ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಮೇ 15ರವರೆಗೂ ಸಾಧ್ಯತೆ

By Nayana
|
Google Oneindia Kannada News

ಬೆಂಗಳೂರು, ಮೇ 13: ಬೆಂಗಳೂರಿನ ಹಲವೆಡೆ ಭಾನುವಾರ ಮಳೆಯಾಗಿದೆ. ನಗರದ ಬಸವನಗುಡಿ,ರಾಜಾಜಿನಗರ, ಮಹಾಲಕ್ಚ್ಮೀ ಲೇಔಟ್‌, ತ್ಯಾಗರಾಜನಗರ, ಕೆಂಗೇರಿ, ಉತ್ತರಹಳ್ಳಿ, ಮೈಸೂರು ರಸ್ತೆ, ನಾಯಂಡಹಳ್ಳಿ, ಹೊಸೂರು ರಸ್ತೆಯಲ್ಲಿ ಮಳೆಯಾಗಿದೆ.

ಕಳೆದ ಒಂದು ತಿಂಗಳಿನಿಂದೀಚೆಗೆ ಪ್ರತಿ ದಿನವೂ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ನಿತ್ಯ ಅದೇ ಮಳೆ, ಟ್ರಾಫಿಕ್‌ ಜಾಮ್‌ ಮುಂದುವರೆದಿದೆ, ಮೇ 15ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಓಕಳಿಪುರಂನಲ್ಲಿ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಭಾರತದಲ್ಲಿ ಮತ್ತೆ ಮಳೆ, ಗಾಳಿ ಅಬ್ಬರ ಸಾಧ್ಯತೆ ಉತ್ತರ ಭಾರತದಲ್ಲಿ ಮತ್ತೆ ಮಳೆ, ಗಾಳಿ ಅಬ್ಬರ ಸಾಧ್ಯತೆ

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 32ಡಿಗ್ರಿ ಸೆಲ್ಸಿಯಸ್, ಕನಿಷ್ಠ 21ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು 48 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

Thunderstorm alert Highlights: Rainfall in Bengaluru, IMD predicts more downpour for tomorrow

ಲಕ್ಷದ್ವೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿದೆ. ದಕ್ಷಿಣ ಒಳನಾಡು ಹಾದುಹೋಗುವಂತೆ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದವರೆಗೆ ಟ್ರಫ್ ನಿರ್ಮಾಣವಾಗಿದೆ. ಇದರ ಪ್ರಭಾವದಿಂದಲೇ ಮಳೆ ಮುನ್ಸೂಚನೆ ನೀಡಲಾಗಿದೆ.

English summary
Indian Meteorological Department has forecasted that consolidated trough in Tamil Nadu will bring rain in south Karnataka up to May 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X