ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

VIDEO: ಪ್ರವಾಸಿ ಪ್ರೀಯರಿಗೆ ಖುಷಿ ಕೊಡುವ ಸಂಗತಿ; ಇನ್ಮುಂದೆ ನಂದಿ ಹಿಲ್ಸ್‌ಗೆ ಹೋಗಲು ವಾಹನ ಬೇಕಿಲ್ಲ!

|
Google Oneindia Kannada News

ಬೆಂಗಳೂರು, ಜು. 15: ಮಹಾನಗರಿ ಬೆಂಗಳೂರು ಸುತ್ತಲಿನ ಜನರ ಪ್ರೀತಿಯ ತಾಣ ನಂದಿ ಬೆಟ್ಟದ ಪ್ರವಾಸ ಶೀಘ್ರದಲ್ಲಿಯೇ ಪ್ರವಾಸಿಗರಿಗೆ ಮತ್ತಷ್ಟು ಖುಷಿಕೊಡಲಿದೆ. ದಶಕಗಳಿಂದ ನೆನಗುದಿಗೆ ಬಿದ್ದಿದ್ದ ಪರಿಕಲ್ಪನೆಯನ್ನು ಜಾರಿಗೆ ತರಲು ರಾಜ್ಯ ಪ್ರವಾಸೋದ್ಯಮ ಇಲಾಖೆ ತೀರ್ಮಾನ ಮಾಡಿದೆ. ಜೊತೆಗೆ ಶ್ರವಣಬೆಳಗೊಳಕ್ಕೆ ಪ್ರವಾಸ ಹೋಗುವವರಿಗೂ ಕೂಡ ರಾಜ್ಯ ಪ್ರವಾಸೋದ್ಯಮ ಇಲಾಖೆ ಖುಷಿ ಸಂಗತಿ ಕೊಟ್ಟಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ನಡೆದ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಒರಿಸ್ಸಾದ ಕೋನಾರ್ಕ್ ಸೂರ್ಯ ದೇವಾಲಯದ ಮಾದರಿಯಲ್ಲಿ ಶ್ರವಣಬೆಳಗೊಳ ಪ್ರವಾಸಿ ತಾಣವನ್ನೂ ಅಭಿವೃದ್ಧಿಗೊಳಿಸಲು ತೀರ್ಮಾನ ಮಾಡಲಾಗಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೆಂದ್ರ ಪ್ರಧಾನ್ ಅವರು ಒರಿಸ್ಸಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆಯನ್ನು ಪ್ರವಾಸಿಗರಿಗೆ ಒದಗಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಇಲ್ಲಿಯೂ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ.

ನಂದಿ ಬೆಟ್ಟಕ್ಕೆ ಶೀಘ್ರ ರೋಪ್‌ವೇ

ನಂದಿ ಬೆಟ್ಟಕ್ಕೆ ಶೀಘ್ರ ರೋಪ್‌ವೇ

ನಂದಿ ಬೆಟ್ಟಕ್ಕೆ ರೋಪ್‌ವೇ ಮಾಡಲು ಕಳೆದ ಹಲವು ದಶಕಗಳಿಂದ ಪ್ರಯತ್ನಗಳು ನಡೆದಿವೆ. ಇದೀಗ ಅದಕ್ಕೆ ಕಾಲ ಕೂಡಿ ಬಂದಿದ್ದು, ನಂದಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಇದೇ ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ನಡೆದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ.

"ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್‌ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು" ಎಂದು ಸಚಿವ ಯೋಗೇಶ್ವರ್ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೋಪ್‌ವೇ ಪ್ರಾತ್ಯಕ್ಷಿತೆ

ನಂದಿ ಬೆಟ್ಟದ ರೋಪ್‌ವೇ ನಿರ್ಮಾಣ ಮಾಡಲು ಖಾಸಗಿ ಕಂಪನಿಗೆ ವಹಿಸಲಾಗಿದೆ. ಪರಿಶೀಲನಾ ಸಭೆಯಲ್ಲಿ ಯೋಜನೆಯ ಕುರಿತು AARCON INFRA ಎಂಬ ಸಂಸ್ಥೆಯ ಪ್ರತಿನಿಧಿಗಳು ಪ್ರಾತ್ಯಕ್ಷಿತೆ ಪ್ರದರ್ಶಿಸಿದರು. ಪ್ರಾತ್ಯಕ್ಷಿಕೆ ನೋಡಿದ ಬಳಿಕ ಸಚಿವ ಸಿ.ಪಿ. ಯೋಗೇಶ್ವರ್ ಮಾತನಾಡಿ, "ರೋಪ್‌ವೇ ನಿರ್ಮಾಣದಲ್ಲಿ ಈ ಖಾಸಗಿ ಸಂಸ್ಥೆಗೆ 51 ವರ್ಷಗಳ ಅನುಭವವಿದೆ. ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ 64 ರೋಪ್‌ವೇಗಳನ್ನು ನಿರ್ಮಾಣ ಮಾಡಿದೆ. ರಾಜ್ಯದ ಪ್ರಪ್ರಥಮ ರೋಪ್‌ವೇ ಯನ್ನು ಪ್ರವಾಸಿಗರಿಗೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಸೂಚಿಸಿದ್ದಾರೆ.

ಕೋನಾರ್ಕ್ ಮಾದರಿಯಲ್ಲಿ ಜೈನ ಪ್ರವಾಸಿ ಸರ್ಕೀಟ್

ಕೋನಾರ್ಕ್ ಮಾದರಿಯಲ್ಲಿ ಜೈನ ಪ್ರವಾಸಿ ಸರ್ಕೀಟ್

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒರಿಸ್ಸಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆಯನ್ನು ಪ್ರವಾಸಿಗರಿಗೆ ಒದಗಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ.

ಅದೇ ರೀತಿ ದಕ್ಷಿಣದ ಜೈನ ಕಾಶಿ ಶ್ರವಣಬೆಳಗೊಳದಲ್ಲಿ ಇದೇ ಮಾದರಿಯಲ್ಲಿ ಬಾಹುಬಲಿಯ ಇತಿಹಾಸವನ್ನು ಹೇಳುವ ಒಂದು ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಥಿಯೇಟರ್‌ನಲ್ಲಿ ಪ್ರದರ್ಶಿಸಲಾಗುವುದು. ನಂತರ ಪ್ರವಾಸಿಗರು ಗೋಮಟೇಶ್ವರ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಪ್ರವಾಸಿಗರಿಗೆ ಬಾಹುಬಲಿಯ ಸಂಪೂರ್ಣ ಇತಿಹಾಸದ ಮಾಹಿತಿಯನ್ನು ನೀಡಲಾಗುವುದು ಎಂದು ಸಭೆಯಲ್ಲಿ ಚರ್ಚೆ ನಡೆದು ತೀರ್ಮಾನ ಮಾಡಲಾಗಿದೆ.

ಹೈಟೆಕ್ ಹಾಥ್ ವೇ...

ಹೈಟೆಕ್ ಹಾಥ್ ವೇ...

"ರಾಜ್ಯ ವಸ್ತುಪ್ರದರ್ಶನ ಪ್ರಾಧಿಕಾರದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಅತ್ಯಾಧುನಿಕವಾದ ಕಲೆ, ಸಂಸ್ಕೃತಿ, ಜಾನಪದ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಥ್‌ವೇ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು" ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಯೋಗೇಶ್ವರ್ ಸೂಚಿಸಿದ್ದಾರೆ.

"ಮೂರು ಹಂತಗಳಲ್ಲಿ ಈ ಬೃಹತ್ ಹಾಥ್‌ವೇ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಅತೀ ಶೀಘ್ರದಲ್ಲಿ ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಂದಾಜು ನೂರು ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ" ಎಂದು ಸಚಿವ ಸಿಪಿ ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Recommended Video

ಪ್ರತಿಯೊಬ್ಬರಿಗೂ ಕೈಲಾದ ಸಹಾಯ ಮಾಡುತ್ತಿರುವ ಬಿಜೆಪಿ ಶಾಸಕ | Renukacharya | Oneindia Kannada
ದ ಇಂಡಿಯಾ ಎಕ್ಸ್‌ಪೋ 2023

ದ ಇಂಡಿಯಾ ಎಕ್ಸ್‌ಪೋ 2023

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲು ಬಂಡವಾಳ ಆರ್ಕಷಿಸುವ ಸಂಬಂಧ THE INDIA EXPO-2023 ಬೃಹತ್ ಮೇಳವನ್ನು ಆಯೋಜಿಸಲು ಕಾಯೋನ್ಮುಖರಾಗಬೇಕು. ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ವಿಸ್ತರಣೆಗೆ ಬಹಳಷ್ಟು ಅವಕಾಶಗಳಿವೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿ ದೇಶ ವಿದೇಶಗಳ ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರವಾಸಿ ಮೇಳವನ್ನು ಏರ್ಪಡಿಸುವ ಮೂಲಕ ಬಂಡವಾಳವನ್ನು ಆಕರ್ಷಿಸಬೇಕು ಎಂದು ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ. THE INDIA EXPO-2023 ಕಂಪನಿ ಪ್ರವಾಸೋದ್ಯಮ ಮೇಳದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿತು.

English summary
Tourism Department has decided to construct a ropeway to Nandi Hills.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X