ವಿಜಯ್ ಭಾಸ್ಕರ್ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ?

ಬೆಂಗಳೂರು, ಜೂನ್ 29 : ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ.ವಿಜಯಭಾಸ್ಕರ್ ನೇಮಕಗೊಳ್ಳುವ ಸಾಧ್ಯತೆ ಇದೆ. ಹಾಲಿ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಸೇವಾವಧಿ 2 ತಿಂಗಳ ಕಾಲ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಕೇಂದ್ರ ಸರ್ಕಾರ ಕೆ.ರತ್ನಪ್ರಭಾ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲು ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಆದ್ದರಿಂದ, ಮುಂದಿನ ಮುಖ್ಯ ಕಾರ್ಯದರ್ಶಿಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಅರ್ಹರನ್ನು ನೇಮಕ ಮಾಡಲು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಲಾಗಿತ್ತು.

vidhana soudha

ವಿಜಯಭಾಸ್ಕರ್ ಅವರು 1983ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಬಿಬಿಎಂಪಿಯ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಶನಿವಾರ ಅಥವ ಸೋಮವಾರ ಅವರು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರವಹಿಸಿಕೊಳ್ಳುವ ಸಾಧ್ಯತೆ ಇದೆ.

2017ರ ನವೆಂಬರ್‌ನಲ್ಲಿ 1981ನೇ ಬ್ಯಾಚ್ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ವಿಜಯಭಾಸ್ಕರ್ ಅವರ ಹೆಸರು ಮುಖ್ಯಕಾರ್ಯದರ್ಶಿ ಹುದ್ದೆಗೆ ಕೇಳಿಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+