ತೀರ್ಥಹಳ್ಳಿ-ಶಿವಮೊಗ್ಗ ಎನ್‌ಎಚ್: ಕೇಂದ್ರದಿಂದ 156 ಕೋಟಿ ರೂ. ಮಂಜೂರು
ಬೆಂಗಳೂರು, ಮಾರ್ಚ್ 28: ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯೋಜನೆಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರ್ಕಾರ 156 ಕೋಟಿ ರೂ. ಮಂಜೂರು ಮಾಡಿದೆ.
ಈ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿಯಲ್ಲಿ ಬರುವ ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ, ಅತ್ಯಾಧುನಿಕ ಮೇಲ್ಸುತೇವೆ ನಿರ್ಮಾಣ ಕಾಮಗಾರಿಗೆ , ಕೇಂದ್ರ ಸರಕಾರದ ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ. 58 ಕೋಟಿ ರೂಪಾಯಿಗಳ ವೆಚ್ಚದ ಈ ಕಾಮಗಾರಿಯನ್ನು ಸದ್ಯದಲ್ಲಿಯೇ ಎತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮೇಲ್ಸೇತುವೆ ನಿರ್ಮಾಣದ ಅಗತ್ಯದ ಕುರಿತು ಈ ಹಿಂದೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಯಾಗಿದ್ದು. ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರೂ ಸಹ ಮೇಲ್ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವರ ಜತೆ ಸಮಾಲೋಚಿಸಿದ್ದರು ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸಲು ಕೋರಿದ್ದರು ಎಂದೂ ಗೃಹ ಸಚಿವರು ಹೇಳಿದ್ದಾರೆ.

ಭಾರತೀಪುರ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯಷ್ಟೇ ಅಲ್ಲದೆ ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯಿಂದ, ಆಗುಂಬೆವರೆಗೆ 14.77 ಕಿಲೊಮೀಟರ್ ರಾಷ್ಟ್ರೀಯ ಹೆದ್ದಾರಿ 169-A ಗೆ ದ್ವಿಪಥ ಪಿಎಸ್, (10 ಮೀಟರ್) ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರೂ 96.20 ಕೋಟಿಗೆ ಅನುಮೋದನೆ ಸಹ ನೀಡಲಾಗಿದ್ದು, ಕಾಮಗಾರಿ ಚುರುಕಿಗೆ ಸಹಾಯವಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ಈ ಎರಡೂ ಕಾಮಗಾರಿಗಳಿಗೆ ಅನುಮತಿ ನೀಡಿ ಅನುದಾನ ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಜಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ, ಹಾಗೂ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಧನ್ಯವಾದ ತಿಳಿಸಿದ್ದೇನೆ ಎಂದು ಹೇಳಿದರು.












Click it and Unblock the Notifications