ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ, ಚರ್ಚೆ ಮಾಡುತ್ತೇವೆ ಎಂದ ಸಚಿವ ಎಂ.ಬಿ.ಪಾಟೀಲ್
ವಿಜಯಪುರ, ಜೂನ್. 05: ರಾಜ್ಯದಲ್ಲಿ ವಿವಾದಿತ ಗೋಹತ್ಯೆ ಕಾಯ್ದೆಯನ್ನು ರದ್ದುಪಡಿಸಿ, ಮತಾಂತರ ತಡೆ ಕಾನೂನನ್ನು ಹಿಂಪಡೆದು ಟಿಪ್ಪು ಸುಲ್ತಾನ್ ಜಯಂತಿಯನ್ನು ಕಾಂಗ್ರೆಸ್ ಸರ್ಕಾರ ಪುನರಾರಂಭಿಸುವ ಸಾಧ್ಯತೆ ಇದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೂಚಿಸಿದ್ದಾರೆ.
ಮುಂದುವರಿದು, "ಈ ವಿಷಯಗಳು ಸೂಕ್ಷ್ಮವಾಗಿರುವುದರಿಂದ, ಅವುಗಳನ್ನು ಪಕ್ಷ ಮತ್ತು ಸರ್ಕಾರದಲ್ಲಿ ವಿವರವಾಗಿ ಚರ್ಚಿಸಲಾಗುವುದು" ಎಂದು ಹೇಳಿದ್ದಾರೆ. ಇದರ ಜೊತೆಗೆ ಹಿಂದಿನ ಬಿಜೆಪಿ ಸರ್ಕಾರವು ರದ್ದುಗೊಳಿಸಿದ್ದ ಮುಸ್ಲಿಮರಿಗೆ 4% ಮೀಸಲಾತಿಯನ್ನು ಮರುಸ್ಥಾಪಿಸುವ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಏಕೆಂದರೆ ವಿಷಯವು ವಿಚಾರಣೆಯಲ್ಲಿರುವುದರಿಂದ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಪರಿಶಿಷ್ಟ ಜಾತಿ ಸಮುದಾಯ (ಎಸ್‌ಸಿ) ಗಳಿಗೆ ಶೇ.2ರಷ್ಟು ಮೀಸಲಾತಿ ಹೆಚ್ಚಳದ ಹಿಂದೆ ಆಡಳಿತದ ಕಣ್ಣೊರೆಸುವ ನಾಟಕ ಎಂದು ಕರೆದಿದ್ದಾರೆ, ಎಸ್‌ಸಿ ಮೀಸಲಾತಿಯನ್ನು ಹೆಚ್ಚಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.
"ರಾಜ್ಯ ಸರ್ಕಾರವು ಮೀಸಲಾತಿಯನ್ನು ಶಿಫಾರಸು ಮಾಡಬಹುದು. ಆದರೆ ಕೇಂದ್ರ ಸರ್ಕಾರವು ಸಂವಿಧಾನದಲ್ಲಿ ಕೆಲವು ವೇಳಾಪಟ್ಟಿಗಳನ್ನು ಅನುಮೋದಿಸಬೇಕು ಮತ್ತು ಅದನ್ನು ತಿದ್ದುಪಡಿ ಮಾಡಬೇಕು. ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಕಾರ್ಯವಿಧಾನವನ್ನು ಅನುಸರಿಸದೆ ಕೇವಲ ಹೆಚ್ಚಳವನ್ನು ಘೋಷಿಸಿದೆ" ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
ವಿವಿಧ ಸಮುದಾಯಗಳಿಗೆ ಅನುಕೂಲವಾಗುವಂತೆ ಶೇ.50ರಷ್ಟು ಮೀಸಲಾತಿಯನ್ನು ತೆಗೆದುಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಎಂದ.ಬಿ. ಪಾಟೀಲ ತಿಳಿಸಿದ್ದಾರೆ. ಬಿಜೆಪಿಯು "ಹಿಜಾಬ್ ಮತ್ತು ಹಲಾಲ್‌ನಂತಹ ಸೂಕ್ಷ್ಮ ಮತ್ತು ಪ್ರಜ್ಞಾಶೂನ್ಯ ವಿಷಯಗಳನ್ನು" ಮಾತ್ರ ಎತ್ತುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಜನರ ಜೀವನವನ್ನು ಉತ್ತಮಗೊಳಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ ಅವರು, ಕೋಮು ಘರ್ಷಣೆಯನ್ನು ಉಂಟು ಮಾಡುವ ಜನರನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. "ಕರ್ನಾಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲು ಇರಿಸಲು "ಶಾಂತಿಯುತ ಕರ್ನಾಟಕ" ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸುವಂತೆ ಶ್ರೀ ಡಾ. ಜಿ.ಪೆಮೇಶ್ವರ, ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ. ನಮ್ಮ ಗುರಿ ಅಭಿವೃದ್ಧಿ ಮತ್ತು ಪ್ರಗತಿ ಹಾಗೂ "ಬ್ರಾಂಡ್ ಕರ್ನಾಟಕ" ರಕ್ಷಿಸುವುದು" ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications