ಬೆಂಗಳೂರಿನ ಆದಿತ್ಯ ಕಾಮೆಡ್-ಕೆ ಟಾಪರ್!
ಬೆಂಗಳೂರು, ಮೇ 28: ಕಾಮೆಡ್-ಕೆ ನಡೆಸಿದ್ದ 2018ನೇ ಸಾಲಿನ ಯುಜಿಸಿಇಟಿ ಫಲಿತಾಂಶವನ್ನು ಭಾನುವಾರ ಬಿಡುಗಡೆ ಮಾಡಿದೆ. 180 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ 168 ಅಂಕ ಪಡೆಯುವ ಮೂಲಕ ಬೆಂಗಳೂರಿನ ದುರ್ಬಾ ಆದಿತ್ಯ ಮೊದಲ ಸ್ಥಾನ ಪಡೆದಿದ್ದಾರೆ.
ಹೆಚ್ಚಿನ ಅಂಕ ಗಳಿಸಿದ ಟಾಪ್ 10 ರಲ್ಲಿ ಟಾಪ್ 1,5 ಮತ್ತು 6 ನೇ ಸ್ಥಾನವನ್ನು ರಾಜ್ಯದ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. 165 ಅಂಕ ಪಡೆದಿರುವ ನಿಖಿಲ್ ಎಸ್ ಪೈ ಮತ್ತು ಪ್ರತೀಕ್ ಸಂಜಯ್ ಭಿರುದ್ ಕ್ರಮವಾಗಿ ಐದು ಮತ್ತು ಆರನೇ ಸ್ಥಾನ ಪಡೆದಿದ್ದಾರೆ.
ಮೊದಲ 100 ಅಂಕಗಳಿಗೆ ರ್ಯಾಂಕ್ ಗಳ ಪೈಕಿ 42, ಮೊದಲ ಸಾವಿರ ರ್ಯಾಂಕ್ನಲ್ಲಿ 284 ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದಾರೆ. ಉಳಿದ 716 ರ್ಯಾಂಕ್ ಗಳು ವಿವಿಧ ರಾಜ್ಯದ ವಿದ್ಯಾಥಿಗಳ ಪಾಲಾಗಿದೆ.

ಮೇ 13 ರಂದು ದೇಶಾದ್ಯಂತ 137 ನಗರಗಳ 291 ಪರೀಕ್ಷಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಒಟ್ಟಾರೆ 76,414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ರಾಜ್ಯದ 21,899 ಹಾಗೂ ಹೊರ ರಾಜ್ಯದ 40,417 ವಿದ್ಯಾರ್ಥಿಗಳು ಸೇರಿ 62,316 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಮೇ 17ರಂದು ಪ್ರಕಟಿಸಿದ್ದ ತಾತ್ಕಾಲಿಕ ಉತ್ತರಗಳಿಗೆ 77 ವಿದ್ಯಾರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಿದ್ದರು. ಆಕ್ಷೇಪಣೆಗಳಿಗೆ ತಜ್ಞರ ಸಲಹಾ ಸಮಿತಿ ಸ್ಪಷ್ಟನೆ ನೀಡಿ, ಮೇ 25ರಂದು ಅಂತಿಮ ಉತ್ತರಗಳನ್ನು ಪ್ರಕಟಿಸಿದೆ. ಭಾನುವಾರ ರ್ಯಾಂಕ್ ಪಟ್ಟಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ರ್ಯಾಂಕ್ ಕಾರ್ಡ್ಗಾಗಿ www.comedk.orgಗೆ ಭೇಟಿ ನೀಡುವಂತೆ ತಿಳಿಸಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು












Click it and Unblock the Notifications