ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಕೊನೆ ದಿನ ಒಟ್ಟು ಸಲ್ಲಿಕೆಯಾದ ನಾಮಪತ್ರಗಳೆಷ್ಟು?

|
Google Oneindia Kannada News

ಬೆಂಗಳೂರು, ಅ. 08: ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಶುಕ್ರವಾರ ಕೊನೆಯ ದಿನವಾಗಿತ್ತು. ಹೀಗಾಗಿ ಮೂರು ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ ಹಲವು ಜನರು ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ 37 ಅಭ್ಯರ್ಥಿಗಳಿಂದ ಒಟ್ಟು 57 ನಾಮಪತ್ರಗಳು ಸಲ್ಲಿಕೆಯಾಗಿವೆ.

ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅ. 8 ಕೊನೆ ದಿನವಾಗಿತ್ತು. ಅದರಂತೆ, ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆೆಸ್ ಪಕ್ಷದಿಂದ ಅಶೋಕ ಮನಗೂಳಿ, ಜೆಡಿಎಸ್ ಪಕ್ಷದಿಂದ ನಾಜಿಯಾ ಶಕೀಲ್ ಅಂಗಡಿ ಸೇರಿದಂತೆ ಒಟ್ಟು ಎಂಟು ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ, ರಾಷ್ಟ್ರೀಯ ಸಮಾಜ ಪಕ್ಷದಿಂದ ತಲಾ ಒಂದು ಹಾಗೂ ಪಕ್ಷೇತರರಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.

ಅದೇ ರೀತಿ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯ ಶಿವರಾಜ್ ಸಜ್ಜನ್, ಕಾಂಗ್ರೆೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ ಪಕ್ಷದಿಂದ ನಿಯಾಜ್ ಶೇಕ್ ಸೇರಿದಂತೆ ಒಟ್ಟು 29 ಅಭ್ಯರ್ಥಿಗಳಿಂದ 45 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ 2, ಲೋಕಶಕ್ತಿ 3, ಕನ್ನಡ ದೇಶದ ಪಕ್ಷ 1, ರೈತ ಭಾರತ ಪಕ್ಷ 1 ಹಾಗೂ ಪಕ್ಷೇತರರಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಿದವರಲ್ಲಿ ಪುರುಷರು ಹೆಚ್ಚು!

ನಾಮಪತ್ರ ಸಲ್ಲಿಸಿದವರಲ್ಲಿ ಪುರುಷರು ಹೆಚ್ಚು!

ಸಿಂದಗಿ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳಿಂದ ಒಟ್ಟು 45 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಪೈಕಿ ಎರಡೂ ಕ್ಷೇತ್ರಗಳಲ್ಲಿ 33 ಪುರುಷರು ಹಾಗೂ ನಾಲ್ವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದವರಲ್ಲಿ 31 ಮಂದಿ ಪಕ್ಷೇತರರು ಇದ್ದಾರೆ. ಅಕ್ಟೋಬರ್ 11ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಂತರ ಉಮೇದುವಾರಿಕೆ ಹಿಂದಕ್ಕೆ ಪಡೆಯಲು ಅ.13 ಕೊನೆಯ ದಿನವಾಗಿದೆ. ಅ. 30 ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಸಿಎಂ ಬೊಮ್ಮಾಯಿ ಬಲಪಡಿಸಲು ಬಿಜೆಪಿ ಗೆಲ್ಲಿಸಿ

ಸಿಎಂ ಬೊಮ್ಮಾಯಿ ಬಲಪಡಿಸಲು ಬಿಜೆಪಿ ಗೆಲ್ಲಿಸಿ

ಹಾನಗಲ್ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ ಸಜ್ಜನರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಅವರು, "ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಜ್ಜನಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದ್ದಾರೆ. ಆದರ್ಶದ ರಾಜಕಾರಣ ಮಾಡುತ್ತಿರುವ ಬೊಮ್ಮಾಯಿ ಅವರ ಕೈಯನ್ನು ಬಲಪಡಿಸಲು ಈ ಕ್ಷೇತ್ರದಲ್ಲಿ ಶಿವರಾಜ ಅವರನ್ನು ಗೆಲ್ಲಿಸಿ" ಎಂದು ವಿನಂತಿಸಿದರು.

ಸಿಂದಗಿಯಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ!

ಸಿಂದಗಿಯಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ!

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಕೆ.ಎಸ್. ಈಶ್ಚರಪ್ಪ, ವಿ. ಸೋಮಣ್ಣ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉಪಸ್ಥಿತರಿದ್ದರು. ಸಿಂದಗಿ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ ಮನಗೂಳಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಚಿವ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.

ಗೆಲವು ನಮ್ಮದೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ!

ಗೆಲವು ನಮ್ಮದೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ!

ಇನ್ನು ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಎರಡು ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇದೆ. ಸಿಂದಗಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದು ಖಚಿತ. ಹಾನಗಲ್‌ನಲ್ಲಿ ಗಟ್ಟಿ ಪೈಪೋಟಿ ನೀಡಲಿದ್ದೇವೆ. ಹಾಗೂ ಅಲ್ಲಿಯೂ ನಮ್ಮ ಪರವಾಗಿಯೇ ಅಲೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗುರುವಾರವೇ ನಾಮಪತ್ರ ಸಲ್ಲಿಸಿದ್ದಾರೆ.

ನಮ್ಮ ಪಕ್ಷವನ್ನ 2023ಕ್ಕೆ ಅಧಿಕಾರಕ್ಕೆ ತರಲು ಕಾರ್ಯಾಗಾರಗಳನ್ನ ಮಾಡಿದ್ದೇನೆ. ಇದರ ಭಾಗವಾಗಿ ದೇಶಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಜನತೆ ಮುಂದೆ ಇಡಲು ಪ್ರಾರಂಭ ಮಾಡಿದ್ದೇನೆ. ಇದು ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ಕಾರ್ಯಾಗಾರಗಳನ್ನು ಮಾಡುವ ಮೂಲಕ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಯಾರನ್ನೊ ಓಲೈಸಿಕೊಳ್ಳಲು ಈ ಕಾರ್ಯಾಗಾರ ಮಾಡಿಲ್ಲ. ಓಲೈಸೊ ರಾಜಕಾರಣ ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಬಿಟ್ಟಿದ್ದು. ಹಿಂದುತ್ವದ ಹೆಸರಿನಲ್ಲಿ ಸಂದೇಶ ಕೊಡಲು ಬಿಜೆಪಿ ಹೊರಟಿದೆ. ಹಿಂದುತ್ವದ ರಾಜಕಾರಣ ಮಾಡಿಕೊಂಡು ಮತಗಳಿಗೊಸ್ಕರ ನಾನು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿಲ್ಲಾ ಎಂದು ಕುಮಾರಸ್ವಾಮಿ ಉಪ ಚುನಾವಣೆ ಕುರಿತು ತಿಳಿಸಿದ್ದಾರೆ.

Recommended Video

Viratಗಿಂತ KL Rahul ಹೆಚ್ಚು ಪ್ರತಿಭಾವಂತ ಆಟಗಾರ ಎಂದ Gambhir | Oneindia Kannada

English summary
oct 8 was the last day for filing nominations for the by-election. A total of 57 nominations have been submitted by 37 candidates in both constituencies. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X