ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ವರುಣಾರ್ಭಟ: ಸಂಕಷ್ಟಕ್ಕೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ಸಭೆ

|
Google Oneindia Kannada News

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತಿವೃಷ್ಠಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಶುಕ್ರವಾರ (ಜುಲೈ 15) ಮಧ್ಯಾಹ್ನ 1:30 ಕ್ಕೆ ದೇವನಹಳ್ಳಿಯಿಂದ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಭಾರಿ ಮಳೆಹಾನಿಗೆ ಒಳಗಾಗಿರುವ ಇಪ್ಪತೊಂದು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಯ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆಯಲಿದ್ದಾರೆ.

Today CM Basavaraj Bommai Meeting With Officials Over Rain Effect

ಸಭೆಯಲ್ಲಿ ಈ ಜಿಲ್ಲೆಗಳ ಜಿಲ್ಲಾಧಿಕಾರಿ, ಸಿಎಒ, ಎಸ್ಪಿಗಳಿಂದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಿಎಂ ಜೊತೆಗೆ ಸಂಬಂಧಿಸಿದ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಇನ್ನು, "ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾಗಿರುವ ಕಾರವಾರ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗೆ ಮುಂದಿನ ವಾರ ಪ್ರವಾಸ ಕೈಗೊಳ್ಳುವುದಾಗಿ" ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 13 ರಂದು ಉಡುಪಿಯಲ್ಲಿ ತಿಳಿಸಿದ್ದರು.

Recommended Video

England ವಿರುದ್ಧ ಹೀನಾಯವಾಗಿ ಸೋತ್ಮೇಲೆ ಟೀಂ‌ ಇಂಡಿಯಾಗೇ ಬಿಗ್ ಶಾಕ್ *Cricket | OneIndia Kannada

English summary
CM basavaraj bommai will conduct meeting with officials over rain effect on there district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X