ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರ ಪರಮೇಶ್ವರ್, ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನ

By Sachhidananda Acharya
|
Google Oneindia Kannada News

Recommended Video

ಎಚ್ ಡಿ ಕೆ ಸಿ ಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ರೆ ಇವರು ಡಿ ಸಿ ಎಂ ಆಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ 22: ಬುಧವಾರ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಸಂಪುಟ ವಿಸ್ತರಣೆ ಸಂಬಂಧ ಇಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಡೆಸಿದ ಸಭೆಯಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿದ್ದು, ಬುಧವಾರ ಕುಮಾರಸ್ವಾಮಿ ಜೊತೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕುಮಾರಸ್ವಾಮಿ ಜತೆ ಪ್ರಮಾಣವಚನ ಸ್ವೀಕರಿಸುವವರು ಯಾರು?ಕುಮಾರಸ್ವಾಮಿ ಜತೆ ಪ್ರಮಾಣವಚನ ಸ್ವೀಕರಿಸುವವರು ಯಾರು?

ಡಾ. ಜಿ. ಪರಮೇಶ್ವರ್ ಅವರು ಹೊಸ ಮೈತ್ರಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ.

Tomorrow Kumaraswamy and Parameshwar taking oath

ಸಭೆಯ ನಂತರ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, "ಸಂಪುಟ ವಿಸ್ತರಣೆ ಸಂಬಂಧ ಇಂದು ನಾವು ತೀರ್ಮಾನ ತೆಗೆದುಕೊಂಡಿದ್ದೇವೆ. ಮೇ 25ರಂದು ಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ನಾಡಿದ್ದು (ಮೇ. 24) ಖಾತೆಗಳ ಹಂಚಿಕೆ ಬಗ್ಗೆ ನಿರ್ಧರಿಸುತ್ತೇವೆ. ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ," ಎಂದಿದ್ದಾರೆ.

ಸಭೆಯಲ್ಲಿ ಜೆಡಿಎಸ್ ನಿಂದ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಮತ್ತು ಕಾಂಗ್ರೆಸ್ ನಿಂದ ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ್, ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದರು.

English summary
Designated CM HD Kumaraswamy’s oath taking ceremony to be held on tomorrow, May 23. KPCC president Dr. G. Parameshwar also taking oath along with Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X