ಲೋಕಸಭೆ ಚುನಾವಣೆಗೆ ದೇವೇಗೌಡ ಕುಟುಂಬದಿಂದ ಮೂವರ ಸ್ಪರ್ಧೆ?

ಬೆಂಗಳೂರು, ಅಕ್ಟೋಬರ್ 03 : ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಕ್ಷ ತಯಾರಿ ನಡೆಸಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದಿಂದ ಮೂವರು 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನುತ್ತಿವೆ ಸದ್ಯದ ವರದಿ.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 2019ರ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ, ಈಗ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ತೃತೀಯ ರಂಗದ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವರು ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಸೀಟುಗಳ ಹಂಚಿಕೆ ಪ್ರಕ್ರಿಯೆ ಸೇರಿದಂತೆ ಉಳಿದವು ಇನ್ನೂ ಅಂತಿಮವಾಗಿಲ್ಲ. ಆದರೆ, ದೇವೇಗೌಡರ ಕುಟುಂಬದಿಂದ ಮೂವರು ಸ್ಪರ್ಧೆ ಮಾಡುವ ಕುರಿತು ಸುದ್ದಿ ಹಬ್ಬಿದೆ.

ಸದ್ಯದ ಸುದ್ದಿಯಂತೆ ಎಚ್.ಡಿ.ದೇವೇಗೌಡ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಅವರು 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ? ಎಂಬ ಮಾಹಿತಿ ಚಿತ್ರಗಳಲ್ಲಿ ನೋಡಿ.....

ಯಾರ-ಯಾರ ಸ್ಪರ್ಧೆ

ಯಾರ-ಯಾರ ಸ್ಪರ್ಧೆ

ಹಾಲಿ ಹಾಸನ ಕ್ಷೇತ್ರದ ಸಂಸದರಾಗಿರುವ ಎಚ್.ಡಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ಯಾವ ಕ್ಷೇತ್ರದಿಂದ ಯಾರ ಸ್ಪರ್ಧೆ?

ಯಾವ ಕ್ಷೇತ್ರದಿಂದ ಯಾರ ಸ್ಪರ್ಧೆ?

ಎಚ್.ಡಿ.ದೇವೇಗೌಡ ಅವರು ಹಾಸನದಿಂದ, ಪ್ರಜ್ವಲ್ ರೇವಣ್ಣ ಅವರು ಮೈಸೂರು-ಕೊಡಗು ಕ್ಷೇತ್ರದಿಂದ, ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಸದ್ಯದ ಮಾಹಿತಿ ಆದರೆ, ಈ ಬಗ್ಗೆ ದೇವೇಗೌಡ ಕುಟುಂಬದ ಯಾರೂ ಸಹ ಹೇಳಿಕೆ ನೀಡಿಲ್ಲ.

ಕಾಂಗ್ರೆಸ್‌ ಜೊತೆ ಹೊಂದಾಣಿಕೆ

ಕಾಂಗ್ರೆಸ್‌ ಜೊತೆ ಹೊಂದಾಣಿಕೆ

ಕಾಂಗ್ರೆಸ್‌ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು 2019ರ ಲೋಕಸಭೆ ಚುನಾವಣೆ ಎದುರಿಸಲಿವೆ. ಸೀಟು ಹಂಚಿಕೆ ಬಗ್ಗೆ ಎರಡೂ ಪಕ್ಷಗಳು ಇನ್ನೂ ಮಾತುಕತೆ ನಡೆಸಿಲ್ಲ. ಮಂಡ್ಯ, ಮೈಸೂರು-ಕೊಡಗು ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಪಕ್ಷಕ್ಕೆ ಬಿಟ್ಟು ಕೊಡಲು ಕಾಂಗ್ರೆಸ್ ಒಪ್ಪಿಗೆ ನೀಡಲಿದೆಯೇ? ಎಂದು ಕಾದು ನೋಡಬೇಕು.

ಮಂಡ್ಯದ ಕುತೂಹಲ

ಮಂಡ್ಯದ ಕುತೂಹಲ

ಮಂಡ್ಯದಿಂದ ಯಾರು ಸ್ಪರ್ಧೆ ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿವೆ. ಮಂಡ್ಯದ 7 ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮಂಡ್ಯದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+