Tipu Sultan: ಪ್ಯಾಲೆಸ್ತೀನ್ ಆಯ್ತು, ಈಗ ಟಿಪ್ಪು ಸುಲ್ತಾನ್ ಧ್ವಜ ಹಾರಾಟ: ರಾಷ್ಟ್ರಧ್ವಜಕ್ಕೆ ಅವಮಾನ!
ರಾಷ್ಟ್ರವ್ಯಾಪ್ತಿ ಹಾಗೂ ವಿದೇಶದಲ್ಲೂ ಇಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ, ಕರ್ನಾಟಕದ ಈ ಜಿಲ್ಲೆಯಲ್ಲಿ ಗಾಂಧಿ ಜಯಂತಿಯಂದೇ ಕಿಡಿಗೇಡಿಗಳು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾಗಿದೆ. ರಾಷ್ಟ್ರಧ್ವಜವನ್ನು ಚಿಕ್ಕದಾಗಿ ಹಾರಿಸಿ (ಕಂಬದ ಕೆಳಗೆ) ಟಿಪ್ಪು ಸುಲ್ತಾನ್ ಭಾವಚಿತ್ರ ಮಾದರಿಯ ಧ್ವಜವನ್ನು ಹಾರಿಸಲಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈಚೆಗೆ ಕರ್ನಾಟಕದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ಹಾಗೂ ಪ್ಯಾಲೆಸ್ತೀನ್ ಧ್ವಜ ಮಾದರಿಯ ಬಟ್ಟೆಗಳನ್ನು ಬಳಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿವಾದ ತಣ್ಣಗಾಗುವ ಮೊದಲೇ ಧಾರವಾಡದಲ್ಲಿ ಟಿಪ್ಪು ಧ್ವಜ ಹಾರಾಟ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಈ ರೀತಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಹಾಗೂ ಬೇರೆ ದೇಶದ ರಾಷ್ಟ್ರಧ್ವಜವನ್ನು ಹಾರಾಟ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಧಾರವಾಡದಲ್ಲೂ ಇಂತಹದ್ದೇ ಒಂದು ಘಟನೆ ನಡೆದಿರುವುದು ಬುಧವಾರ ವರದಿಯಾಗಿದೆ.

ಕರ್ನಾಟಕದಾದ್ಯಂತ ಬುಧವಾರ ಅದ್ಧೂರಿ ಗಾಂಧಿ ಜಯಂತಿಯನ್ನು ಆಚರಿಸಲಾಗಿದೆ. ಆದರೆ, ಧಾರವಾಡದಲ್ಲಿ ನಡೆದಿರುವ ಘಟನೆ ಆಘಾತ ಮೂಡಿಸಿದೆ.
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕಿಡಿಗೇಡಿಗಳು ರಾಷ್ಟ್ರಧ್ವಜವನ್ನೇ ಚಿಕ್ಕದಾಗಿ ಹಾರಿಸಿ, ಟಿಪ್ಪು ಸುಲ್ತಾನ್ ಭಾವಚಿತ್ರ ಇರುವ ಧ್ವಜವನ್ನ ಎತ್ತರಕ್ಕೆ ಹಾರಿಸಿದ್ದಾರೆ. ಧಾರವಾಡದ ಟಿಪ್ಪು ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಧಾರವಾಡ ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ನಡೆದ ಘಟನೆ ನಡೆದಿದ್ದು, ಶಹರ ಠಾಣಾ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಬಡ್ಡಿ ಪ್ರಕರಣಕ್ಕೆ ಟ್ವಿಸ್ಟ್
ಹುಬ್ಬಳ್ಳಿಯಲ್ಲಿ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ನಡೆಯಲಾಗಿತ್ತು ಎನ್ನಲಾಗಿದೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಹಲ್ಲೆ ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ. ವೈಯಕ್ತಿ ವಿಚಾರಕ್ಕೆ ಘಟನೆ ನಡೆದಿತ್ತು. ಇದರಲ್ಲಿ ಬಡ್ಡಿ ವ್ಯವಹಾರ ಇರಲಿಲ್ಲ ಎನ್ನುವುದು ಈಗ ಬಹಿರಂಗವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿದ್ದ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸಿದ್ದರು. ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಮಹಾನಿಂಗ ನಂದಗಾವಿ ಅವರು, ವೈಯಕ್ತಿಕ ವಿಷಯಕ್ಕಾಗಿ ಗಲಾಟೆಯಾಗಿದೆ. ಬಡ್ಡಿ ವ್ಯವಹಾರಕ್ಕೆ ನಡೆದಿಲ್ಲ ಎಂದಿದ್ದಾರೆ.
ಹಲ್ಲೆಗೊಳಗಾದ ವಿನಾಯಕ ರೋಣ ಎಂಬಾತನ ಸಹೋದರ ಕಾರ್ತಿಕ ನೀಡಿದ ದೂರಿನ ಆಧಾರದ ಮೇಲೆ ಹಲ್ಲೆ ನಡೆಸಿದ್ದ ಗಣೇಶ್ ಸಿದ್ದಾಪುರ, ಅಭಿಷೇಕ್ ರಾಮಗಿರಿ, ಯಲ್ಲಪ್ಪ ರಾಮಗಿರಿ, ಮಣಿಕಂಠ ಭಜಂತ್ರಿ, ವರುಣ ಭಜಂತ್ರಿ, ತಿಲಕ್ ಭಜಂತ್ರಿ ಎಂಬ ಆರು ಜನರನ್ನು ಬಂಧಿಸಿದ್ದು, ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಗಣೇಶ ಸಿದ್ದಾಪುರ ಅವರ ಪತ್ನಿ ಕಾವ್ಯ ಎನ್ನುವವರು ವಿನಾಯಕ ರೋಣ ಎಂಬಾತನ ವಿರುದ್ಧ ಪ್ರತಿದೂರು ದಾಖಲಿಸಿದ್ದು, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕಾವ್ಯ ಎನ್ನುವವರಿಗೆ ವಿನಾಯಕ ರೋಣ ಎಂಬ ವ್ಯಕ್ತಿ ಪೋನ್ ಮತ್ತು ಮೆಸೇಜ್ ಮೂಲಕ ಕಿರುಕುಳ ನೀಡಿದ್ದ. ಈ ವಿಷಯ ತಿಳಿದು ಕೋಪಗೊಂಡ ಕಾವ್ಯ ಪತಿ ಹಾಗೂ ಅವರ ಸ್ನೇಹಿತರು ಈ ರೀತಿ ಮಾಡಿದ್ದಾರೆ. ಮೀಟರ್ ಬಡ್ಡಿಗೂ ಈ ಘಟನೆಗೂ ಸಂಬಂಧವಿಲ್ಲ. ಈಗಾಗಲೇ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರುಗಳು ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications