Times Now Exit Polls: ಕರ್ನಾಟಕದಲ್ಲಿ ಕಾಣೆಯಾದ ಕಮಲ, ಕೈಗೆ ಬಲ!

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಪೂರ್ಣಗೊಂಡಿದೆ. ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 7 ಗಂಟೆಗೆ ಮತದಾನ ಕೇಂದ್ರಗಳು ತೆರೆದಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. 224 ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಪ್ರಾಥಮಿಕವಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆದರೆ ಚುನಾವಣೋತ್ತರ ಸಮೀಕ್ಷೆಗಳ ವರದಿ ಕೆಲ ಪಕ್ಷಗಳ ಲೆಕ್ಕಾಚಾರವನ್ನು ಬುಡಮೇಲಾಗಿಸಿದೆ.

ಕರ್ನಾಟಕ ಚುನಾವಣಾ ಪ್ರಚಾರ ಸೋಮವಾರ (ಮೇ 8) ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭರ್ಜರಿ ಮತಬೇಟೆ ಮಾಡಿದ್ದಾರೆ.

Times Now Exit Poll Results 2023

ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ 5,31,33,054 ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹರಾಗಿದ್ದರು. ಇಂದು ಸಂಜೆ ಐದುಗಂಟೆಯವರೆಗೆ ಶೇ.65ಕ್ಕೂ ಹೆಚ್ಚು ಮತದಾನ ಆಗಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದ್ದು ಎಲ್ಲಾ ನಾಯಕರ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ Times Now ಮತದಾನ ಸಮೀಕ್ಷೆ ಹೊರಬಿದ್ದಿದೆ.

ಟೈಮ್ಸ್ ನೌ ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ +113 ಹಾಗೂ ಬಿಜೆಪಿಗೆ - 85, ಜೆಡಿಎಸ್‌ಗೆ +23, ಪಕ್ಷೇತರರು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಅಂತಿಮ ಫಲಿತಾಂಶ ಮೇ 13ರಂದು ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+