Karnataka Elections: ಕರ್ನಾಟಕದ ಐವರು ಶ್ರೀಮಂತ ಅಭ್ಯರ್ಥಿಗಳು- ಆಸ್ತಿ ವಿವರ, ಉದ್ಯೋಗ, ಅಂಕಿಅಂಶ ತಿಳಿಯಿರಿ
ಬೆಂಗಳೂರು, ಏಪ್ರಿಲ್ 24: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಶ್ರೀಮಂತ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ರಾಜ್ಯದ ಹೆಚ್ಚಿನ ರಾಜಕಾರಣಿಗಳು ರಿಯಲ್ ಎಸ್ಟೇಟ್, ಗಣಿಗಾರಿಕೆ ಮತ್ತು ಶಿಕ್ಷಣದಂತಹ ಕ್ಷೇತ್ರಗಳಿಂದ ಬಂದವರು. ಕರ್ನಾಟಕದ ಶಾಸಕರು ಸರಾಸರಿ ₹34.6 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇದು ಎಲ್ಲ ರಾಜ್ಯಗಳಿಗಿಂತ ಅತ್ಯಧಿಕವಾಗಿದೆ.
ಸರಾಸರಿ ₹27.9 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಆಂಧ್ರಪ್ರದೇಶದ ಶಾಸಕರು ಎರಡನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್‌ನ ಶಾಸಕರ ಹಣಕಾಸು ವರದಿಗಳನ್ನು ವಿಶ್ಲೇಷಿಸುವ ವರದಿಗಳ ಪ್ರಕಾರ, ₹22.4 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಮಹಾರಾಷ್ಟ್ರ ಶಾಸಕರು ಮೂರನೇ ಸ್ಥಾನದಲ್ಲಿದ್ದಾರೆ.

2023ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಬಹಿರಂಗಪಡಿಸುವ ಮೂಲಕ ನಾಮಪತ್ರ ಸಲ್ಲಿಸಿದಾಗ, ಹಲವಾರು ಪ್ರಮುಖ ನಾಯಕರು ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ತೋರಿಸಿದ್ದಾರೆ. ಕುತೂಹಲಕಾರಿಯಾಗಿ, ಕಳೆದ ವಿಧಾನಸಭಾ ಚುನಾವಣೆಯ ನಂತರ ಅನೇಕರು ತಮ್ಮ ನಿವ್ವಳ ಮೌಲ್ಯದಲ್ಲಿ ಏರಿಕೆ ಕಂಡಿದ್ದಾರೆ.
ಚುನಾವಣಾ ಕಣದಲ್ಲಿರುವ ಐವರು 'ಶ್ರೀಮಂತ' ಅಭ್ಯರ್ಥಿಗಳ ಬಗ್ಗೆ ತಿಳಿಯಿರಿ
ಶಾಜಿಯಾ ತರನ್ನುಮ್
ಈ ಚುನಾವಣೆಯಲ್ಲಿ ಶಾಜಿಯಾ ತರನ್ನುಮ್ ಅವರು ಅತೀ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಬೆಂಗಳೂರಿನಲ್ಲಿ ಗುಜರಿ ಉದ್ಯಮ ಆರಂಭಿಸಿ ಕೋಟ್ಯಾಧಿಪತಿಯಾಗಿರುವ ಕೆಜಿಎಫ್ ನಿವಾಸಿ ಯೂಸುಫ್ ಷರೀಫ್ ಅವರು ಪತ್ನಿ ಶಾಜಿಯಾ ತರನ್ನುಮ್. ಕೆಜಿಎಫ್ ಬಾಬು ಎಂದು ಖ್ಯಾತರಾಗಿರುವ ಉದ್ಯಮಿ ತಮ್ಮ ಪತ್ನಿಯನ್ನು ಬೆಂಗಳೂರು ಸೆಂಟ್ರಲ್ ಚಿಕ್ಕಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಪತ್ನಿ ನಾಮಪತ್ರ ಸಲ್ಲಿಸುವಾಗ ಯೂಸುಫ್ ಷರೀಫ್ ತಮ್ಮ ಒಟ್ಟು ಆಸ್ತಿ ಮೌಲ್ಯ ₹1,674 ಕೋಟಿ ಎಂದು ಹೇಳಿದ್ದಾರೆ.
ಎಂ ಟಿ ಬಿ ನಾಗರಾಜ್
ಸಣ್ಣ ಕೈಗಾರಿಕೆ ಸಚಿವ ಹಾಗೂ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಟಿ ಬಿ ನಾಗರಾಜ್ ಅವರು ₹1,614 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಎರಡನೇ ಶ್ರೀಮಂತ ಅಭ್ಯರ್ಥಿಯ ಸ್ಥಾನವನ್ನು ಹೊಂದಿfದಾರೆ. ಕಳೆದ ಮೂರು ವರ್ಷಗಳಲ್ಲಿ ₹389 ಕೋಟಿ ಆಸ್ತಿ ಮೌಲ್ಯವನ್ನು ವೃದ್ಧಿಸಿಕೊಂಡಿದ್ದಾರೆ. ಪ್ರಸ್ತುತ ಎಂಎಲ್‌ಸಿ ಆಗಿರುವ ನಾಗರಾಜ್, 2019 ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡ 17 ಬಂಡಾಯ ನಾಯಕರಲ್ಲಿ ಒಬ್ಬರು. ಅವರು 2018 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದರು. 2019 ರ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಸೋತರು. ಅವರು 2023 ರಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ.

ಡಿಕೆ ಶಿವಕುಮಾರ್
2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಮತ್ತು ಏಳು ಬಾರಿ ಶಾಸಕರಾಗಿದ್ದ ಡಿಕೆ ಶಿವಕುಮಾರ್ ಅವರ ಒಟ್ಟು ಆಸ್ತಿ ಮೌಲ್ಯ ₹ 1,413.78 ಕೋಟಿಗಳಾಗಿದೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಡಿಕೆಶಿ ಅವರು ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅವರು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ರಿಯಲ್ ಎಸ್ಟೇಟ್ ಮತ್ತು ಗ್ರಾನೈಟ್ ವ್ಯವಹಾರಗಳನ್ನು ನಡೆಸುತ್ತಿದ್ದಾರೆ. ಪ್ರಸ್ತುತ 19 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಪ್ರಿಯಾ ಕೃಷ್ಣ
ಕಣದಲ್ಲಿರುವ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಪ್ರಿಯಾ ಕೃಷ್ಣ ಅವರು ಒಟ್ಟು ₹1,156 ಕೋಟಿ ಆಸ್ತಿ ಘೋಷಿಸಿದ್ದಾರೆ. ಗೋವಿಂದರಾಜನಗರದ ಈ ಮಾಜಿ ಕಾಂಗ್ರೆಸ್ ಶಾಸಕ, ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಅವರ ಪುತ್ರರಾಗಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಅವರ ಆಸ್ತಿಯು ₹136.8 ಕೋಟಿಗಳಷ್ಟು ಹೆಚ್ಚಾಗಿದೆ. ಪ್ರಿಯಾಕೃಷ್ಣ ಅವರು ಫ್ಯಾನ್ಸಿ ನೋಂದಣಿ ಸಂಖ್ಯೆಗಳಿಂದ ಪ್ರಸಿದ್ದರಾಗಿದ್ದಾರೆ. ಅವರ ಎಲ್ಲಾ ಖಾಸಗಿ ಕಾರುಗಳು ಬೆಂಗಳೂರಿನ ವಿವಿಧ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನೋಂದಾಯಿಸಲಾದ '9279' ನೋಂದಣಿ ಸಂಖ್ಯೆಯನ್ನು ಹೊಂದಿವೆ. ಅವರ ಅಫಿಡವಿಟ್ ಪ್ರಕಾರ, ಅವರ ಕೆಲವು ಸ್ಥಿರ ಆಸ್ತಿಗಳು ಉಡುಗೊರೆಯಾಗಿವೆ ಎಂದು ತಿಳಿದುಬಂದಿದೆ.

ಬೈರತಿ ಸುರೇಶ್
ಹೆಬ್ಬಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೈರತಿ ಸುರೇಶ್ ಅವರು ₹ 648.12 ಕೋಟಿ ಆಸ್ತಿ ಘೋಷಿಸಿಕೊಂಡಿದ್ದಾರೆ. ತಮ್ಮ ವೃತ್ತಿಯು ಕೃಷಿಕ ಮತ್ತು ಜಮೀನುದಾರ ಎಂದು ಅವರು ಹೇಳಿದ್ದಾರೆ. ಅವರು ಪ್ರಸ್ತುತ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications