ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿವಾದದ ಹೈಕೋರ್ಟ್‌ನಲ್ಲಿಂದು ವಿಚಾರಣೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಮೇ 17. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧ ಸುಪ್ರೀಂಕೋರ್ಟ್ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ, ತಾಲೂಕು ಪಂಚಾಯ್ತಿ ಸೇರಿದಂತೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರ ಮುನ್ನೆಲೆಗೆ ಬಂದಿದೆ.

ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಜ್ಯ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧದ ಚುನಾವಣಾ ಆಯೋಗ ಸಲ್ಲಿಸಿರುವ ಮೆಮೋ ಕುರಿತು ನ್ಯಾ.ಎಸ್. ಜಿ.ಪಂಡಿತ್ ಮತ್ತು ನ್ಯಾ.ಎಂ.ಜಿ ಉಮಾ ಅವರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಲಿದೆ.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ,ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ನೀಡಿ, ಬಾಕಿ ಇರುವ ಎಲ್ಲ ಸಂಸ್ಥೆಗಳ ಚುನಾವಣೆಯನ್ನು ನಡೆಸುವಂತೆ ಕಟ್ಟಾಜ್ಞೆ ವಿಧಿಸಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಬೇಕಾಗಿದೆ ಎಂದು ಮನವಿ ಮಾಡಲಿದ್ದಾರೆ.

Today HC will hear the petition filed by State Election commission

ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ ಎಂದು ಅವರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡಲಿದ್ದಾರೆ.

ಆಯೋಗದ ಸಿದ್ಧತೆಗೆ ಸರ್ಕಾರ ಬ್ರೇಕ್:

ರಾಜ್ಯ ಚುನಾವಣಾ ಆಯೋಗ ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿತ್ತು. ಅದಕ್ಕಾಗಿ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿಯನ್ನೂ ಸಹ ಪ್ರಕಟ ಮಾಡಿತ್ತು ಹಾಗೂ ಮೀಸಲು ನಿಗದಿಯ ಕರಡು ಸಹ ಪ್ರಕಟಿಸಲಾಗಿತ್ತು. ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲು ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ಇನ್ನೂ ವಿಚಾರಣಾ ಹಂತದಲ್ಲಿದೆ.

English summary
Urban Local body elections: Today HC will hear the petition filed by State Election commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X