Todays Chanakya Exit Poll: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಟುಡೇಸ್ ಚಾಣಕ್ಯ
ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯವಾದ ಬೆನ್ನಲ್ಲೇ ಹಲವು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಹಲವು ಸಮೀಕ್ಷೆಗಳು ಅತಂತ್ರ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿವೆ. ಆದರೆ ಟುಡೇಸ್ ಚಾಣಕ್ಯ ಮಾತ್ರ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದೆ.
ಟುಡೇಸ್ ಚಾಣಕ್ಯ ಸರ್ವೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 120 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದೆ. ಇನ್ನು ಆಡಳೀತಾರೂಢ ಬಿಜೆಪಿ 92 ಸ್ಥಾನಗಳಿಗೆ ಕುಸಿಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಇನ್ನೂ ಅಚ್ಚರಿ ಎನ್ನುವಂತೆ ಜೆಡಿಎಸ್ ಕೇವಲ 12 ಸ್ಥಾನಗಳಲ್ಲಿ ಜಯ ಗಳಿಸುತ್ತದೆ ಎಂದು ಹೇಳಲಾಗಿದೆ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಸರ್ಕಾರ ರಚನೆಗೆ 113 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಆದರೆ ಸುಭದ್ರ ಸರ್ಕಾರ ನೀಡುವ ಉದ್ದೇಶ ಹೊಂದಿರುವ ಕಾಂಗ್ರೆಸ್ 140ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದೆ.
ಮೇ 10 (ಇಂದು)ರಂದು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಈಗಾಗಲೇ ಮತದಾರರ ತನ್ನ ತೀರ್ಪನ್ನು ನೀಡಿದ್ದಾನೆ, ಮೇ 13ರಂದು ಮತದಾರನ ಮನದಾಳ ಏನು ಎಂದು ಬಹಿರಂಗವಾಗಲಿದೆ. ಈ ಬಾರಿ ಚುನಾವಣೆಯನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯದಲ್ಲೆಡೆ ಸಂಚಾರ ಮಾಡಿ ಭರ್ಜರಿ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿ ಬೆಂಗಳೂರಿನಲ್ಲೇ ಮೂರು ದಿನ ರೋಡ್ ಶೋ ಮಾಡುವ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನ ಮಾಡಿದ್ದರು.












Click it and Unblock the Notifications