Today's Chanakya lok sabha Exit Poll Result 2024: ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಆಘಾತ ಕೊಟ್ಟ ಸಮೀಕ್ಷೆ
ವಿಧಾನಸಭೆ ಚುನಾವಣೆಯಲ್ಲಿ ಆಶ್ವಾಸನೆ ನೀಡಿದಂತೆ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದ ಕಾಂಗ್ರೆಸ್ ನಾಯಕರು, ಲೋಕಸಭಾ ಚುನಾವಣೆಯಲ್ಲಿ ಎರಡಂಕಿ ಸ್ಥಾನಗಳಲ್ಲಿ ಗೆಲ್ಲುವ ಉತ್ಸಾಹದಲ್ಲಿದ್ದರು. ಆದರೆ ಟುಡೇಸ್ ಚಾಣಕ್ಯ ನೀಡಿರುವ ಚುನಾವಣೋತ್ತರ ಸಮೀಕ್ಷೆ ವರದಿಗಳು ರಾಜ್ಯ ಕಾಂಗ್ರೆಸ್ ನಾಯಕರಿಗೆ ಆಘಾತ ನೀಡಿವೆ.
ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಮುಕ್ತಾಯವಾದ ಬಳಿಕ ಚುನಾವಣೋತ್ತರ ಸಮೀಕ್ಷೆ ಅಂಕಿ ಅಂಶಗಳು ಬಹಿರಂಗವಾಗಿದೆ. ವರದಿಗಳ ಪ್ರಕಾರ ದೇಶದಲ್ಲಿ ಎನ್‌ಡಿಎ ಹ್ಯಾಟ್ರಿಕ್ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಿದ್ದು, ಸತತ ಮೂರನೇ ಬಾರಿ ಮೋದಿ ಪ್ರಧಾನಿಯಾಗುವುದು ಖಚಿತ ಎನ್ನಲಾಗಿದೆ.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ ಎರಡಂಕಿ ದಾಟುವ ವಿಶ್ವಾಸದಲ್ಲಿತ್ತು. ಆದರೆ ಟುಡೇಸ್ ಚಾಣಕ್ಯ ನೀಡಿರುವ ಅಂಕಿ ಅಂಶಗಳು ಕರ್ನಾಟಕ ಕಾಂಗ್ರೆಸ್‌ಗೆ ಆಘಾತ ನೀಡಿವೆ.
ಎಷ್ಟು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು
ಟುಡೇಸ್ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ವರದಿಯ ಪ್ರಕಾರ ಕರ್ನಾಟದಲ್ಲಿ ಕಾಂಗ್ರೆಸ್ ಕೇವಲ 4 ± 4 ಸ್ಥಾನಗಳಲ್ಲಿ ಮಾತ್ರ ಗೆಲ್ಲುವ ಸಾಧ್ಯತೆ ಇದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ 24 ± 4 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ.
ಕಳೆದ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ. ಒಂದು ಕ್ಷೇತ್ರದಲ್ಲಿ ಜೆಡಿಎಸ್, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಬಳಿಕ ಪಾಠ ಕಲಿತಿದ್ದು, ಬಿಎಸ್‌ವೈ ಮತ್ತು ಪುತ್ರ ವಿಜಯೇಂದ್ರ ಅವರಿಗೆ ಪ್ರಾಮುಖ್ಯತೆ ನೀಡಿದು ಕೆಲಸ ಮಾಡಿದೆ ಎನ್ನಲಾಗಿದೆ. ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಜನರ ಮನಸ್ಸಿನಲ್ಲಿ ಏನಿದೆ ಎನ್ನುವುದು ಸ್ಪಷ್ಟವಾಗಲಿದೆ.












Click it and Unblock the Notifications