ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ, ಅಪಾರ ಹಾನಿ

By Lekhaka
|
Google Oneindia Kannada News

ಉಡುಪಿ, ಜುಲೈ 15: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಮೇಲೆ ಮರ ಬಿದ್ದು ದಂಪತಿಗೆ ಗಂಭೀರ ಗಾಯವಾಗಿರುವ ಘಟನೆ ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಮಕ್ಕಿಯಲ್ಲಿ ನಡೆದಿದೆ.

ಗಣಪಯ್ಯ ಗಾಣಿಗ ಮತ್ತು ವಾರಿಜ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ದಂಪತಿ ಸಮೇತ ಮಕ್ಕಳು ಮನೆಯಲ್ಲಿದ್ದ ಸಂದರ್ಭದಲ್ಲಿ ಭಾರೀ ಗಾಳಿಗೆ ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದಿದೆ. ಈ ವೇಳೆ ದಂಪತಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ. ದಂಪತಿಯನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಉಡುಪಿಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ವಿಶ್ವನಾಥ ಕ್ಷೇತ್ರದ ದೇವಸ್ಥಾನದ ಆವರಣದ ಸುಮಾರು 150 ವರ್ಷದ ಬೃಹತ್ ಮರ ಉರುಳಿ ಬಿದ್ದಿದೆ. ಉಡುಪಿಯ ಚಿತ್ತಾರಿ ನಂದಿಕೇಶ್ವರ ದೇವಸ್ಥಾನದ ಮೇಲೆ ಬೃಹತ್ ಗೋಳಿಮರ ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

Karnataka: Torrential Rains Lashes In Coastal And Malnad Region

ಇನ್ನು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲೂ ಮರಗಳು ಧರೆಗುರುಳಿದ್ದು, ಒಟ್ಟು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ಇನ್ನು ಅರಬ್ಬೀ ಸಮುದ್ರ ಕೂಡಾ ಅಬ್ಬರಿಸುತ್ತಿದ್ದು, ಪ್ರವಾಸಿಗರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾಡಳಿತ ಸೂಚನೆ ನೀಡಿದೆ.

Karnataka: Torrential Rains Lashes In Coastal And Malnad Region


ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ನಿರಂತರವಾಗಿ ಭಾರೀ ಗಾಳಿ- ಮಳೆ ಸುರಿಯುತ್ತಿದ್ದು, ಜಿಲ್ಲೆಯ ನೇತ್ರಾವತಿ ಹಾಗೂ ಕುಮಾರಾಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ.

ಮುಂದಿನ ಕೆಲ ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಶುಕ್ರವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

Karnataka: Torrential Rains Lashes In Coastal And Malnad Region

ಮಲೆನಾಡು ಚಿಕ್ಕಮಗಳೂರಲ್ಲಿ ಭೂಕುಸಿತ

ಮಲೆನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಗಳು ಕುಸಿಯುತ್ತಿವೆ. ಚಿಕ್ಕಮಗಳೂರು ತಾಲೂಕಿನ ಹೊನ್ನಾಳ ಚೆಕ್‌ಪೋಸ್ಟ್ ಬಳಿ ರಸ್ತೆ ಮಧ್ಯೆಯೇ ಬಿರುಕು ಬಿಟ್ಟಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನಿಂದ ಮುತ್ತೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಬಿರುಕು ಕಾಣಿಸಿಕೊಂಡ ಹಿನ್ನೆಲೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಅಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಅಬ್ಬಿಕಲ್ಲಿ ಗ್ರಾಮದಲ್ಲಿ ಧರೆ ಕುಸಿತವಾಗಿದ್ದು, ಮರಗಳು ರಸ್ತೆಗುರುಳಿವೆ. ಇನ್ನು ರಸ್ತೆ ಮೇಲೆ ಕುಸಿದಿದ್ದರಿಂದ ಅತ್ತಿಕೊಡಿಗೆ ಗ್ರಾ.ಪಂ ವ್ಯಾಪ್ತಿಯ ಹೊರನಾಡು- ಶೃಂಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

English summary
Heavy rainfall has been reported in coastal districts of Dakshina Kannada, Udupi and Chikkamagaluru districts of Malnad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X