ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: 3 ತಿಂಗಳ ಹಣ ಈ ದಿನ ಬಿಡುಗಡೆ

ಬೆಂಗಳೂರು,ಮೇ 01: ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತೆ? ಯುಗಾದಿ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ರಾಜ್ಯದ ಲಕ್ಷಾಂತರ ಮಹಿಳೆಯರು ಕಾಯುತ್ತಿದ್ದಾರೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳೆಯರಿಗೆ ಭರವಸೆ ನೀಡಿದ್ದರು. ಇದೀಗ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಮೂರು ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು. ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಹೇಳಿದರು.

Three months of Grihalakshmi money in May Lakshmi Hebbalkar

ಬಿಜೆಪಿ ನಾಯಕರು ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದ ಒಳಗೂ ಹೊರಗೂ ಬೈದರೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆಕೊಟ್ಟು ನಾವು ಶಾಂತಿಯಿಂದ ವರ್ತನೆ ಮಾಡುತ್ತಿದ್ದೇವೆ. ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಅತಿರೇಖವಾಗಿ ವರ್ತಿಸಿದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಮಧ್ಯದಲ್ಲಿ ಬಂದು ಕಪ್ಪುಪಟ್ಟಿ ತೋರಿಸುವುದು ಎಷ್ಟರ ಮಟ್ಟಿಗೆ ಸರಿ. ಮುಂದಿನ ದಿನಗಳಲ್ಲಿ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಮಾಡಿದರೆ, ನಮ್ಮ ಕಾರ್ಯಕರ್ತರನ್ನು ಅವರು ಸುಮ್ಮನೇ ಬಿಡುತ್ತಾರೆಯೇ ಎಂದು ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಇಂಥ ಘಟನೆ ಆದರೂ ಇದಕ್ಕೆ ನೀವೇ (ಮಾಧ್ಯಮದವರು) ಸಾಕ್ಷಿ ಆಗುತ್ತೀರಿ. ಇಂಥ ಘಟನೆಗಳು ಮರುಕಳಿಸಿದರೆ, ನಮ್ಮ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ. ನಮ್ಮ ಕಾರ್ಯಕರ್ತರಿಗೂ ರೋಷಾವೇಷ, ಪಕ್ಷದ ಬಗ್ಗೆ ಅಭಿಮಾನ, ಕಾಳಜಿ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು. ರಾಜ್ಯಾದ್ಯಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳು ಇದ್ದಾರೆ. ನಮ್ಮ ಮುಖ್ಯಮಂತ್ರಿಗಳು ಮಾತನಾಡುವಾಗ ಕಪ್ಪು ಬಟ್ಟೆ ಹಾರಿಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರಿಗೆ ಶೋಭೆ ತರುವುದಿಲ್ಲ ಎಂದರು.‌

ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾಗಿದ್ದು ಆ ಕ್ಷಣದಲ್ಲಿ ಆ ರೀತಿ ಆಗಿರಬಹುದು. ಆ ಸಂದರ್ಭದಲ್ಲಿ ಆದ ಆಕಸ್ಮಿಕ ಘಟನೆ ಇದಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಿದ್ದರಾಮಯ್ಯನವರು ಹಿರಿಯರು, ಅವರು ಅಧಿಕಾರಿಗಳಿಗೆ ಗೌರವ ನೀಡುವ‌ ವಿಷಯದಲ್ಲಿ ತಮ್ಮ ಚೌಕಟ್ಟನ್ನು ಎಂದೂ ಮೀರಿದವರಲ್ಲ. ಆ ಸಂದರ್ಭದಲ್ಲಿ ಅಂಥ ಘಟನೆ ನಡೆಯಬಾರದಿತ್ತು. ಸಿದ್ದರಾಮಯ್ಯನವರಿಗೆ ಇನ್ನೊಂದು ಹೆಸರೇ ಹಿಂದುಳಿದ ವರ್ಗ, ತುಳಿತಕ್ಕೊಳಗಾದವರ ಧ್ವನಿ ಎನ್ನುತ್ತೇವೆ. ಸಿದ್ದರಾಮಯ್ಯನವರ ದೊಡ್ಡ ಗುಣವನ್ನು ಎಲ್ಲರೂ ಹಾಡಿಹೊಗಳುತ್ತಾರೆ. ಆದರೆ, ಆ ಒಂದು ಘಟನೆ ನಡೆಯಬಾರದಿತ್ತು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+