗಳಿಗೆ ಅಸ್ತಿತ್ವದ ಪ್ರಶ್ನೆಯಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು ಕಂಡ ದಳಪತಿಗಳು ಈ ಬಾರಿ ಗೆಲ್ಲಲೇ ಬೇಕು ಎಂದು ಪಣ ತೊಟ್ಟು ಬಿಜೆಪಿ ಹೈಕಮಾಂಡ್ ಮುಂದೆ ಟಿಕೆಟ್ ಗೆ ಬೇಡಿಕೆ ಇಟ್ಟಿತ್ತು. ಮೊದಲ ಹಂತದಲ್ಲಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ದಳಪತಿಗಳಿಗೆ ಮಂಡ್ಯ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹಲವು ತಂತ್ರಗಾರಿಕೆಯನ್ನ ನಡೆಸಿ ಕೊನೆಗೆ ಸಕ್ಕರೆ ನಾಡು ಮಂಡ್ಯ ಜನತೆಯ ಮನವನ್ನ ಈ ಬಾರಿ ದಳಪತಿಗಳು ಗಳಿಸಿದ್ದಾರೆ.
ಮೊದಲಿನಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸದ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಮಂಗಳ ಅಂಗಡಿ ಅವರು ಈ ಬಾರಿ ಟಿಕೆಟ್‌ಗಾಗಿ ಬಿಜೆಪಿ ಹೈಕಮಾಂಡ್ ಬಳಿ ಲಾಬಿ ನಡೆಸಿದ್ರು. ಅಲ್ಲದೇ ಹಲವು ಸಮೀಕ್ಷೆಯನ್ನ ನಡೆಸಿರುವ ಬಿಜೆಪಿ ಈ ಬಾರಿ ಮಂಗಳ ಅಂಗಡಿ ಗೆಲುವು ಅನುಮಾನ ಎನ್ನಲಾಗಿತ್ತು. ಹೀಗಾಗಿ ಮಂಗಳ ಅಂಗಡಿಗೆ ಟಿಕೆಟ್ ನೀಡಿದ್ರೆ ಬೆಳಗಾವಿ ಕಾಂಗ್ರೆಸ್ ವಶವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಣಕ್ಕಿಳಿಸಿದ್ದು, ಹಲವು ಸವಾಲುಗಳ ಮಧ್ಯ ಜಗದೀಶ್ ಶೆಟ್ಟರ್ ಅವರು ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸಿ 68,792 ಮತಗಳ ಅಂತರದಲ್ಲಿ ಗೆದ್ದಿದ್ದು, ಸಂಸತ್ ಪ್ರದೇಶಿಸುತ್ತಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿಗ್ಗಾವಿ ಶಾಸಕ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೊಮ್ಮಾಯಿ 7,02,189 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ (6,60,191) ಅವರನ್ನು ಮಣಿಸಿದ್ದಾರೆ.
ಯಾರಿಗೆ ಮಂತ್ರಿ ಭಾಗ್ಯ?
ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಂಸತ್ ಪ್ರವೇಶಿಸುತ್ತಿದ್ದಾರೆ. ಈ ಹಿಂದೆ 28 ಲೋಕಸಭಾ ಕ್ಷೇತ್ರಗಳ ಹಂಚಿಕೆಯ ಸಂದರ್ಭದಲ್ಲೇ ಕುಮಾರಸ್ವಾಮಿ ಜೊತೆಗೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದೆ ಎನ್ ಡಿ ಎ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಿಮಗೆ ಮಂತ್ರಿ ಸ್ಥಾನವನ್ನ ನೀಡುವ ಭರವಸೆಯನ್ನ ಬಿಜೆಪಿ ವರಿಷ್ಠರು ನೀಡಿದ್ದರು ಎನ್ನಲಾಗಿತ್ತು. ಅದರಂತೆ ಈ ಮೂವರು ಮಾಜಿ ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಮಂತ್ರಿ ಭಾಗ್ಯದ ಪಟ್ಟ ಸಿಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications