ಸ್ಮಾರ್ಟ್ ಸಿಟಿ ಪ್ರಶಸ್ತಿ 2022; ಕರ್ನಾಟಕದ 3 ಸ್ಮಾರ್ಟ್ ಸಿಟಿಗಳಿಗೆ ಪ್ರಶಸ್ತಿ
ಬೆಂಗಳೂರು, ಸೆಪ್ಟೆಂಬರ್ 03; ಕರ್ನಾಟಕದ 3 ಸ್ಮಾರ್ಟ್ ಸಿಟಿಗಳಿಗೆ 2022ನೇ ಸಾಲಿನ 'ಅತ್ಯುತ್ತಮ ರಾಷ್ಟ್ರೀಯ ಸ್ಮಾರ್ಟ್ ಸಿಟಿ' ಪ್ರಶಸ್ತಿ ಸಿಕ್ಕಿದೆ. ಮೊದಲ ಪ್ರಶಸ್ತಿ ಇಂಧೋರ್‌ಗೆ ಲಭಿಸಿದೆ. ಸೂರತ್ ಮತ್ತು ಆಗ್ರಾ ಎರಡು ಮತ್ತು 3ನೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿವೆ.
ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಈ ಪ್ರಶಸ್ತಿ ಘೋಷಣೆ ಮಾಡಿದೆ. 2022ನೇ ಸಾಲಿನ 'ಅತ್ಯುತ್ತಮ ರಾಷ್ಟ್ರೀಯ ಸ್ಮಾರ್ಟ್ ಸಿಟಿ' ಪ್ರಶಸ್ತಿಗೆ ಕರ್ನಾಟಕದ ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಆಯ್ಕೆಯಾಗಿವೆ.

ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿರುವ ನಗರಗಳ ಪಟ್ಟಿಯನ್ನು ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ. ನಗರ ಪರಿಸರ ವಿಭಾಗದಲ್ಲಿ ಶಿವಮೊಗ್ಗ ನಗರಕ್ಕೆ ಪ್ರಶಸ್ತಿ ಸಿಕ್ಕಿದೆ. ವಲಯ ಸ್ಮಾರ್ಟ್ ಸಿಟಿ ಪ್ರಶಸ್ತಿ (ದಕ್ಷಿಣ ವಲಯ) ಬೆಳಗಾವಿಗೆ ಸಿಕ್ಕಿದೆ.
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ ನವೀನ ಕಲ್ಪನೆ ಪ್ರಶಸ್ತಿ ವಿಭಾಗದಲ್ಲಿ ಆಯ್ಕೆಯಾಗಿದೆ. ಸೆಪ್ಟೆಂಬರ್ 27ರಂದು ಇಂಧೋರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.
ಒಟ್ಟು 66 ಪ್ರಶಸ್ತಿಗಳು; ಉತ್ತಮ ಸ್ಮಾರ್ಟ್ ಸಿಟಿ, ಉತ್ತಮ ಸ್ಮಾರ್ಟ್ ಸಿಟಿ ಹೊಂದಿರುವ ರಾಜ್ಯಗಳು ಹೀಗೆ ಒಟ್ಟು 66 ವಿಭಾಗದಲ್ಲಿ ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಪ್ರಶಸ್ತಿಗಳನ್ನು ನೀಡುತ್ತದೆ. ಉತ್ತಮ ರಾಜ್ಯ ಪ್ರಶಸ್ತಿಯಲ್ಲಿ ಮಧ್ಯ ಪ್ರದೇಶ ಮೊದಲ ಸ್ಥಾನ ಪಡೆದಿದೆ. 2ನೇ ಸ್ಥಾನ ತಮಿಳುನಾಡು ಮತ್ತು 3ನೇ ಸ್ಥಾನವನ್ನು ರಾಜಸ್ಥಾನ ಮತ್ತು ಉತ್ತರ ಪ್ರದೇಶ ಜಂಟಿಯಾಗಿ ಹಂಚಿಕೊಂಡಿವೆ.
ರಾಜ್ಯಗಳು ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳಿಗೆ ಸಹ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇ-ಆಡಳಿತ ಸೇವೆಯಲ್ಲಿ ಉತ್ತಮ ಸರ್ಕಾರದ ವಿಭಾಗದಲ್ಲಿ ಚಂಡೀಗಢ ಮೊದಲ ಸ್ಥಾನವನ್ನು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯಾದ ಸ್ಮಾರ್ಟ್ ಸಿಟಿ ಅಡಿ 100ಕ್ಕೂ ಅಧಿಕ ನಗರಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಪ್ರತಿ ವರ್ಷ ವಿವಿಧ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಸ್ಮಾರ್ಟ್ ಸಿಟಿ ಯೋಜನೆಯಡಿ ಮೊದಲ ಹಂತದಲ್ಲಿ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ನಗರದ ಮೂಲ ಸೌಕರ್ಯವನ್ನು ಅಭಿವೃದ್ಧಿಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸರ್ಕಾರ 2015ರಲ್ಲಿ ಸ್ಮಾರ್ಟ್ ಸಿಟಿ ಮಿಷನ್ ಅನ್ನು ಘೋಷಣೆ ಮಾಡಿತು. ನಗರಾಭಿವೃದ್ಧಿ ಸಚಿವಾಲಯದ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ದೇಶದ ಎಲ್ಲಾ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಿಂದ ಈ ಯೋಜನೆಗಾಗಿ 100 ನಗರಗಳನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗ ನಗರಗಳು 6.
ಸ್ಮಾರ್ಟ್ ಸಿಟಿ ಯೋಜನೆಯ ಅಡಿ ದೇಶದ ನಗರಗಳನ್ನು ಅಭಿವೃದ್ಧಿಗೊಳಿಸಿ ಸ್ವಚ್ಛತೆ ಮತ್ತು ಉತ್ತಮ ಗುಣಮಟ್ಟದ ಜೀವನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಯೋಜನೆಯ ಅಡಿ ಇಲ್ಲಿಯ ತನಕ 1,10,365 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳು ಪೂರ್ಣಗೊಂಡಿವೆ ಎಂದು ನಗರಾಭಿವೃದ್ಧಿ ಸಚಿವಾಲಯ ಹೇಳಿದೆ. ಜೂನ್ 30, 2024ರ ವೇಳೆಗೆ 60,095 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
2022ನೇ ಸಾಲಿನಲ್ಲಿ ನಗರ ಪರಿಸರ ವಿಭಾಗದಲ್ಲಿ ಸ್ಮಾರ್ಟ್ ಸಿಟಿ ಶಿವಮೊಗ್ಗಕ್ಕೆ ಪ್ರಶಸ್ತಿ ಸಿಕ್ಕಿದೆ. ಸಂರಕ್ಷಣಾ ಸ್ಥಳಗಳ ಅಭಿವೃದ್ಧಿ, ಇ-ಆಟೋ ಪೂರೈಕೆ ವಿಭಾಗದಲ್ಲಿನ ಸಾಧನೆಯನ್ನು ಗುರುತಿಸಿ ಪರಿಸರ ವಿಭಾಗದಲ್ಲಿ ಶಿವಮೊಗ್ಗ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಆಯ್ಕೆ ಮಾಡಲಾಗಿದೆ.
ಪ್ರಹ್ಲಾದ್ ಜೋಶಿ ಸಂತಸ; ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ನವೀನ ಕಲ್ಪನೆ ಪ್ರಶಸ್ತಿ ವಿಭಾಗದಲ್ಲಿ ಆಯ್ಕೆಯಾಗಿದೆ. ಈ ಕುರಿತು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದು, 'ನಮ್ಮ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಗೆ ಮತ್ತೊಂದು ಗರಿ. 2022ರ ಸಾಲಿನ ಇಂಡಿಯಾ ಸ್ಮಾರ್ಟ್ ಸಿಟಿಸ್ ಪ್ರಶಸ್ತಿಯಲ್ಲಿ ಆವಿಷ್ಕಾರದ ವಿಭಾಗದಲ್ಲಿ ಹುಬ್ಬಳ್ಳಿ-ಧಾರವಾಡದ ಹಸಿರು ಸಂಚಾರಿ ಪಥಕ್ಕೆ ದೇಶದಲ್ಲಿಯೇ ಪ್ರಥಮ ಸ್ಥಾನ ದೊರಕಿದೆ. ಲಿಂಗರಾಜನಗರದ ಹತ್ತಿರದ ರಾಣಿ ಚೆನ್ನಮ್ಮ ನಗರದ ಸೇತುವೆ ಬಳಿ ಮೊದಲ ಹಸಿರು ಸಂಚಾರಿ ಪಥವನ್ನು ನಿರ್ಮಿಸಲಾಗಿದ್ದು ಇದು 9.25 ಕಿ.ಮೀ ಉದ್ದವಾಗಿದೆ' ಎಂದು ಹೇಳಿದ್ದಾರೆ.
'ಉಣಕಲ್ ಕೆರೆ ಮತ್ತು ಅದಕ್ಕೆ ಬಂದು ಸೇರುವ ಹಳ್ಳ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯಲ್ಲಿ ಒಳ ಚರಂಡಿ ವ್ಯವಸ್ಥೆ ನಿರ್ಮಿಸಿ ಕಲುಷಿತ ನೀರನ್ನು ಬೇರ್ಪಡಿಸಿ ಸಂಸ್ಕರಣೆ ಮಾಡಿ ಪುನರ್ ಬಳಕೆ ಮಾಡಲಾಗುತ್ತದೆ. ದಶಕಗಳ ಹಿಂದೆ ಕೃಷಿ ಮತ್ತು ಕುಡಿಯುವ ನೀರಿಗೆ ಮೂಲವಾಗಿದ್ದ ಉಣಕಲ್ ಕೆರೆಯ ಒಳಚರಂಡಿಗೆ ಈಗ ಹಸಿರು ಸಂಚಾರಿ ಪಥದ ನಿರ್ಮಾಣದೊಂದಿಗೆ ನಗರದ ಸೌಂದರ್ಯವನ್ನು ವೃದ್ಧಿಸಿದ್ದಲ್ಲದೇ ಪ್ರವಾಸೋದ್ಯಮ ತಾಣವಾಗಿ ಪರಿವರ್ತನೆಗೊಂಡಿದೆ. ಹೊಸ ಹೊಸ ಅವಿಷ್ಕಾರ ಮತ್ತು ನವೀನತೆಯಿಂದ ಕಾರ್ಯ ನಿರ್ವಹಿಸಿ ಹಸಿರು ಸಂಚಾರಿ ಪಥಕ್ಕೆ ಪ್ರಶಸ್ತಿ ದೊರಕಲು ಕಾರಣಿಕರ್ತರಾದ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲ ಸಿಬ್ಬಂದಿ ವರ್ಗದವರಿಗೆ ಹಾರ್ದಿಕ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.
'ದೇಶದ 100 ನಗರಗಳ ಸ್ಮಾರ್ಟ್ ಸಿಟಿ ಯೋಜನೆಗಳ ಪೈಕಿ, ಹಸಿರು ಸಂಚಾರಿ ಪಥ (ಗ್ರೀನ್ ಮೊಬಿಲಿಟಿ ಕಾರಿಡಾರ್) ಮೊದಲನೆಯದಾಗಿ ಲೋಕಾರ್ಪಣೆಗೊಂಡಿದ್ದ ನಮ್ಮ ಪಥಕ್ಕೆ ಈಗ ಈ ಪ್ರಶಸ್ತಿ ದೊರೆತಿದ್ದು ಅತ್ಯಂತ ಸಂತೋಷವಾಗಿದ್ದು, ಇಂತಹ ನವೀನ ಯೋಜನೆಗಳನ್ನು ಸತತವಾಗಿ ರಾಷ್ಟ್ರದ ಅಭಿವೃದ್ಧಿಗಾಗಿ ಸಮರ್ಪಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೂ ಈ ಸಂದರ್ಭದಲ್ಲಿ ಅನಂತ ಧನ್ಯವಾದಗಳು' ಎಂದು ಸಚಿವರು ಪೋಸ್ಟ್ ಹಾಕಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications