ಕೋವಿಡ್ ಸೋಂಕಿತರ ಸಂಖ್ಯೆ; ಕರ್ನಾಟಕಕ್ಕೆ 2ನೇ ಸ್ಥಾನ

ಬೆಂಗಳೂರು, ನವೆಂಬರ್ 01: ಕರ್ನಾಟಕದಲ್ಲಿ ಪ್ರತಿದಿನ ಹೊಸ ಕೋವಿಡ್ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನಕ್ಕೆ ಬಂದಿದೆ.

ಶನಿವಾರ ಕರ್ನಾಟಕದಲ್ಲಿ 3014 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ. ಶನಿವಾರ ರಾಜ್ಯದಲ್ಲಿ 28 ಜನರು ಮಾತ್ರ ಮೃತಪಟ್ಟಿದ್ದಾರೆ.

ಆರು ತಿಂಗಳಿನಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಅತಿ ಕಡಿಮೆ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಅಲ್ಲದೇ 20 ಜಿಲ್ಲೆಗಳಲ್ಲಿ ಯಾವುದೇ ಸಾವಿನ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೂ 1,11,68 ಜನರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಅಕ್ಟೋಬರ್ 31ರಂದು 3014 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ 7,468 ಜನರು ಗುಣಮುಖರಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 7,57,208.

ಟಾಪ್ ಮೂರು ರಾಜ್ಯಗಳು

ಟಾಪ್ ಮೂರು ರಾಜ್ಯಗಳು

ದೇಶದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯಗಳಲ್ಲಿ ಮಹಾರಾಷ್ಟ್ರ (16,78,406) ಮೊದಲ ಸ್ಥಾನದಲ್ಲಿದೆ. ಕರ್ನಾಟಕ (8,23,412) 2ನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದು 8,23,348 ಒಟ್ಟು ಸೋಂಕಿತರಿದ್ದಾರೆ.

ಆರೋಗ್ಯ ಸಚಿವರ ಟ್ವೀಟ್

ಶನಿವಾರ ರಾಜ್ಯದಲ್ಲಿ 28 ಜನರು ಮೃತಪಟ್ಟಿದ್ದಾರೆ. 180 ದಿನಗಳಲ್ಲಿಯೇ ವರದಿಯಾದ ಅತಿ ಕಡಿಮೆ ಸಂಖ್ಯೆ ಇದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕೋವಿಡ್ ಪರಿಸ್ಥಿತಿ

ಕರ್ನಾಟಕದ ಕೋವಿಡ್ ಪರಿಸ್ಥಿತಿ

ಶನಿವಾರ ರಾಜ್ಯದಲ್ಲಿ ದಾಖಲಾದ ಹೊಸ ಪ್ರಕರಣ 3014. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,23,412. ಇದುವರೆಗೂ ಗುಣಮುಖರಾದವರು 7,57,208. ಇದುವರೆಗೂ ಮೃತಪಟ್ಟವರ ಸಂಖ್ಯೆ 11,168. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 55017.

ಜಿಲ್ಲೆಗಳ ಪಟ್ಟಿ ಹೀಗಿದೆ

ಜಿಲ್ಲೆಗಳ ಪಟ್ಟಿ ಹೀಗಿದೆ

ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಒಟ್ಟು ಸೋಂಕಿತರ ಸಂಖ್ಯೆ 3,36,469. ಉಳಿದಂತೆ ಬೆಳಗಾವಿ (24677), ದಕ್ಷಿಣ ಕನ್ನಡ (30242), ಹಾಸನ (24955), ಮೈಸೂರು (47684), ಉಡುಪಿ (21872).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+