ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ? ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?
ಜಯಗಳಿಸುವಂತಹ ಅಭ್ಯರ್ಥಿಗಳು ಹೆಸರಗಳ ಪಟ್ಟಿ ಸಿದ್ದಪಡಿಸಿ ಪಕ್ಷದ ನಾಯಕರಿಗೆ ಶಿಫಾರಸ್ಸು ಮಾಡಲಾಗುವುದು ಎಂದು ನಳಿನ್‍ಕುಮಾರ್ ಕಟೀಲ್ ಹೇಳಿದರು.
ರಾಯಚೂರು,ಫೆಬ್ರವರಿ25: ರಾಜ್ಯ ರಾಜಕಾರಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರವನ್ನ ನಡೆಸುತ್ತಿವೆ. ಇದರ ನಡುವೆ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುತ್ತಾ ಇಲ್ವಾ ಅನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗಿದೆ.
ಈಗಾಗಲೇ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರ್ಬೇಕು ಎಂದು ಪಣ ತೊಟ್ಟಿರುವ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಹಲವು ಸೂಚನೆಗಳನ್ನ ನೀಡಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮಾತನಾಡಿ, ಬಿಜೆಪಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವಿಚಾರಕ್ಕೆ ಯಾವುದೇ ಆತುರವಿಲ್ಲ.

ಸೂಕ್ತವಾದ, ಗೆಲ್ಲುವ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಪಕ್ಷದಿಂದ ಸರ್ವೆ, ಸಮೀಕ್ಷೆ, ಅಧ್ಯಯನಗಳು ನಡೆದಿವೆ. ಅದರ ಆಧಾರದ ಮೇಲೆ ಜಯಗಳಿಸುವಂತಹ ಅಭ್ಯರ್ಥಿಗಳು ಹೆಸರಗಳ ಪಟ್ಟಿ ಸಿದ್ದಪಡಿಸಿ ಪಕ್ಷದ ನಾಯಕರಿಗೆ ಶಿಫಾರಸ್ಸು ಮಾಡಲಾಗುವುದು ಜೊತೆಗೆ ಹಾಲಿ ಶಾಸಕರು ಟಿಕೆಟ್ ಕೈತಪ್ಪುತ್ತದೆ ಎನ್ನುವ ಮಾತುಗಳು ಊಹಾಪೋಹಗಳು ಎಂದು ಹೇಳಿದ್ದಾರೆ.
ಇನ್ನೂ ಚುನಾವಣಾ ಹಿನ್ನಲೆ ರಾಜ್ಯದಲ್ಲಿ ಮೂರು ತಂಡಗಳೊಂದಿಗೆ ಹಮ್ಮಿಕೊಂಡಿದ್ದ ವಿಜಯಸಂಕಲ್ಪ ಯಾತ್ರೆ ಇಂದು ಅಂತಿಮಗೊಳ್ಳಲಿದೆ. ವಿಜಯ ಸಂಕಲ್ಪ ಯಾತ್ರೆಗೆ ಜನತೆಯಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್ ಹಾಗೂ ಅರುಣ್‌ಸಿಂಗ್ ನೇತೃತ್ವದಲ್ಲಿ ಮೂರು ತಂಡಗಳು ವಿಜಯಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗಿತ್ತು. ಈ ಯಾತ್ರೆ ನಿಗದಿತವಾದ ಗುರಿಯನ್ನು ತಲುಪುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದಾರೆ.

ಮಾರ್ಚ್ 1 ರಂದು ರಾಜ್ಯದ ನಾಲ್ಕು ತಂಡಗಳಾಗಿ ರಥಯಾತ್ರೆಗಳು ಶುರುವಾಗಲಿದ್ದು, ಈ ರಥಯಾತ್ರೆಗಳು ಎಲ್ಲಾ ಕ್ಷೇತ್ರಗಳಲ್ಲಿ ಸಂಚರಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಮೀಷನ್ 150 ಸೀಟುಗಳು ಗೆಲ್ಲುತ್ತೇವೆ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ರೀಡೂ ಹಗರಣದ ವಿಚಾರವಾಗಿ ಮಾತನಾಡಿದ ಅವರು, ಅರ್ಕಾವತಿ ಹಗರಣ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವಧಿಯಲ್ಲಿ ಇದನ್ನು ಈ ಪ್ರಕರಣವನ್ನು ಮುಚ್ಚಿ ಹಾಕುವುದಕ್ಕೆ ಲೋಕಾಯುಕ್ತ ಸಂಸ್ಥೆಯನ್ನು ಶಕ್ತಿಯನ್ನು ಕುಗ್ಗಿಸಿದ್ದರು. ಹಗರಣ ಹೊರಬರದಂತೆ ಹಲ್ಲು ಇಲ್ಲದ ಹಾವುನಂತೆ ಮಾಡಿದ್ದರೆ. ಆದರೆ ಈಗ ಈ ಹಗರಣದ ದಾಖಲೆಗಳಿವೆ ಇದರ ಆಧಾರದ ಮೇಲೆ ಲೋಕಾಯುಕ್ತ ತನಿಖೆ ನಡೆಯಲಿ. ನಮಗೆ ಆಗ ಆರೋಪ ಮಾಡುವುದಕ್ಕೆ ದಾಖಲೆಗಳು ಇರಲಿಲ್ಲ. ಈಗ ದಾಖಲೆಗಳು ಇವೆ. ಅದರ ಮೇಲೆ ನಾವು ಆರೋಪ ಮಾಡುತ್ತೇವೆ ಎಂದರು.












Click it and Unblock the Notifications