ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಉಪ ಚುನಾವಣೆ: ಇಂದು ನಾಮಪತ್ರಗಳ ಪರಿಶೀಲನೆ!

|
Google Oneindia Kannada News

ಬೆಂಗಳೂರು, ಅ. 11: ರಾಜ್ಯದಲ್ಲಿ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿಜಯಪುರ ಜಿಲ್ಲೆ ಸಿಂದಗಿ ಹಾಗೂ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ದಾಖಲೆ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅ. 30 ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ. 8 ಕೊನೆಯ ದಿನವಾಗಿತ್ತು.

ಇಂದು ಅಕ್ಟೋಬರ್ 11 ರಂದು ಎಲ್ಲ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೂರು ಪ್ರಮುಖ ಪಕ್ಷಗಳ ಜೊತೆಗೆ ಇತರ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೂರು ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಉಪ ಚುನಾವಣೆಯಾಗಿದೆ. ಹೀಗಾಗಿ ಚುನಾವಣಾ ಕಣದಲ್ಲಿ ಹೆಚ್ಚು ಅಭ್ಯಥಿಗಳು ಇದ್ದಷ್ಟು ರಾಜಕೀಯ ನಾಯಕರಿಗೆ ಆತಂಕ ಹೆಚ್ಚು. ಹೀಗಾಗಿ ಇಂದು ನಡೆಯಲಿರುವ ನಾಮಪತ್ರ ಪರಿಶೀಲನೆ ಮೇಲೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಗಮನವಿದೆ.

ನಾಮಪತ್ರಗಳು

ನಾಮಪತ್ರಗಳು "ಸಿಂಧು'ವಾಗುವುದು ಹೇಗೆ?

ವಿಧಾನಸಭೆ ಉಪ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರವನ್ನು ಇಂದು ಸೋಮವಾರ ಪರಿಶೀಲನೆ ಮಾಡಲಾಗುತ್ತಿದೆ. ಪ್ರಮುಖವಾಗಿ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಲಿದ್ದಾರೆ. ನಾಮಪತ್ರದೊಂದಿಗೆ ಅಭ್ಯರ್ಥಿಯು ಕ್ರಿಮಿನಲ್ ಅಪರಾಧದಲ್ಲಿ ಜೈಲುವಾಸ ಅನುಭವಿಸಿದ ಬಗ್ಗೆ, ಸ್ಪರ್ಧಿ ಹಾಗೂ ಆತನ ಕುಟುಂಬ ಜೊತೆಗೆ ಅಭ್ಯರ್ಥಿಯ ಅವಲಂಬಿತರು ಹೊಂದಿರುವ ಆಸ್ತಿ ವಿವರ, ಸರ್ಕಾರದಕ್ಕೆ ಸಲ್ಲಿಸಬೇಕಾದ ಸಾಲದ (ಇದ್ದಲ್ಲಿ) ಮೊತ್ತ ಹಾಗೂ ರಾಜಕೀಯ ಪಕ್ಷಗಳ ಬಿ ಪಾರಂ ಲಗತ್ತಿಸಿದರಬೇಕು. ಈ ದಾಖಲೆಗಳು ಇಲ್ಲದ ಅಥವಾ ತಪ್ಪಾಗಿರುವ ನಾಮಪತ್ರಗಳು ಅಸಿಂಧು ಆಗುತ್ತವೆ. ಈ ಪರಿಶೀಲನೆ ಇಂದು ನಡೆಯಲಿದೆ.

ಒಟ್ಟು ಅಭ್ಯರ್ಥಿಗಳು ಹಾಗೂ ಒಟ್ಟು ನಾಮಪತ್ರಗಳು!

ಒಟ್ಟು ಅಭ್ಯರ್ಥಿಗಳು ಹಾಗೂ ಒಟ್ಟು ನಾಮಪತ್ರಗಳು!

ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಳೆದ ಶುಕ್ರವಾರ (ಅ.8) ಕೊನೆಯ ದಿನವಾಗಿತ್ತು. ಹೀಗಾಗಿ ಮೂರು ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಬ್ಬ ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ನಾಮಪತ್ರವ ಸಲ್ಲಿಸಲು ಅವಕಾಶವಿದೆ. ಸಲ್ಲಿಸಿದ ನಾಮಪತ್ರಗಳಲ್ಲಿ ಸರಿಯಾಗಿರುವ ನಾಮಪತ್ರವನ್ನು ಸಿಂಧು ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈಗ ಚುನಾವಣೆ ನಡೆಯಲಿರುವ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳು ಒಟ್ಟು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಉಪ ಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆೆಸ್ ಪಕ್ಷದಿಂದ ಅಶೋಕ ಮನಗೂಳಿ, ಜೆಡಿಎಸ್ ಪಕ್ಷದಿಂದ ನಾಜಿಯಾ ಶಕೀಲ್ ಅಂಗಡಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ, ರಾಷ್ಟ್ರೀಯ ಸಮಾಜ ಪಕ್ಷದಿಂದ ತಲಾ ಒಂದು ಹಾಗೂ ಪಕ್ಷೇತರರಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಹಾನಗಲ್ ಕ್ಷೇತ್ರದಲ್ಲಿ ಕಣದಲ್ಲಿ ಉಳಿಯುತ್ತಾರಾ ಎಲ್ಲ ಅಭ್ಯರ್ಥಿಗಳು?

ಹಾನಗಲ್ ಕ್ಷೇತ್ರದಲ್ಲಿ ಕಣದಲ್ಲಿ ಉಳಿಯುತ್ತಾರಾ ಎಲ್ಲ ಅಭ್ಯರ್ಥಿಗಳು?

ಅದೇ ರೀತಿ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯ ಶಿವರಾಜ್ ಸಜ್ಜನ್, ಕಾಂಗ್ರೆೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ ಪಕ್ಷದಿಂದ ನಿಯಾಜ್ ಶೇಕ್ ಸೇರಿದಂತೆ ಒಟ್ಟು 29 ಅಭ್ಯರ್ಥಿಗಳಿಂದ 45 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ 2, ಲೋಕಶಕ್ತಿ 3, ಕನ್ನಡ ದೇಶದ ಪಕ್ಷ 1, ರೈತ ಭಾರತ ಪಕ್ಷ 1 ಹಾಗೂ ಪಕ್ಷೇತರರಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ.

Recommended Video

Dhoni ಪಂದ್ಯ ಮುಗಿದ ನಂತರ ಮಾಡಿದ್ದೇನು | Oneindia Kannada
ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ!

ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ!

ಇಂದು ಎಲ್ಲ ಅಭ್ಯರ್ಥಿಗಳ ನಾಮಪತ್ರವನ್ನು ಪರಿಶೀಲನೆ ಮಾಡಲಾಗುತ್ತದೆ. ಬಳಿಕ ಸಿಂಧುವಾದ ನಾಮಪತ್ರಗಖ ಕುರಿತು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಸಂಜೆ ಮಾಹಿತಿ ನೀಡುತ್ತಾರೆ. ಜೊತೆಗೆ ನಾಮಪತ್ರ ವಾಪಾಸ್ ಪಡೆಯಲು ಇದೇ ಅಕ್ಟೋಬರ್ 13 ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇಚ್ಛಿಸದ ಅಭ್ಯರ್ಥಿಯು ಅ. 13ರೊಳಗೆ ನಾಮಪತ್ರ ವಾಪಾಸ್ ಪಡೆಯಲು ಅವಕಾಶವಿದೆ. ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆದು ಫಲಿತಾಂಶ ಬರಲಿದೆ.

English summary
Today is Karnataka Assembly By Election Nomination Scrutiny Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X