Karnataka Election 2026: 2026 ರಲ್ಲಿ ಕರ್ನಾಟಕದಲ್ಲಿ ನಡೆಯಲಿವೆ ಬರೋಬ್ಬರಿ 8 ಚುನಾವಣೆಗಳು: ಇಲ್ಲಿದೆ ಸಂಪೂರ್ಣ ಪಟ್ಟಿ
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಬರೋಬ್ಬರಿ ಎರಡೂವರೆ ವರ್ಷವನ್ನ ಪೂರೈಸಿದೆ. ಮುಖ್ಯಮಂತ್ರಿ ಸ್ಥಾನವನ್ನ ಅಲಂಕರಿಸಿದ ದಿನದಿಂದಲೂ ಕೈ ಪಾಳಯದಲ್ಲಿ ಅಧಿಕಾರ ಹಂಚಿಕೆ ಕುರಿತು ಚರ್ಚೆ ನಡೆಯುತ್ತಲೇ ಇತ್ತು. 2025 ಕರ್ನಾಟಕ ಕಾಂಗ್ರೆಸ್ ಪಾಲಿಗೆ ಬಣ ಬಡಿದಾಟದ ವರ್ಷವಾಗಿತ್ತು. ವರ್ಷವೀಡಿ ನಾಯಕತ್ವ ಬದಲಾವಣೆ ವಿವಾದ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಜೋರಾಗಿತ್ತು.
ಇದೀಗ 2026ರಲ್ಲಿ ಕಾಂಗ್ರೆಸ್ ನಲ್ಲಿನ ನಾಯಕತ್ವ ಬದಲಾವಣೆಯ ಜೊತೆ ಜೊತೆಗೆ ಹೊಸ ವರ್ಷದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿರುವ ಕಾಂಗ್ರೆಸ್, ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಶಪಥ ಮಾಡಿದೆ. ಇದರ ಜೊತೆಗೆ ಈ ವರ್ಷ (2026) ದಲ್ಲಿ ಹಲವು ಚುನಾವಣೆಗಳು ಕರ್ನಾಟಕದಲ್ಲಿ ನಡೆಯಲಿದೆ. ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಬರೋಬ್ಬರಿ 8 ಚುನಾವಣೆಗಳು ಈ ವರ್ಷ ನಡೆಯಲಿದೆ. ಈ ವರ್ಷ ನಡೆಯಲಿರುವ ಆ 8 ಚುನಾವಣೆಗಳ ಕುರಿತು ಮಾಹಿತಿ ಇಲ್ಲಿದೆ.

ಎರಡು ಕ್ಷೇತ್ರದಲ್ಲಿ ಉಪಚುನಾವಣೆ
2026 ರಲ್ಲಿ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರು ನವೆಂಬರ್ 3, 2025ರಂದು ನಿಧರಾಗಿದ್ದರು, ಹಾಗೂ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರರು ಡಿಸೆಂಬರ್ 14 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಈ ಎರಡು ಕ್ಷೇತ್ರ ಹಿರಿಯ ನಾಯಕರ ನಿಧನದಿಂದ ತೆರವಾಗಿದ್ದು, ತೆರುವಾಗಿರುವ ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಡೆಸಲಿದೆ. ಈ ಎರಡು ಕ್ಷೇತ್ರಗಳಿಗೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ವಿಧಾನ ಪರಿಷತ್ ಚುನಾವಣೆ
ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 2026ರ ನವೆಂಬರ್ ವೇಳೆಗೆ ತೆರವಾಗಲಿರುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ.ಸಂಕನೂರು, ಆಗ್ನೆಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಸದಸ್ಯರಾದ ಚಿದಾನಂದ ಎಂ. ಗೌಡ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಸದಸ್ಯರಾಗಿದ್ದಾರೆ. 2026ರ ನವೆಂಬರ್ 11ಕ್ಕೆ ಈ ಮೇಲ್ಕಂಡ ನಾಲ್ವರು ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮೊದಲೇ ಚುನಾವಣೆ ನಡೆದು ಪರಿಷತ್ ಸದಸ್ಯರ ಆಯ್ಕೆಯಾಗಬೇಕಿದೆ.
ಜಿಬಿಎ ಚುನಾವಣೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ಕರ್ನಾಟಕ ಸರ್ಕಾರ ಚುನಾವಣೆ ನಡೆಸಲು ಭರ್ಜರಿ ಸಿದ್ದತೆಯನ್ನ ನಡೆಸಿದೆ. ಈ ವರ್ಷ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಕರ್ನಾಟಕ ಕಾಂಗ್ರೆಸ್ ಈಗಾಗಲೇ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್ ಕೂಡ ತಯಾರಿ ನಡೆಸುತ್ತಿದ್ದು, ಒಟ್ಟು 369 ವಾರ್ಡ್‌ಗಳನ್ನು ರಚಿಸಿದ್ದು, ಈ ವರ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ.
ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆ
2026 ರ ಏಪ್ರಿಲ್ ವೇಳೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯದ 239 ತಾಲೂಕು ಪಂಚಾಯಿತಿಗಳ 3,671 ಕ್ಷೇತ್ರಗಳು ಹಾಗೂ 31 ಜಿಲ್ಲೆಗಳ 1,130 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ 2020-21ನೇ ಸಾಲಿನಿಂದ ಚುನಾವಣೆ ಬಾಕಿ ಉಳಿದಿದೆ. ಇದರ ನಡುವೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ವಿಂಗಡಣೆಯನ್ನು ಸರ್ಕಾರ ಒಪ್ಪಿದ್ದರೂ, ಮೀಸಲಾತಿಯನ್ನು ಅಂತಿಮಗೊಳಿಸಿ ಚುನಾವಣಾ ಆಯೋಗಕ್ಕೆ ನೀಡಿಲ್ಲ. ಸರ್ಕಾರ ಚುನಾವಣೆ ನಡೆಸಲು ಬಯಸಿದರೆ, ನ್ಯಾಯಾಲಯದ ಪ್ರಕರಣ ಇತ್ಯರ್ಥಗೊಂಡು ಚುನಾವಣೆ ಸುಗಮವಾಗುವುದು ಕಷ್ಟವಲ್ಲ. ಹೀಗಾಗಿ ಈ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.
ಗ್ರಾಮ ಪಂಚಾಯತಿ ಚುನಾವಣೆ
ಗ್ರಾಮ ಪಂಚಾಯಿತಿ ಚುನಾವಣೆಗಳ ಮೂಲಕ ಜನರ ನಾಡಿಮಿಡಿತ ಅರಿಯಲು ಸರ್ಕಾರ ಮುಂದಾಗಿದೆ. ಮೈತ್ರಿಯಾಗಿದ್ದ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಘೋಷಿಸಿದ್ದು, ಮೊದಲು ಗ್ರಾಮ ಪಂಚಾಯಿತಿ ಚುನಾವಣೆಗಳನ್ನ ನಡೆಸಿ ಬಳಿಕ ಉಳಿದ ಚುನಾವಣೆಯನ್ನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಸುಮಾರು 6,022 ಸಾವಿರ ಗ್ರಾಮ ಪಂಚಾಯಿತಿಗಳ ಪೈಕಿ ಬಹಳಷ್ಟು ಸಂಸ್ಥೆಗಳ ಅವಧಿ ಜನವರಿಯಿಂದ ಫೆಬ್ರವರಿಯೊಳಗೆ ಮುಗಿಯುತ್ತಿದ್ದು, ಗ್ರಾಮ ಪಂಚಾಯಿತಿ ಚುನಾವಣೆಯೂ ಈ ವರ್ಷ ನಡೆಯಲಿದೆ.
ಮಹಾನಗರ ಪಾಲಿಕೆ ಚುನಾವಣೆ
ಕರ್ನಾಟಕದ ಐದು ಮಹಾನಗರ ಪಾಲಿಕೆಗಳಿಗೆ 2026 ರಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಶಿವಮೊಗ್ಗ, ಮೈಸೂರು, ದಾವಣಗೆರೆ, ತುಮಕೂರು ಮತ್ತು ಮಂಗಳೂರು ಮಹಾನಗರ ಪಾಲಿಕೆಗಳಲ್ಲಿ ಮತದಾರರ ಪಟ್ಟಿ ಅಂತಿಮಗೊಂಡಿದ್ದು, ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ಅದರಂತೆ, ಇಲ್ಲದಿದ್ದರೆ ಹಳೆಯ ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಆಯೋಗ ಹೇಳಿದ್ದು, ಈ ವರ್ಷವೇ ಈ ಮಹಾನಗರ ಪಾಲಿಕೆಯ ಚುನಾವಣೆಗಳು ನಡೆಯಲಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ದತೆ ನಡೆಸಿದ್ದು, ಇದರ ಜೊತೆಗೆ, ಅವಧಿ ಮುಗಿಯುತ್ತಿರುವ 185 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿದೆ. ಹೀಗಾಗಲೇ, ಅವಧಿ ಮುಗಿದ ಹಿನ್ನೆಲೆ ಹಲವೆಡೆ ಆಡಳಿತಾಧಿಕಾರಿಗಳ ನೇಮಕ ಮಾಡಿ ಆಡಳಿತ ನಡೆಸಲಾಗುತ್ತಿದೆ. ಹೀಗಾಗಿ ಈ ವರ್ಷವೇ 185 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ.
-
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications