Waqf Board: ವಕ್ಫ್ ಬೋರ್ಡ್ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ ಬಿಜೆಪಿ
ವಕ್ಫ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಇಂದು ಪ್ರತಿಭಟನೆಗಿಳಿದಿದ್ದಾರೆ. ಹಾವೇರಿಯಲ್ಲಿ ವಕ್ಫ್ ಮಂಡಳಿ ಒತ್ತುವರಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ವಕ್ಫ್ ಬೋರ್ಡ್ ಅತಿಕ್ರಮಣ ವಿರೋಧಿಸಿ ಧರಣಿ ನಿರತರು, ರೈತರು, ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೆ ಸಾಥ್ ನೀಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ಕುತಂತ್ರದ ಬೆಂಬಲದಿಂದ ದಿನೇ ದಿನೆ ಹದ್ದು ಮೀರುತ್ತಿರುವ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿಯ ನಾಯಕರು, ಕಾರ್ಯಕರ್ತರು, ರೈತರು, ದಲಿತರು, ಆಸ್ತಿಪಾಸ್ತಿ ಕಳೆದುಕೊಂಡವರು ಒಟ್ಟಾಗಿ ಲೂಟಿಕೋರ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲಾಗುತ್ತಿದೆ ಎಂದು ಹೇಳಿದೆ.

ಬಿಜೆಪಿಯ ಹೋರಾಟಕ್ಕೆ ನಾಡಿನ ಜನಸಾಮಾನ್ಯರು ಕೈ ಜೋಡಿಸುವ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿ, ವಕ್ಫ್‌ಗೆ ಕಡಿವಾಣ ಹಾಕಿಸಬೇಕಿದೆ ಎಂದು ಕರೆ ನೀಡಿದೆ. ಪ್ರತಿಭಟನೆ ವೇಳೆ ಮಾತನಾಡಿದ ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರೈತರ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ. ಇಂದು ಕಲಬುರಗಿಯಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಸಚಿವ ಜಮೀರ್ ಅಹಮದ್ ಖಾನ್ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ವಕ್ಫ್ ಬೋರ್ಡ್ ಅನ್ನು ಸರ್ಕಾರಿ ದಾಖಲೆಗಳಿಂದ ತೆಗೆದುಹಾಕಬೇಕು. ಇದನ್ನು ಆಗ್ರಹಿಸಿ ನಮ್ಮ ಬಿಜೆಪಿ ನಾಯಕರು ನವೆಂಬರ್ 21, 22, 23ರಂದು ಮೂರು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಜಮೀನನ್ನೆಲ್ಲ ವಕ್ಫ್ ಬೋರ್ಡ್ ವಶಪಡಿಸಿಕೊಳ್ಳುತ್ತಿರುವ ಕಾರಣಕ್ಕೆ ಅದನ್ನು ಸರ್ಕಾರಿ ದಾಖಲೆಗಳಿಂದಲೇ ತೆಗೆದುಹಾಕಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರು ವಶಕ್ಕೆ: ರಾಜ್ಯ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಆಸ್ತಿ ಕಬಳಿಸುತ್ತಿದೆ ಎಂದು ಆರೋಪಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಮ್ಮ ಭೂಮಿ ನಮ್ಮ ಹಕ್ಕು ಘೋಷವಾಕ್ಯದಡಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು. ರೈತರು ಹಾಗೂ ಇತರರ ಆಸ್ತಿಯ ಪಹಣಿಯಲ್ಲಿ ದಾಖಲಿಸಿರುವ ವಕ್ಫ್ ಹೆಸರನ್ನು ಕೂಡಲೇ ತೆಗೆಯಬೇಕು ಎಂದು ಪಟ್ಟು ಹಿಡಿದರು.
ಮಠಾಧೀಶರ ಸಾಥ್: ವಕ್ಫ್ ಬೋರ್ಡ್ ನೋಟಿಸ್ ಖಂಡಿಸಿ ನೇಗಿಲ ಯೋಗಿ ಸ್ವಾಭಿಮಾನಿ ವೇದಿಕೆ ವತಿಯಿಂದ ವಕ್ಫ್ ಹಠಾವೊ, ಅನ್ನದಾತ ಬಚಾವೊ ಎನ್ನುವ ಬೃಹತ್ ಪ್ರತಿಭಟನಾ ಮೆರವಣಿಗೆ ಇಂದು ಹಾವೇರಿಯಲ್ಲಿ ನಡೆಯಿತು. ನೂರಾರು ಮಠಾಧೀಶರು, ರೈತ ಮುಖಂಡರು, ರೈತರು, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಖಾನ್, ವಕ್ಫ್ ಬೋರ್ಡ್ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಪ್ರಮುಖ ಮಠಗಳ ಮಠಾಧೀಶರು ಈ ಪ್ರತಿಭಟನೆಗೆ ಸಾಥ್ ನೀಡಿದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications