Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ಏಪ್ರಿಲ್ 11: ಬೇಸಿಗೆಯಲ್ಲಿ ಬಿಸಿಲಿನಿಂದ ಹೈರಾಣಾಗಿರುವ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ವಾರಗಳಿಂದ ಕರ್ನಾಟಕದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ಇನ್ನು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಮಳೆಯ ಆಗಮನದಿಂದ ಬಯಲುಸೀಮೆ ಜನರಲ್ಲಿ ಸಂತಸ ಮೂಡಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶುಕ್ರವಾರ ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೋಲಾರ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತೆ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ಹುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇನ್ನೂ ಬಿಸಿಲಿನಿಂದ ಕಾದು ಕೆಂಡದಂತಾಗಿದ್ದ ಸಿಲಿಕಾನ್ ಸಿಟಿಯ ರಸ್ತೆಗಳು ನಿನ್ನೆ ಮಳೆಗೆ ತಣ್ಣಗಾದವು ಬೆಂಗಳೂರು ನಗರದ ಹಲವೆಡೆ ನಿನ್ನೆ(ಶುಕ್ರವಾರ) ಮಳೆಯಾಗಿದೆ. ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಮಲ್ಲೇಶ್ವರಂ ಸೇರಿ ಬೆಂಗಳೂರಿನ ಹಲವೆಡೆ ಸಂಜೆ ಮಳೆರಾಯ ಧರೆಗೆ ಇಳಿದಿದ್ದಾನೆ. ಬಿಸಿಲಿನ ತಾಪದಿಂದ ಬೆಂದಿದ್ದ ರಾಜಧಾನಿ ಜನರು ಸಂಜೆಯ ಮಳೆಯಿಂದ ತಂಪಾದರು. ಇನ್ನೂ ಚಿಕ್ಕಮಗಳೂರು ಮತ್ತು ಕೊಪ್ಪಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 12 ರಿಂದ 18 ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.












Click it and Unblock the Notifications