Lok Sabha Election: ಸತತ ಎರಡನೇ ಬಾರಿಗೆ ದೇವೇಗೌಡ ಕುಟುಂಬದಿಂದ ಮೂವರು ಲೋಕಸಭಾ ಚುನಾವಣಾ ಕಣಕ್ಕೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್‌ರ ಕುಟುಂಬದಿಂದ ಸತತ ಎರಡನೇ ಬಾರಿ ಮೂರು ಜನ ಲೋಕಸಭಾ ಚುನಾವಣೆ ಸ್ಪರ್ಧಿಸುತ್ತಿದ್ದರೆ.
ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಭಲ್ಯ ಮೊದಲಿನಿಂದಲೂ ಇದೆ. ಈ ಭಾಗದಲ್ಲಿ ಮತ್ತೊಮ್ಮೆ ಮೂವರು ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಇವರೆಲ್ಲಾ ದೇವೇಗೌಡ್ ಕುಟುಂಬಕ್ಕೆ ಸೇರಿದವರು ಎಂಬುದೇ ವಿಶೇಷ.. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಪಕ್ಷವೇ ಈ ಬಾರಿ ಜೆಡಿಎಸ್‌ಗೆ ಎದುರಾಳಿ. 2019ರಲ್ಲಿ ಎದುರಾಳಿಯಾಗಿದ್ದ ಬಿಜೆಪಿ ಇಂದು ಮೈತ್ರಿ ಪಕ್ಷವಾಗಿದೆ.

ಮೂವರು ಕಣಕ್ಕೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಿಂತು ಸೋತಿದ್ದ ನಿಖಿಲ್ ಕುಮಾರಸ್ವಾಮಿ ಬದಲಿಗೆ, ಈ ಬಾರಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಇನ್ನು ಹಾಸನದ ಹಾಲಿ ಸಂಸದರು ಆಗಿರುವ ಎಚ್‌ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಎರಡನೇ ಬಾರಿಗೆ ಅಖಾಡಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಗ್ರಾಮಂತರದಿಂದ ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲಿದ್ದಾರೆ.
ಇದೇ ಮೊದಲ ಬಾರಿಗೆ ಎಚ್‌ಡಿ ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ರಾಜಕೀಯ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಇವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್‌ಗೆ ಸವಾಲು ಎಸೆಯಲಿದ್ದಾರೆ. ಇವರಿಬ್ಬರ ನಡುವಿನ ಫೈಟ್ ಭಾರೀ ಕುತೂಹಲ ಮುಡಿಸಿದೆ.
ಹಾಸನದಲ್ಲಿ ಗೆಲುವು
ಹಾಸನದಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ 31 ವರ್ಷದ ಶ್ರೇಯಸ್ ಎಂ ಪಾಟಿಲ್‌ರನ್ನು ಕಣಕ್ಕೆ ಇಳಿಸಿದೆ. ಇವರು ಮಾಜಿ ಸಂಸದ ಜಿ ಪುಟ್ಟಸ್ವಾಮಿ ಗೌಡ ಮೊಮ್ಮಗ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶ್ರೇಯಸ್ ಹೊಳೆನರಸಿಪುರದಿಂದ ಕಣಕ್ಕೆ ಇಳಿದಿದ್ದರು. ಆದರೆ ಜೆಡಿಎಸ್‌ನ ಎಚ್‌ಡಿ ರೇವಣ್ಣ ವಿರುದ್ಧ 3152 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈಗ ಇವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ.
ಮಂಡ್ಯ ವಶಕ್ಕೆ ಪಡೆಯಲು ಪ್ಲ್ಯಾನ್?
ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ನ ಭದ್ರ ಕೋಟೆ ಎಂದೇ ಹೇಳಲಾಗುತ್ತಿತ್ತು. ಆದರೆ ಕಳೆದ ಕೆಲವು ಚುನಾವಣೆಗಳಲ್ಲಿ ಬಂದ ಫಲಿತಾಂಶಗಳು ಇದಕ್ಕೆ ವಿರುದ್ಧವಾಗಿವೆ. ಒಕ್ಕಲಿಗರು ಪ್ರಾಭಲ್ಯ ಹೊಂದಿರುವ ಮಂಡ್ಯದಲ್ಲಿ 2019ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಳರಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿದೆ. ಮತ್ತೆ ಈ ಕ್ಷೇತ್ರದಲ್ಲಿ ತನ್ನ ಪಕ್ಷದ ಬಾವುಟ ಹಾರಿಸಲು ಜೆಡಿಎಸ್ ಪ್ಲ್ಯಾನ್ ಮಾಡಿಕೊಂಡಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಈ ಕ್ಷೇತ್ರವನ್ನು ಗೆದ್ದು ಮಂಡ್ಯದಲ್ಲಿ ಬಿಗಿ ಹಿಡಿತ ಸಾಧಿಸುವ ಆಸೆ ಜೆಡಿಎಸ್‌ನ್ನದಾಗಿದೆ.
ಕೋಲಾರದಲ್ಲಿ ಭಾರೀ ಫೈಟ್
ಕೋಲಾರ ಸಹ ಜೆಡಿಎಸ್ ತೆಕ್ಕೆಗೆ ಬಿದ್ದಿದ್ದು, ಈ ಕ್ಷೇತ್ರದಲ್ಲಿ ಎಂ.ಮಲ್ಲೇಶ್ ಬಾಬು ಅವರು ಕಣಕ್ಕೆ ಇಳಿಯಲಿದ್ದಾರೆ. ಇವರು 2023 ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ನಿರಾಸೆ ಅನುಭವಿಸಿದ್ದರು. ಎಂ.ಮಲ್ಲೇಶ್ 2023ರ ಚುನಾವಣೆಯಲ್ಲಿ ಒಟ್ಟು 72581 ಮತಗಳನ್ನು ಪಡೆದು ಸೋಲು ಕಂಡಿದ್ದರು. ಶೇಕಡಾವಾರು ಬಿದ್ದ ಮತಗಳನ್ನು ನೋಡಿದಾಗ ಇವರಿಗೆ ಹಾಗೂ ಜಯ ಸಾಧಿಸಿದ ಅಭ್ಯರ್ಥಿಗೆ ಶೇಕಾಡ ಮೂರರಷ್ಟು ಕಡಿಮೆ ಕಂಡು ಬಂದಿತ್ತು. ಈ ಬಾರಿ ಎಂ.ಮಲ್ಲೇಶ್ ಬಾಬು ಅವರು ಕಾಂಗ್ರೆಸ್‌ನ ಕೆ.ವಿ ಗೌತಮ್ ಅವರ ಸವಾಲು ಎದುರಿಸಲಿದ್ದಾರೆ.

ಕಳೆದ ಬಾರಿಯೂ ದೇವೇಗೌಡ ಕುಟುಂಬದ ಮೂವರು ಲೋಕಸಭಾ ಚುನವಾಣೆಯ ಅಖಾಡದಲ್ಲಿದ್ದರು. ತುಮುಕೂರಿನಿಂದ ಮಾಜಿ ಪ್ರಧಾನಿ ದೇವೇಗೌಡ, ಬಿಜೆಪಿ ಅಭ್ಯರ್ಥಿಯ ವಿರುದ್ಧ ಸೋಲು ಕಂಡಿದ್ದರು. ಇನ್ನು ಸುಮಲತಾ ಅಂಬರೀಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಘಾತ ಅನುಭವಿಸಿದ್ದರು. ಕಳೆದ ಬಾರಿ ಜೆಡಿಎಸ್ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು. ಈ ಬಾರಿ ಈ ಸಂಖ್ಯೆ ಎಷ್ಟಕ್ಕೆ ಏರುತ್ತದೆ ಕಾದು ನೋಡಬೇಕಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications