Karnataka Rain: ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ ಅಲರ್ಟ್, ಯಾವ ಜಿಲ್ಲೆಗಳಲ್ಲಿ?
ಸೈಲೆಂಟ್ ಆಗಿದ್ದ ಮಳೆ ಮತ್ತೆ ಶುರುವಾಗಿದೆ. ನಿನ್ನೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಇಂದಿನಿಂದ ಮೂರು ದಿನಗಳ ಕಾಲ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮನ್ನಾರ್ ಗಲ್ಫ್ ಮತ್ತು ನೆರೆಹೊರೆಯ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಶ್ರೀಲಂಕಾದ ಪಕ್ಕದಲ್ಲಿದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ವಿಸ್ತರಿಸಿದೆ. ಮೇಲಿನ ಚಂಡಮಾರುತದ ಪರಿಚಲನೆಯಿಂದ ಶ್ರೀಲಂಕಾದ ಪಕ್ಕದಲ್ಲಿರುವ ದಕ್ಷಿಣ ತಮಿಳುನಾಡು ಕರಾವಳಿಯಿಂದ ಕರಾವಳಿ ಕರ್ನಾಟಕದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿ ಒಂದು ಟ್ರಫ್ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವಿರಲಿದೆ. ನಿನ್ನೆ ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ನಾಳೆ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ ಬೀಳಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ.

ನವೆಂಬರ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 5 ಮತ್ತು 6ರಂದು ರಾಜ್ಯದ ಜಿಲ್ಲೆಗಳ ಮೇಲೆ ಒಣ ಹವಾಮಾನವಿರಲಿದೆ.
ನವೆಂಬರ್ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಕಂಡುಬರಲಿದೆ ಎಂದು ಹೇಳಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.












Click it and Unblock the Notifications