ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭ

|
Google Oneindia Kannada News

ಬೆಂಗಳೂರು, ಮೇ19: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶವು ಇಂದು (ಮೇ19) ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ‌ಸಚಿವ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಶಿಕ್ಷಣ ಸಚಿವರು 12.30ಕ್ಕೆೆ ಫಲಿತಾಂಶವನ್ನು ಘೋಷಿಸಿದ ಬಳಿಕ ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in/ ಮೂಲಕ ವೀಕ್ಷಿಸಬಹುದಾಗಿದೆ.

ಫೋನ್‌ಗೆ ಫಲಿತಾಂಶ ರವಾನೆ

ಇದಲ್ಲದೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

SSLC ಪರೀಕ್ಷೆಯನ್ನು ಬರೆದವರೆಷ್ಟು..?

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಂದರ್ಭದಲ್ಲೂ ಹಿಜಾಬ್ ಗೊಂದಲ ಮುಂದುವರೆದಿತ್ತು. ಆದರೆೆ ಎಲ್ಲಿಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8,73,846 ವಿದ್ಯಾರ್ತಿಗಳು ಪರೀಕ್ಷೆಯನ್ನು ಬರೆಯಲು ನೊಂದಣಿಯನ್ನು ಮಾಡಿಕೊಂಡಿದ್ದರು. ಇದರಲ್ಲಿ ಬಹುತೇಕರು ಪರೀಕ್ಷೆಗೆ ಹಾಜರಾಗಿದ್ದರೂ ಬೆರಳೆಣಿಕೆಯ ವಿದ್ಯಾರ್ಥಿಗಳಷ್ಟೇ ಗೈರು ಹಾಜರಾಗಿದ್ದರು.

Today Karnataka SSLC Result

ಸರಳೀಕೃತ ಪರೀಕ್ಷೆ.. ಸರಳೀಕೃತ ಮೌಲ್ಯಮಾಪನ, ಗ್ರೇಸ್ ಮಾರ್ಕ್ಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಆರಂಭದಿಂದಲೂ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿದ್ಯಾರ್ಥಿಗಳಿಗೆ ಧೈರ್ಯವನ್ನು ತುಂಬುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು ಮತ್ತು ಕೋವಿಡ್ ಕಾರಣದಿಂದಾಗಿ ಕೆಲವು ಶಾಲೆೆಗಳಲ್ಲಿ ಸರಿಯಾಗಿ ಪಠ್ಯವನ್ನು ಬೋಧನೆ ಮಾಡಿರಲಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಮಕ್ಕಳ ಆತಂಕವನ್ನು ದೂರ ಮಾಡಲು ಸರಳವಾದ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಸುಲಭವಾದ ಪ್ರಶ್ನೆ ಪತ್ರಿಕೆಯಾದ್ದರಿಂದ ಸಂತಸಗೊಂಡಿದ್ದರು. ಇನ್ನು ಮೌಲ್ಯ ಮಾಪನದ ವೇಳೆಯು ಶಿಕ್ಷಕರು ಕಠಿಣ ದೋರಣೆ ತೋರದೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೌಲ್ಯಮಾಪನ ಕಾರ್ಯವನ್ನು ಮುಗಿಸಿದ್ದಾರೆ. ಇನ್ನು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ಸಹ ಸಿಗುತ್ತಿರುವುದರಿಂದ ಫಲಿತಾಂಶದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ.

Today Karnataka SSLC Result

ಎಸ್‌ಎಸ್‌ಎಲ್‌ಸಿ ಬೋರ್ಡ್‌ ವೆಬ್‌ಸೈಟ್‌ನಲ್ಲಿಯೂ ರಿಸಲ್ಟ್ (KSEEB)

ಇನ್ನು ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ (KSEEB) ವೆಬ್ ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗಲಿದೆ. ಮೊದಲು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರವರು ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ. ಎಷ್ಟು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ, ಡಿಸ್ಟಿಂಕ್ಷನ್, ಪ್ರಥಮ ಶ್ರೇಣಿ, ದ್ವಿತೀಯ ಶ್ರೇಣಿ ಪಡೆದವರರು ಎಷ್ಟು ವಿದ್ಯಾರ್ಥಿಗಳು ಪಡೆದಿದ್ದಾರೆ. ಯಾವ ಯಾವ ಜಿಲ್ಲೆ ಪ್ರಥಮ ಎಂಬದನ್ನೆಲ್ಲಾ ಫಲಿತಾಂಶದ ವೇಳೆ ಶಿಕ್ಷಣ ಸಚಿವರು ವಿವರಿಸಲಿದ್ದಾರೆ. ಬಳಿಕ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡುವುದು ಹೇಗೆ..?

ವಿದ್ಯಾರ್ಥಿಗಳು KSEEB ವೆಬ್ ಸೈಟ್ ನಲ್ಲಿ sslc result ಅನ್ನು ಆಯ್ಕೆಮಾಡಬೇಕು ಅಥವಾ https://karresults.nic.in/ ಒಪನ್ ಮಾಡಿ, ಆ ಬಳಿಕ ನಿಮ್ಮ ನೊಂದಣಿ ಸಂಖ್ಯೆ (ರಿಜಿಸ್ಟರ್ ನಂಬರ್) ಅನ್ನು ನಮೂದಿಸಬೇಕು. ವಿದ್ಯಾರ್ಥಿಯ ಪ್ರವೇಶ ಪತ್ರ (Hall ticket) ನಮೂದಾಗಿರುವ ಜನ್ಮದಿನಾಂಕವನ್ನು ಎಂಟ್ರಿ ಮಾಡಬೇಕು. ಆ ಬಳಿಕ View Your Result ಎಂಬುದರ ಮೇಲೆ ಕ್ಲಿಕ್ ಮಾಡಿದ್ರೆ ಫಲಿತಾಂಶ ಕಾಣಲಿದೆ.

ಶಿಕ್ಷಣ ಸಚಿವರ ಸಂದೇಶವೇನು..?

ಶಿಕ್ಷಣ ಸಚಿವ ಬಿಸಿ ನಾಗೇಶ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭಕ್ಕೂ ಮುನ್ನವೂ ಆತ್ಮಸ್ಥೈರ್ಯ ಹೆಚ್ಚಿಸುವ ಮಾತನಾಡುತ್ತಿದ್ದರು. "ವಿದ್ಯಾರ್ಥಿಗಳು ಸಂಭ್ರಮಿಸುವ ಕ್ಷಣವಿದು. ಫಲಿತಾಂಶ ಪ್ರಕಟವಾಗಲಿದೆ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸುತ್ತೇನೆ. ವಿದ್ಯಾರ್ಥಿಗಳು ಧೈರ್ಯವಾಗಿರಬೇಕು , ವಿಶ್ವಾಸದಿಂದ ಇರಬೇಕು ಉತ್ತಮ ಫಲಿತಾಂಶ ಲಭ್ಯವಾಗಲಿದೆ'' ಎಂದು ತಿಳಿಸಿದ್ದಾರೆ.

English summary
Karnataka SSLC Exam Result 2022, Education minister Bc Nagesh announce Karnataka SSLC exam results today 12.30pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X