Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು, ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು,ಸೆಪ್ಟೆಂಬರ್‌ 20: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು(ಬುಧವಾರ) ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಜಿಲ್ಲೆಯಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಇನ್ನೂ ಧಾರವಾಡ, ಗದಗ, ಬೀದರ್, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಯಾದಗಿರಿ ರಾಯಚೂರು ಜಿಲ್ಲೆಗಳಲ್ಲಿ ಒಣಹವ ಇರಲಿದೆ.

Thunderstorm, stormy rain today in Karnatakas these districts

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುತ್ತದೆ. ಹೀಗಾಗಿ ಇಂದು ಮತ್ತು ನಾಳೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಬೀದರ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಬರಲಿದ್ದರೇ, ರಾಯಚೂರು ಮತ್ತು ಯಾದಗಿರಿಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+