ಕರ್ನಾಟಕದ ಈ 5 ಜಿಲ್ಲೆಗಳೇ ಕೊರೊನಾವೈರಸ್ ಹಾಟ್ ಸ್ಪಾಟ್!
ಬೆಂಗಳೂರು, ಜೂನ್.29: ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಪ್ರತಿನಿತ್ಯ ದಾಖಲೆಯ ಏರಿಕೆ ಕಂಡು ಬರುತ್ತಿದೆ. ಕರ್ನಾಟಕವೇ ಬೆಸ್ಟ್ ಎನ್ನುತ್ತಿದ್ದ ಕೇಂದ್ರ ಸರ್ಕಾರದ ನಂಬಿಕೆಯನ್ನು ಹುಸಿಗೊಳಿಸುವಂತಾ ಅಂಕಿ-ಸಂಖ್ಯೆಗಳು ರಾಜ್ಯದಲ್ಲೂ ಕಾಣಿಸಿಕೊಳ್ಳುತ್ತಿವೆ.
Recommended Video
ಕಳೆದ ಎರಡನೇ ದಿನಗಳಲ್ಲೇ ಎರಡು ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿರುವುದು ಜನರಲ್ಲಿ ಭೀತಿಯನ್ನು ಇಮ್ಮಡಿಗೊಳಿಸಿದೆ. ಭಾನುವಾರ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬುಲೆಟಿನ್ ಜನರ ಎದೆಯಲ್ಲಿ ನಡುಕ ಹುಟ್ಟಿಸಿದೆ.
ಭಾನುವಾರ ಒಂದೇ ದಿನ 1267 ಮಂದಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 16 ಮಂದಿ ಕೊರೊನಾವೈರಸ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 13,190 ಮಂದಿಗೆ ಸೋಂಕು ತಗಲಿದ್ದು, ಈ ಪೈಕಿ 7507 ಜನರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 5472 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಮಾರಿಗೆ ಇದುವರೆಗೂ 207 ಜನರು ಪ್ರಾಣ ಬಿಟ್ಟಿದ್ದಾರೆ.

ಕೊರೊನಾವೈರಸ್ ಹಾಟ್ ಸ್ಪಾಟ್ ಜಿಲ್ಲೆಗಳು
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡು ಬರುವುದಕ್ಕೆ ಈ ಜಿಲ್ಲೆಗಳೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ರಾಜ್ಯದ ಈ ಟಾಪ್-5 ಜಿಲ್ಲೆಗಳಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಕಂಡು ಬಂದಿದ್ದಾರೆ. ಜಿಲ್ಲೆಗಳಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಕೊರೊನಾವೈರಸ್ ನಿಂದ ಸುರಕ್ಷಿತವಾಗಿ ಇರಬೇಕಿದ್ದಲ್ಲಿ ಇಂಥ ಜಿಲ್ಲೆಯ ಜನರು ಎಚ್ಚರಿಕೆ ವಹಿಸಬೇಕು. ಜೊತೆಗೆ ಬೇರೆ ಜಿಲ್ಲೆಯ ಜನರು ಈ ಜಿಲ್ಲೆಗಳಿಗೆ ತೆರಳುವುದಕ್ಕೆ ಸಾವಿರ ಬಾರಿ ಯೋಚಿಸಬೇಕು. ಹಾಗಿದ್ದಲ್ಲಿ ಕರ್ನಾಟಕದ ಪಾಲಿಗೆ ಕೊರೊನಾವೈರಸ್ ಹಾಟ್ ಸ್ಪಾಟ್ ಎನಿಸಿರುವ ಟಾಪ್-5 ಜಿಲ್ಲೆಗಳು ಯಾವುವು. ಅಲ್ಲಿನ ಕೊರೊನಾವೈರಸ್ ಸೋಂಕಿತರ ಅಂಕಿ-ಅಂಶಗಳು ಹೇಗಿ ಎನ್ನುವುದರ ಕುರಿತು ಸಂಪೂರ್ಣ ಚಿತ್ರಣ ಇಲ್ಲಿದೆ ನೋಡಿ.

ಬೆಂಗಳೂರು ಕೊರೊನಾವೈರಸ್ ರಾಜಧಾನಿ ಎನಿಸುತ್ತಿದೆಯಾ?
ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾವೈರಸ್ ಸೋಂಕು ಹರಡುವಿಕೆಯ ರಾಜಧಾನಿಯಾಗಿ ಮಾರ್ಪಡುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಳ್ಳುತ್ತಿದೆ. ಪ್ರತಿನಿತ್ಯ ನೂರಾರು ಸೋಂಕಿತ ಪ್ರಕರಣಗಳು ಸಿಲಿಕಾನ್ ಸಿಟಿಯೊಂದರಲ್ಲೇ ಕಾಣಿಸಿಕೊಳ್ಳುತ್ತಿವೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ, ಸಾವಿನ ಪ್ರಮಾಣ, ಗುಣಮುಖರಾದವರೆಷ್ಟು ಎನ್ನುವುದರ ಪಟ್ಟಿ ಇಲ್ಲಿದೆ.
ಬೆಂಗಳೂರು:
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 783
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 04
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 3314
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 88
ಒಟ್ಟು ಗುಣಮುಖರಾದವರ ಸಂಖ್ಯೆ: 533
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 2692

ಕಲಬುರಗಿ
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 34
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 01
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 1398
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 18
ಒಟ್ಟು ಗುಣಮುಖರಾದವರ ಸಂಖ್ಯೆ: 1009
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 371

ಉಡುಪಿ
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 40
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 00
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 1179
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 02
ಒಟ್ಟು ಗುಣಮುಖರಾದವರ ಸಂಖ್ಯೆ: 1042
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 135

ಯಾದಗಿರಿ
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 01
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 00
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 930
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 01
ಒಟ್ಟು ಗುಣಮುಖರಾದವರ ಸಂಖ್ಯೆ: 799
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 130

ಬಳ್ಳಾರಿ
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 71
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 01
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 665
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 11
ಒಟ್ಟು ಗುಣಮುಖರಾದವರ ಸಂಖ್ಯೆ: 313
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 373

ದಕ್ಷಿಣ ಕನ್ನಡ
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ: 97
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಬಲಿಯಾದವರು: 03
ಒಟ್ಟು ಕೊರೊನಾವೈರಸ್ ಸೋಂಕಿತರ ಸಂಖ್ಯೆ: 665
ಕೊರೊನಾವೈರಸ್ ಗೆ ಬಲಿಯಾದವರ ಒಟ್ಟು ಸಂಖ್ಯೆ: 11
ಒಟ್ಟು ಗುಣಮುಖರಾದವರ ಸಂಖ್ಯೆ: 380
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ: 272











Click it and Unblock the Notifications