ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜು ಈ ವರ್ಷ ಆರಂಭ

|
Google Oneindia Kannada News

ಬೆಂಗಳೂರು, ಮಾ.10 : ಕರ್ನಾಟಕದಲ್ಲಿ ಈ ಶೈಕ್ಷಣಿಕ ವರ್ಷದಿಂದ ಮೂರು ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, 450 ಸೀಟುಗಳು ಲಭ್ಯವಾಗಲಿವೆ. ಭಾರತೀಯ ವೈದ್ಯಕೀಯ ಮಂಡಳಿ ಕಾಲೇಜುಗಳನ್ನು ಆರಂಭಿಸಲು ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಕಲಬುರಗಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

sharan prakash patil

ಕಲಬುರಗಿ, ಗದಗ ಹಾಗೂ ಕೊಪ್ಪಳದಲ್ಲಿ ವೈದ್ಯಕೀಯ ಕಾಲೇಜು ಕಟ್ಟಡಗಳು ಪೂರ್ಣಗೊಂಡಿದ್ದು ಕಾಲೇಜು ಆರಂಭಿಸಲು ಸಿದ್ಧವಾಗಿವೆ. ಪ್ರತಿ ಕಾಲೇಜಿನಲ್ಲಿ 150 ರಂತೆ ಒಟ್ಟು 450 ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ ಎಂದು ತಿಳಿಸಿದರು. [ರಾಜ್ಯದ ಐದು ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ]

ಕಾರವಾರ, ಕೊಡಗು, ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿವೆ. ಚಾಮರಾಜನಗರದ ಕಾಲೇಜು ಕಾಮಗಾರಿ 2 ತಿಂಗಳ ಹಿಂದೆ ಆರಂಭಗೊಂಡಿದ್ದು, ಈ ಮೂರು ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದರು.

ಕಲಬುರಗಿ, ಗದಗ ಹಾಗೂ ಕೊಪ್ಪಳ ಕಾಲೇಜುಗಳ ಆರಂಭಕ್ಕೆ ಸಮ್ಮತಿ ನೀಡುವ ಸಂಬಂಧ ಭಾರತೀಯ ವೈದ್ಯಕೀಯ ಮಂಡಳಿಗೆ ಪತ್ರ ಬರೆಯಲಾಗಿದೆ. ಒಮ್ಮೆ ತಜ್ಞರ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮಾರ್ಚ್ ಅಂತ್ಯಕ್ಕೆ ಮಂಡಳಿ ಒಪ್ಪಿಗೆ ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.

English summary
Karnataka : Minister for Medical Education Sharan Prakash Patil said, Three medical colleges in state will open for this year and students will get 450 seats. Kalaburagi, Gadag and Koppla college will open this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X