Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಮತ್ತು ನಾಳೆ ಪವರ್ ಕಟ್: ಎಲ್ಲೆಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ನವೆಂಬರ್ವ 14: ಬೆಂಗಳೂರು ನಗರದ ಹಲವೆಡೆ ಇಂದು (ಗುರುವಾರ, ನವೆಂಬರ್ 14) ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಬೆಸ್ಕಾಂ ಕಾಮಗಾರಿ ಹಿನ್ನೆಲ್ಲೆ ಬೆಂಗಳೂರಿನಲ್ಲಿ 2 ದಿನಗಳು ವಿದ್ಯುತ್ ವ್ಯತ್ಯಯವಾಗಲಿದೆ. ಗುರುವಾರ ಹಾಗೂ ಶುಕ್ರವಾರ 2 ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
ಇಂದು (ಗುರುವಾರ) ಬೆಂಗಳೂರು ನಗರದ 66/11 ಕೆ.ವಿ. ಕೊಡ್ಯೆಸ್ ಗ್ಲಾಸ್ ಪ್ಯಾಕ್ಟರಿ ನವೆಂಬರ್ 14 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.

ರಾಜಾನಕುಂಟೆಯ ವಿದ್ಯುತ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ, ಹೆಬ್ಬಾಲದ ಸಿ-7 ಉಪವಿಭಾಗದ ವ್ಯಾಪ್ತಿಯ ಪ್ರದೇಶಗಳಲ್ಲಿ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ನವೆಂಬರ್ 14 ರಂದು ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಕೋಣನಕುಂಟೆ, ತಲಗಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಅವಲಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾವ‍್ಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ನವೆಂಬರ್ 15 ರಂದು ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
66/11 ಕೆವಿ ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ನವೆಂಬರ್ 15 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.












Click it and Unblock the Notifications