'ಟಿಪ್ಪು ಜಯಂತಿ ಬೇಡ' ಬಿಜೆಪಿಯಿಂದ ನ.8ರಂದು ರಾಜ್ಯಾದ್ಯಂತ ಪ್ರತಿಭಟನೆ
ಟಿಪ್ಪು ಜಯಂತಿ ಆಚರಣೆ ಬೇಡವೆಂದು ಬಿಜಿಪಿ ನವೆಂಬರ್ 08 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಪ್ರತಿಭಟನೆಗೆ ಹಲವು ಹಿಂದೂ ಪರ ಸಂಘಟನೆಗಳು ಸಾಥ್ ನೀಡಲಿವೆ.
ಬೆಂಗಳೂರು, ಅಕ್ಟೋಬರ್. 02 : ಬಿಜೆಪಿ ಮತ್ತು ವಿವಿಧ ಸಂಘಟನೆಗಳ ವಿರೋಧದ ನಡುವೆಯೇ ಸರ್ಕಾರ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ನ.8ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಕರ್ನಾಟಕ ಸರ್ಕಾರ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲಿದೆ. ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಟಿಪ್ಪು ಜಯಂತಿಯ ಮುಖ್ಯ ಕಾರ್ಯಕ್ರಮವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಿದೆ. ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರದಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಟಿಪ್ಪು ಜಯಂತಿ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಮೋಹನ್ ದಾಸ್ ಪೈ]

ಕಳೆದ ವರ್ಷವೂ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಹಲವು ಪ್ರತಿಭಟನೆಗಳು ನಡೆದಿದ್ದವು. ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಗಲಭೆ ನಡೆದಿತ್ತು. ಹಿಂದೂ ಪರ ಸಂಘಟನೆ ಕಾರ್ಯಕರ್ತ ಕುಟ್ಟಪ್ಪ ಅವರನ್ನು ಹತ್ಯೆ ಮಾಡಲಾಗಿತ್ತು.
ಈ ವರ್ಷವೂ ಪ್ರತಿಪಕ್ಷ ಬಿಜೆಪಿ ಮತ್ತು ವಿವಿಧ ಸಂಘಟನೆಗಳು ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿವೆ. ಆದರೆ, ಸರ್ಕಾರ ಜಯಂತಿ ಆಚರಣೆಗೆ ಆದೇಶ ಹೊರಡಿಸಿದೆ.
ಟಿಪ್ಪು ಜಯಂತಿ ಬೇಡ ಎಂದು ಕರ್ನಾಟಕ ಬಿಜೆಪಿ ನವೆಂಬರ್ 8ರಂದು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಹಲವು ಹಿಂದೂ ಪರ ಸಂಘಟನೆಗಳು ಸಾಥ್ ನೀಡಲಿವೆ.












Click it and Unblock the Notifications