ಶಾಲಿನಿ ರಜನೀಶ್ ಸೇರಿ ಮೂವರು ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು, ಜನವರಿ 09 : ಡಾ.ಶಾಲಿನಿ ರಜನೀಶ್ ಸೇರಿದಂತೆ ಮೂವರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಸರ್ಕಾರ ಬಡ್ತಿ ನೀಡಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ.

ಕರ್ನಾಟಕ ಸರ್ಕಾರ ಬುಧವಾರ ಈ ಕುರಿತು ಆದೇಶ ಹೊರಡಿಸಿದೆ. ಮೂವರು ಅಧಿಕಾರಿಗಳಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಪ್ರಸ್ತುತ ಕಾರ್ಯ ನಿರ್ವಹಣೆ ಮಾಡುತ್ತಿರುವ ಇಲಾಖೆಗಳಲ್ಲೇ ಮುಂದುವರೆಸಲಾಗಿದೆ.

ನಿಯೋಜನೆಯ ಮೇಲೆ ಕೇಂದ್ರ ಸೇವೆಯಲ್ಲಿರುವ ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಝಾ ಅವರಿಗೆ ಅಪೆಕ್ಸ್ ಸ್ಕೇಲ್‌ಗೆ ಬಡ್ತಿ ನೀಡಲಾಗಿದೆ.

Shalini Rajneesh

ಬಡ್ತಿ ಪಡೆದ ಅಧಿಕಾರಿಗಳು

* ರಾಕೇಶ್ ಸಿಂಗ್ (ಪ್ರಧಾನ ಕಾರ್ಯದರ್ಶಿ ಜಲಸಂಪನ್ಮೂಲ ಇಲಾಖೆ)
* ಜಾವೇದ್ ಅಖ್ತರ್ (ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ)
* ಡಾ. ಶಾಲಿನಿ ರಜನೀಶ್ (ಪ್ರಧಾನ ಕಾರ್ಯದರ್ಶಿ ಯೋಜನೆ ಹಾಗೂ ಕಾರ್ಯಕ್ರಮ ನಿರ್ವಹಣೆ ಇಲಾಖೆ)

ಡಿಜಿ&ಐಜಿಪಿ ಯಾರು? : ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಜನವರಿ 31ರಂದು ನಿವೃತ್ತರಾಗಲಿದ್ದಾರೆ. ಕರ್ನಾಟಕದ ನೂತನ ಡಿಜಿ&ಐಜಿಪಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಸೇವಾ ಹಿರಿತನದ ಆಧಾರದ ಮೇಲೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಎ. ಎಂ. ಪ್ರಸಾದ್, ಸಿಐಡಿ ಡಿಜಿಪಿ ಪ್ರವೀಣ್ ಸೂದ್, ನೇಮಕಾತಿ ವಿಭಾಗದ ಡಿಜಿಪಿ ಪಿ. ಕೆ.ಗರ್ಗ್ ಹೆಸರುಗಳು ಕೇಳಿ ಬರುತ್ತಿವೆ. ಮೂವರಲ್ಲಿ ಪೊಲೀಸ್ ಇಲಾಖೆಯ ಅತ್ಯುನ್ನತ ಹುದ್ದೆ ಯಾರಿಗೆ?.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+