ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿಲಕದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

|
Google Oneindia Kannada News

Recommended Video

ತಿಲಕದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 06 : 'ತಿಲಕ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯ' ಎಂಬ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ಬಾಗಲಕೋಟೆಯಲ್ಲಿ ಮಂಗಳವಾರ ಕಾಮಗಾರಿ ಕೈಗೊಂಡ ಗುತ್ತಿಗೆದಾರನಿಗೆ ಸಿದ್ದರಾಮಯ್ಯ ಕೇಳಿದ್ದ ಪ್ರಶ್ನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದ್ದರಿಂದ, ಅವರು ಬುಧವಾರ ಟ್ವೀಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಿಲಕದ ಬಗ್ಗೆ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ:ಸಿದ್ದರಾಮಯ್ಯತಿಲಕದ ಬಗ್ಗೆ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ:ಸಿದ್ದರಾಮಯ್ಯ

'ಉದ್ದ ನಾಮ ಹಾಕಿದವರನ್ನು ಕಂಡರೆ ನನಗೆ ಭಯವಿದೆ. ನೀವು ಯಾವಾಗ ಕಾಮಗಾರಿ ಮುಗಿಸುತ್ತೀರಿ?. ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು' ಎಂದು ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಉದ್ದ ನಾಮ ಇಟ್ಟುಕೊಂಡು ಬಂದಿದ್ದ ಗುತ್ತಿಗೆದಾರನಿಗೆ ಸೂಚಿಸಿದ್ದರು.

ತಿಲಕ ಇಡುವವರನ್ನು ಕಂಡ್ರೆ ಭಯ: ಸಿದ್ದರಾಮಯ್ಯ ವಿಡಿಯೋ ವೈರಲ್ತಿಲಕ ಇಡುವವರನ್ನು ಕಂಡ್ರೆ ಭಯ: ಸಿದ್ದರಾಮಯ್ಯ ವಿಡಿಯೋ ವೈರಲ್

'ಉತ್ತರ ಪ್ರದೇಶದಲ್ಲೊಬ್ಬರು ಮುಖ್ಯಮಂತ್ರಿ ಇದ್ದಾರೆ. ಮೈ ತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ' ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಲೇವಡಿ ಮಾಡಿದ್ದಾರೆ....

ನಾನು ಹೇಳಿರುವುದು ನಿಜ

ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಹುಲ್‌ಗೆ ಪ್ರಣಬ್ ತಿಲಕ, ಸಿದ್ದರಾಮಯ್ಯ ಅಪ್ಪುಗೆಯ ಪುಳಕ!ರಾಹುಲ್‌ಗೆ ಪ್ರಣಬ್ ತಿಲಕ, ಸಿದ್ದರಾಮಯ್ಯ ಅಪ್ಪುಗೆಯ ಪುಳಕ!

ನಾನು ಒಳ್ಳೆಯ ಹಿಂದು

ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು. ನಾನೆಂದೂ ಅವರಂತೆ ತಿಲಕ, ಕಾವಿ, ಧರ್ಮಗಳನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತೀಯ ಧಾರ್ಮಿಕ ಪರಂಪರೆಯ ಭಾಗ

ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ‌ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು ಎಂದು ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಆಸ್ತಿಕ, ನಾಸ್ತಿಕರ ಮಧ್ಯೆ ಖಂಡಿತವಾದಿ ಸಿದ್ದರಾಮಯ್ಯಆಸ್ತಿಕ, ನಾಸ್ತಿಕರ ಮಧ್ಯೆ ಖಂಡಿತವಾದಿ ಸಿದ್ದರಾಮಯ್ಯ

English summary
Former Karnataka Chief Minister Siddaramaiah clarification on his statement on tilak. In Bagalkot Siddaramaiah said he was scared of people who wear tilaks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X