Pension: ಪಿಂಚಣಿಗಾಗಿ ರಾಜ್ಯ ಸರ್ಕಾರದಿಂದ 10,500 ಕೋಟಿ ವ್ಯಯ- ಕೃಷ್ಣ ಬೈರೇಗೌಡ
ಬೆಂಗಳೂರು ಜುಲೈ 24: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ ನೀಡಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ವೈ.ಎಂ. ಸತೀಶ್ ಅವರು ವಿಕಲಚೇತನರಿಗೆ ಹಾಗೂ ಮನೋರೋಗಿಗಳಿಗೆ ನೀಡುವ ಮಾಶಾಸನದ ಬಗ್ಗೆ ಉಲ್ಲೇಖಿಸಿದರು. ಶೇ.40 ರಿಂದ ಶೇ.75 ರಷ್ಟು ಅಂಗವಿಕಲತೆ ಇರುವವರಿಗೆ 2021 ರಿಂದ 1,400 ರೂಪಾಯಿ ಹಾಗೂ ಶೇ.75ಕ್ಕೂ ಹೆಚ್ಚು ಅಂಗ ವಿಕಲತೆ ಹಾಗೂ ಮನೋರೋಗಿಗಳಿಗೆ 2,000 ರೂಪಾಯಿ ಮಾಶಾಸನ ನೀಡಲಾಗುತ್ತಿದೆ. ಈ ಮಾಶಾಸನವನ್ನು ಹೆಚ್ಚಿಸಬೇಕು, ಕಾಲದಿಂದ ಕಾಲಕ್ಕೆ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.

ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರ ಒತ್ತಾಯಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, "ಅಂಗವೈಕ್ಯಲ ಹಾಗೂ ಮನೋವೈಕಲ್ಯ ಹೊಂದಿರುವವರ ಮಾಶಾಸನವನ್ನು ಕಾಲದಿಂದ ಕಾಲಕ್ಕೆ ಪರಿಷ್ಕರಿಸಬೇಕು ಎಂಬುದು ನಿಜ. ಇದರಲ್ಲಿ ಸರ್ಕಾರಕ್ಕೆ ಬೇರೆ ಅಭಿಪ್ರಾಯ ಇಲ್ಲ. ರಾಜ್ಯದಲ್ಲಿ ಒಟ್ಟು 78,14,513 ವ್ಯಕ್ತಿಗಳಿಗೆ ನಾನಾ ರೀತಿಯ ಸಾಮಾಜಿಕ ಭದ್ರತಾ ಪಿಂಚಣಿ ನೀಡಲಾಗುತ್ತಿದೆ. ಇದಕ್ಕಾಗಿಯೇ ಪ್ರತಿವರ್ಷ 10500 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ" ಎಂದು ಸದನಕ್ಕೆ ಮಾಹಿತಿ ನೀಡಿದರು.
ಮುಂದುವರೆದು, "ದೇಶದಲ್ಲೇ ಸಾಮಾಜಿಕ ಭದ್ರತಾ ಹಣ ಅತಿಹೆಚ್ಚು ನೀಡುತ್ತಿರು ರಾಜ್ಯ ಕರ್ನಾಟಕ. ಈ ವಿಚಾರದಲ್ಲಿ ಬೇರೆ ರಾಜ್ಯಗಳಿಗಿಂತ ಕರ್ನಾಟಕ ಉದಾರ ನೀತಿ ಅನುಸರಿಸುತಿದೆ. ತಮಿಳುನಾಡು ನಮ್ಮ ತೀರಿಯದ್ದೇ ಮನಸ್ಥಿತಿ ಹೊಂದಿದೆ, ಜನಸಂಖ್ಯೆಯೂ ಅಧಿಕವಾಗಿದೆ. ಆದರೂ, ಸಾಮಾಜಿಕ ಭದ್ರತಾ ಪಿಂಚಣಿಯನ್ನು ಅತಿಹೆಚ್ಚು ನೀಡುತ್ತಿರುವ ರಾಜ್ಯ ಕರ್ನಾಟಕ. ನಾವು ಕಾಲದಿಂದ ಕಾಲಕ್ಕೆ ಈ ಮಾಶಾಸನವನ್ನು ಪರಿಷ್ಕರಣೆ ಮಾಡುತ್ತಾ ಬಂದಿದ್ದೇವೆ. ಮತ್ತೊಮ್ಮೆ ಪರಿಷ್ಕರಣೆ ಮಾಡುವ ಬಗ್ಗೆಯೂ ವಿಚಾರ ಮಾಡೋಣ" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಕೇಂದ್ರದಿಂದಲೂ ನೆರವು ಸಿಗುವ ನಿರೀಕ್ಷೆ:
ಸಾಮಾಜಿಕ ಭದ್ರತಾ ಪಿಂಚಣಿ ಅಡಿಯಲ್ಲಿ ವಿಕಲಚೇತನರು ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುತ್ತಿರುವ ಮಾಶಾಸನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ನೆರವು ಸಿಗುವ ನಿರೀಕ್ಷೆ ರಾಜ್ಯ ಸರ್ಕಾರಕ್ಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಬಗ್ಗೆಯೂ ಸದನದ ಗಮನ ಸೆಳೆದ ಸಚಿವರು, " ಕೇಂದ್ರ ಸರ್ಕಾರದ ಆಯವ್ಯಯ ಪೂರ್ವ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಾನೆ ಹೊಗಿದ್ದೆ. ರಾಜ್ಯ ಸರ್ಕಾರ 78 ಲಕ್ಷ ಜನರಿಗೆ ಮಾಶಾಸನ ನೀಡುತ್ತಿದ್ದರೆ, ಕೇಂದ್ರ ಸರ್ಕಾರ ಕೇವಲ 13 ಲಕ್ಷ ಜನರಿಗೆ ಮಾತ್ರ ಅವರ ಪಾಲಿನ ಹಣ ನೀಡುತ್ತಿದೆ. ಅದರಲ್ಲೂ ನಾವು ರೂ.1,400 ರಿಂದ ರೂ. 2,000 ಹಣ ಮಾಶಾಸನ ನೀಡುತ್ತಿದ್ದರೆ, ಕೇಂದ್ರದ ಅನುದಾನ ಕೇವಲ ರೂ.200 ರಿಂದ ರೂ.400 ರೂಪಾಯಿ ಮಾತ್ರ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಗಮನಕ್ಕೆ ತರಲಾಗಿತ್ತು" ಎಂದರು.
ಈ ಸಾಮಾಜಿಕ ಭದ್ರತಾ ಪಿಂಚಣಿ ಹಣವನ್ನು ಕೇಂದ್ರ ಸರ್ಕಾರ ಕೊನೆಯದಾಗಿ ಪರಿಷ್ಕರಣೆ ಮಾಡಿದ್ದು, ನವೆಂಬರ್ 8, 2012 ರಲ್ಲಿ. ಕಳೆದ 12 ವರ್ಷಗಳಿಂದ ಒಂದು ಪೈಸೆಯೂ ಪರಿಷ್ಕರಣೆ ಮಾಡೇ ಇಲ್ಲ. ಹೀಗಾಗಿ ರಾಜ್ಯದ ಪರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಮ್ಮ ಸರ್ಕಾರದ ಪರವಾಗಿ ನಾನು ಮೆಮೋರಾಂಡಂ ಸಲ್ಲಿಸಿದ್ದೇನೆ. ಆ ಮೆಮೋರಾಂಡಂ ನಲ್ಲಿ ಮಾಶಾಸನ ದರವನ್ನು ಪರಿಷ್ಕರಿಸಿ ಹಾಗೂ ನಾವು 78 ಲಕ್ಷ ಜನರಿಗೆ ಮಾಶಾಸನ ನೀಡುತ್ತಿದ್ದೇವೆ. ಈ ಪೈಕಿ ಕೇಂದ್ರ ಸರ್ಕಾರ ಕೇವಲ 13 ಲಕ್ಷ ಜನರಿಗೆ ಮಾತ್ರ ಅನುದಾನ ನೀಡುತ್ತಿದೆ. ಈ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿತ್ತು.
ಆ ಸಂದರ್ಭದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸಹ ಈ ದರ ಏಕೆ ಈವರೆಗೆ ಪರಿಷ್ಕರಣೆಯಾಗಿಲ್ಲ? ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮ್ಮ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಆದರೆ, ಬಜೆಟ್‌ನಲ್ಲಿ ಈ ಬಗ್ಗೆ ಘೋಷಿಸಿರುವ ಬಗ್ಗೆ ನಾನು ಈವರೆಗೆ ನೋಡಿಲ್ಲ. ಸಪ್ಲಿಮೆಂಟರಿಯಲ್ಲಿ ಡೀಟೈಲ್ ಆಗಿ ಇದೆಯಾ ಎಂದು ನೋಡಬೇಕು. ಸಾಮಾಜಿಕ ಭದ್ರತಾ ಪಿಂಚಣಿಗೆ ಕೇಂದ್ರದಿಂದ ಅನುದಾನ ಬರುವ ನಿರೀಕ್ಷೆಯಂತೂ ನನಗೆ ಖಂಡಿತ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications