ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31 : ಟಿಪ್ಪು ಜಯಂತಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ 1 ಸಾವಿರ ರೂ. ದಂಡ ವಿಧಿಸಿದೆ. ನವೆಂಬರ್ 9ರಂದು ಕರ್ನಾಟಕದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ.

ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದನ್ನು ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿತ್ತು.

ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?

Tipu Jayanti

ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿತ್ತು. ಇಂದು ಅರ್ಜಿಯ ವಿಚಾರಣೆ ಪುನಃ ಹೈಕೋರ್ಟ್‌ನಲ್ಲಿ ನಡೆಯಿತು.

ಟಿಪ್ಪು ಸುಲ್ತಾನ್ ವಿರುದ್ಧ ಕ್ರೈಸ್ತ ಸಮುದಾಯದ ವಿರೋಧವೇಕೆ?ಟಿಪ್ಪು ಸುಲ್ತಾನ್ ವಿರುದ್ಧ ಕ್ರೈಸ್ತ ಸಮುದಾಯದ ವಿರೋಧವೇಕೆ?

ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸಿ ಹಿನ್ನಲೆಯಲ್ಲಿ ಸರ್ಕಾರಕ್ಕೆ 1 ಸಾವಿರ ರೂ. ದಂಡ ವಿಧಿಸಿದ ಕೋರ್ಟ್, ನವೆಂಬರ್ 9ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

ಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯಪೂಜೆಕೊಲ್ಲೂರು ದೇವಳದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯಪೂಜೆ

ಟಿಪ್ಪು ಜಯಂತಿ ಆಚರಣೆ ಬೇಡ : ನವೆಂಬರ್ 9 ಸಮೀಪಿಸುತ್ತಿದ್ದು ಈ ಬಾರಿಯೂ ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ.

'ಟಿಪ್ಪು ಜಯಂತಿ ಆಚರಣೆ ಮಾಡಿದರೆ ಹಿಂಸೆ, ಅಧರ್ಮ, ಪಾಪ ಹಾಗೂ ನರಹತ್ಯೆಯನ್ನು ವಿಜೃಂಭಿಸಿದಂತೆ ಆಗುತ್ತದೆ. ಹಿಂದೂ ವಿರೋಧಿಯಾಗಿ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಬಾರದು ಎಂದು' ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ ಆಗ್ರಹಿಸಿದ್ದಾರೆ.

English summary
Karantaka high court fined the state government Rs 1000 for failed to file objections for the PIL questioned Tipu Jayant. Tipu Jayanti will be celebrated across the state on November 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X