ಬೆಂಗಳೂರು: ಈ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಹೆಚ್ಚಳ: 2025 ರವರೆಗೂ ಇದೇ ದರ.!
ಬೆಂಗಳೂರು, ಮಾರ್ಚ್, 28: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸೇರಿದಂತೆ ಈ ಹೆದ್ದಾರಿಗಳ ಟೋಲ್ ಶುಲ್ಕ ಏಪ್ರಿಲ್ 1ರಿಂದ ಹೆಚ್ಚಳ ಆಗುತ್ತದೆ ಎನ್ನುವ ಮಾಹಿತಿ ಲಭ್ಯವಾಹಿದೆ. ಹಾಗಾದರೆ ಯಾವೆಲ್ಲ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ ಹಾಗೂ ಎಷ್ಟು ನಿಗದಿ ಮಾಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಏಪ್ರಿಲ್ 1ರಿಂದ ವಾಹನ ಸವಾರರು ಬೆಂಗಳೂರು-ಮೈಸೂರು ಹೆದ್ದಾರಿ, ಬೆಂಗಳೂರು-ಹೈದರಾಬಾದ್ ಹೆದ್ದಾರಿ ಮತ್ತು ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್‌ನ ಹೊಸಕೋಟೆ-ದೇವನಹಳ್ಳಿ ವಿಭಾಗವನ್ನು ಬಳಕೆ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿಸ ಮಾಡಬೇಕಾಗುತ್ತದೆ.

ಸಗಟು ಬೆಲೆ ಸೂಚ್ಯಂಕ ಪ್ರಕಾರ ಟೋಲ್ ಶುಲ್ಕ ಶೇಕಡಾ 3ರಿಂದ 14ರಷ್ಟು ಹೆಚ್ಚಳ ಆಗಿದೆ. ಈ ಶುಲ್ಕ 2025ರ ಮಾರ್ಚ್ 31ರವರೆಗೂ ಜಾರಿಯಲ್ಲಿರುತ್ತದೆ. ಆದರೆ ಬೆಂಗಳೂರು-ಮೈಸೂರು ಹೆದ್ದಾರಿ ಮತ್ತು ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಟೋಲ್ ಶುಲ್ಕವನ್ನು ಶೇಕಡಾ 3ರಷ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್‌ನ ಹೊಸಕೋಟೆ-ದೇವನಹಳ್ಳಿ ವಿಭಾಗದಲ್ಲಿ ಸಂವಾರ ಮಾಡುವ ವಾಹನಗಳು ಶೇಕಡಾ 14ರಷ್ಟು ಹೆಚ್ಚು ಪಾವತಿ ಮಾಡಬೇಕಾಗುತ್ತದೆ.
2023ರ ನವೆಂಬರ್ 17ರಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ STRRನ 39.6 ಕಿಲೋ ಮೀಟರ್ ದೊಡ್ಡಬಳ್ಳಾಪುರ-ಹೊಸಕೋಟೆ ವಿಭಾಗಕ್ಕೆ ಟೋಲ್ ಸಂಗ್ರಹಿಸಲು ಆರಂಭಿಸಿದ ಕೇವಲ 6 ತಿಂಗಳೊಳಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದಕ್ಕೆ ವಾಹನ ಸವಾರರು ಹಾಗೂ ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.
ಸ್ಯಾಟಲೈಟ್ ಟೌನ್ ರಿಂಗ್ ರೋಡ್‌ನ ದಾಬಾಸ್ ಪೇಟೆ-ದೊಡ್ಡಬಳ್ಳಾಪುರ ವಿಭಾಗದಲ್ಲಿ ಟೋಲ್ ಶುಲ್ಕವನ್ನು ಏಪ್ರಿಲ್‌ನಲ್ಲಿ ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮಾರ್ಚ್ 11ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 80 ಕಿಲೋ ಮೀಟರ್ ವ್ಯಾಪ್ತಿಯ STRRನ ಎರಡು ವಿಸ್ತರಣೆಗಳನ್ನು ಉದ್ಘಾಟನೆ ಮಾಡಿದ್ದರು.
ದಾಬಾಸ್ ಪೇಟೆ-ದೊಡ್ಡಬಳ್ಳಾಪುರ ಮಾರ್ಗವು ಸಾರ್ವಜನಿಕರಿಗೆ ಮುಕ್ತ ಆಗಿದ್ದು, ಟೋಲ್ ಸಂಗ್ರಹಿಸಲು ಗುತ್ತಿಗೆದಾರರ ಆಯ್ಕೆಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದದ್ದಾರೆ.












Click it and Unblock the Notifications