• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ಶಾಲೆಗಳಿಗೆ ಮೂವರು ಟ್ರಾನ್ಸ್‌ಜೆಂಡರ್ ಶಿಕ್ಷಕರು ಆಯ್ಕೆ

|
Google Oneindia Kannada News

ಬೆಂಗಳೂರು, ನ. 20: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಈಗ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದ್ದು, ಮೂವರು ಲೈಂಗಿಕ ಅಲ್ಪಸಂಖ್ಯಾತರು ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2 ರಂತೆ ದಾಖಲಾತಿಯ ಪರಿಶೀಲನೆಯನ್ನು ನಡೆಸಲಾಗಿತ್ತು. ಅದರ ಬೆನ್ನಲ್ಲೇ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ.

15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ರಾಜ್ಯದ ಸರ್ಕಾರಿ ಶಾಲೆಗಳಿಗೆ ಹೊಸದಾಗಿ ನೇಮಕಗೊಂಡ 13,363 ಶಿಕ್ಷಕರ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಸರ್ಕಾರಿ ಶಾಲೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದಿಂದ ಮೂವರು ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಲಾಗಿದೆ.

"ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ" ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

"15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟು ನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ" ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

ಡೆಕ್ಕನ್ ಹೆರಾಲ್ಡ್‌ನ ವರದಿಯ ಪ್ರಕಾರ, ಒಟ್ಟು 10 ಮಂದಿ ಟ್ರಾನ್ಸ್‌ಜೆಂಡರ್‌ಗಳು ಪರೀಕ್ಷೆಗೆ ಹಾಜರಾಗಿದ್ದರು, ಅವರಲ್ಲಿ ಮೂವರನ್ನು ಅಂತಿಮ ನೇಮಕಾತಿಯಲ್ಲಿ ಆಯ್ಕೆ ಮಾಡಲಾಗಿದೆ.

Three Transgender Teachers Selected For Government Schools

ಸುರೇಶ್ ಬಾಬು, ರವಿ ಕುಮಾರ್ ವೈ.ಆರ್ ಮತ್ತು ಅಶ್ವತ್ಥಾಮ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಸುರೇಶ್ ಬಾಬು ಇಂಗ್ಲಿಷ್ ಭೋಧಿಸಲಿದ್ದಾರೆ. ಉಳಿದ ರವಿ ಕುಮಾರ್ ಮತ್ತು ಅಶ್ವತ್ಥಾಮ ಸಮಾಜ ವಿಜ್ಞಾನ ವಿಷಯಗಳನ್ನು ಬೋಧಿಸಲಿದ್ದಾರೆ ಎಂದು ವರದಿಯಾಗಿದೆ.

ಇದರ ಜೊತೆಗೆ ಇದೇ ಮೊದಲ ಬಾರಿಗೆ ಎಂಜಿನಿಯರಿಂಗ್ ಪದವೀಧರರು ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಸಚಿವರು ತಿಳಿಸಿದರು. ಒಟ್ಟು 19 ಎಂಜಿನಿಯರಿಂಗ್ ಪದವೀಧರರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

English summary
Three teachers from the transgender community selected for state-run schools. there names are in selection list of 13,363 newly recruited teachers. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X