ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18 ರಿಂದ 44 ವಯೋಮಾನದ ಈ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ

|
Google Oneindia Kannada News

ಚಿತ್ರದುರ್ಗ, ಮೇ 22: ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾಕರಣವನ್ನು ಮೇ 22ರಿಂದ ಪ್ರಾರಂಭಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಗುರುತಿಸಿರುವ ಕೊರೊನಾ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುವುದು.

ಕೊರೊನಾ ಮುಂಚೂಣಿ ಕಾರ್ಯಕರ್ತರು:

ಅಂಗವೈಕಲ್ಯ ಹೊಂದಿರುವ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ, ಸ್ಮಶಾನ, ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು.

Karnataka To Resume Covid Vaccination For 18-44 Age Group For Priority Groups

ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು, ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆಯ ಸಿಬ್ಬಂದಿಗಳು, ಬೀದಿಬದಿ ವ್ಯಾಪಾರ ಮಾಡುವವರು, ಭದ್ರತೆ ಮತ್ತು ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು, ವಯೋವೃದ್ಧರ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು.

ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ, ಗ್ಯಾಸ್ ಸರಬರಾಜು ಮಾಡುವವರು, ಔಷಧಿ ತಯಾರಿಸುವ ಕಂಪನಿ ಸಿಬ್ಬಂದಿಗಳು, ಆಸ್ಪತ್ರೆಗೆ ಆಕ್ಸಿಜನ್ ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು. ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು (ವೃದ್ಧಾಶ್ರಮ ವಾಸಿಗಳು, ನಿರ್ಗತಿಕರು), ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೆಲಸಗಾರರು ಸೇರಿದ್ದಾರೆ.

Karnataka To Resume Covid Vaccination For 18-44 Age Group For Priority Groups

ಆದ್ಯತೆ ಗುಂಪು:

ಕಟ್ಟಡ ಕಾರ್ಮಿಕರು, ಟೆಲಿಕಾಂ ಮತ್ತು ಇಂಟರ್‍ನೆಟ್ ಸೇವಾದಾರರು, ವಿಮಾನಯಾನ ಸಂಸ್ಥೆಗಳ ಸಿಬ್ಬಂದಿಗಳು, ಬ್ಯಾಂಕ್ ಸಿಬ್ಬಂದಿ, ಪೆಟ್ರೋಲ್ ಬ್ಯಾಂಕ್ ಕೆಲಸಗಾರರು, ಚಿತ್ರೋದ್ಯಮದ ಕಾರ್ಮಿಕರು, ಕಾರ್ಯಕರ್ತ, ಸಿಬ್ಬಂದಿ, ಅಡ್ಡೋಕೇಟ್‍ಗಳು, ಹೋಟೆಲ್ ಮತ್ತು ಅತಿಥ್ಯ ಸೇವಾದಾರರು, ಕೆಎಂಎಫ್ ಸಿಬ್ಬಂದಿಗಳು, ರೈಲ್ವೆ ಸಿಬ್ಬಂದಿಗಳು, ಗಾರ್ಮೆಂಟ್ ಕಾರ್ಖಾನೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು, ಜಿಎಐಎಲ್ ಸಿಬ್ಬಂದಿಗಳು, ಆರ್‍ಎಸ್‌ಕೆ ಕೆಲಸಗಾರರು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವ ಆಟಗಾರರು, ಸ್ವಧಾರ್ ಗೃಹ ವಾಸಿಗಳು ಮತ್ತು ರಾಜ್ಯ ಮಹಿಳಾ ನಿಲಯವಾಸಿಗಳು (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ) ಹಿಂದೂಸ್ತಾನ್ ಏರೋನಾಟಿಕ್ಸ್ ಸಂಸ್ಥೆಯ ಸಿಬ್ಬಂದಿಗಳು ಸೇರಿದ್ದಾರೆ.

Karnataka To Resume Covid Vaccination For 18-44 Age Group For Priority Groups

ಮೇ 22 ರಿಂದ ರಾಜ್ಯ ಸರ್ಕಾರದ ಆದೇಶದಂತೆ 18 ರಿಂದ 44 ವರ್ಷ ವಯೋಮಾನದ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ವಲಯದ ಫಲಾನುಭವಿಗಳಿಗೆ ಲಸಿಕಾ ಅಧಿವೇಶನ ನಡೆಸಲು ಆದೇಶವಾಗಿರುವುದರಿಂದ ಈ ವಯೋಮಾನದ ಲಸಿಕಾ ಫಲಾನುಭವಿಗಳಿಗೆ ಲಸಿಕಾ ಅಧಿವೇಶನ ನಡೆಸಲು ಅನುಮತಿ ನೀಡಿದೆ.

Recommended Video

Dhoni ದಾಖಲೆ ಅಳಿಸೋಕೆ ಇನ್ನೂ ಯಾರ ಕೈಯಲ್ಲೂ ಆಗಿಲ್ಲ | Oneindia Kannada

English summary
Karnataka to resume Covid vaccination for 18-44 age group from May 22. Govt-identified frontline workers and priority groups will be vaccinated first, Health and Medical Education Minister K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X